ಪವಿತ್ರಗ್ರಂಥದಲ್ಲಿನ ಪರಿಶುದ್ದಾತ್ಮನ ಪುನರುಜ್ಜೀವನ

ಕೀರ್ತನೆಗಳು 85: 6ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ ನೀನು ನಮ್ಮನ್ನು ಚೈತನ್ಯ ಪಡಿಸುವದಿಲ್ಲವೋ?

ಪ್ರಸ್ತಾವನೆ

ಪವಿತ್ರ ಗ್ರಂಥದ ಹಳೆ ಒಡಂಬಡಿಕೆಯಲ್ಲಿ ಅನೇಕ ಸನ್ನಿವೇಶಗಳು ನಮೂದಿಸಲಾಗಿದೆ, ಹೇಗೆ ದೇವರ ಆರಾಧನೆಯೂ ಮತ್ತು ಆತ್ಮೀಕ ಜೀವನದಲ್ಲಿ ಪುನರುಜ್ಜೀವನ ಉಂಟಾಗಿದೆ ಎಂದು

ಹೊಸ ಒಡಂಬಡಿಕೆಯಲ್ಲು ಅನೇಕ ಸ್ಥಳಗಳಲ್ಲಿ ದೇವರ ಉಜ್ಜೀವನದ ಮೂಲಕ ,ಆತ್ಮೀಕ ಜೀವನದಲ್ಲಿ ಬೆಳವಣಿಗೆಯಾದದ್ದು ನಮೂದಿಸಲ್ಪಟ್ಟಿದೆ

ಪುನರುಜ್ಜೀವನ vs  ಎಚ್ಚರಿಕೆ ”  ಎಂದರೆ ಏನು ?

 “ಪುನರುಜ್ಜೀವನ” ವೆಂದರೆ ಬೈಬಲಿನಲ್ಲಿ, ದೇವರ ಮಕ್ಕಳ ಆಧ್ಯಾತ್ಮಿಕ ಜೀವನದಲ್ಲಿ, ದೇವರಿಂದಾಗುವ ಬದಲಾವಣೆ .ಕೆಲವೊಂದು ವೇಳೆಗಳಲ್ಲಿ , ಯರಾದರೊಬ್ಬರು ಮುಖಂಡರ , ಮನೆಯ ಮುಖ್ಯಸ್ಥನ ಮೂಲಕ  ದೇವರ ಮೇಲಿನ ಭಕ್ತಿಯನ್ನು ನವೀಕರಿಸುವುದು , ಯಾಕೋಬಿನಂತೆ.

ಜಾಗೃತಿ(ಎಚ್ಚರಿಕೆ)

ಇತ್ತೀಚಿನ ದಿನಗಳಲ್ಲಿ ಈ ಶಬ್ದವು ಸಾಮಾನ್ಯವಾಗಿ ಉಪಯೋಗಿಸುತ್ತಾರೆ, ಹೊಸ ಹಂತಕ್ಕೆ ಹೋಗುವಾಗಲೂ,ಆದರೆ ನಾವು ಅದನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳುತ್ತೇವೆ.

ಉದಾಹರಣಗೆ : ಯೋನನ ಭೋದನೆಗಳಿಂದ ,ನಿನವೆ ಪಟ್ಟಣದವರು ಮಾನಸಾಂತರ ಗೊಂಡಿದ್ದು , ಅದನ್ನು ಎಚ್ಚರಿಕೆ ಎಂದು ಹೇಳಲಾಗಿದೆ ,ಬದಲಿಗೆ ಪುನರುಜ್ಜೀವನ ಎಂದು ಹೇಳಲಿಲ್ಲ  ಯಾಕೆಂದರೆ ಅದು ದೇವ ಭಯ ಮತ್ತು ದೇವ ಜ್ಞಾನವಿಲ್ಲದ ಜನರಿಗೆ ನಡೆದದ್ದು

ಹೇಗೆ ಪಾಶ್ಚಾತ್ಯ ಕ್ರೈಸ್ತರ ದೇಶಗಳಲ್ಲಿ ಹಾಗೂ ನಮ್ಮ ದೇಶದಲ್ಲೂ ಪವಿತ್ರಾತ್ಮನ ಉಜ್ಜೀವನ ನಮ್ಮ ಸಭೆಯಲ್ಲಿ ಮಾತ್ರ ,ಆದರೆ ಪವಿತ್ರಾತ್ಮನ ಕುರಿತಾದ ಎಚ್ಚರಿಕೆ ದೇಶಕ್ಕೆ ಕೋರುತ್ತೇವೆ,

ಆತ್ಮದಲ್ಲಿನ ಎಚ್ಚರಿಕೆ ‘ಮತ್ತೆ ಹುಟ್ಟವ ಅನುಭವ’ ಎಂದೆಣಿಸಬಹುದು

ಎಫೆಸದವರಿಗೆ 2 :4ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು 

5 ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.) 

6 ಬದುಕಿಸಿದ್ದಲ್ಲದೆ ತಾನು ಕ್ರಿಸ್ತ ಯೇಸುವಿನಲ್ಲಿ ನಮಗೆ ಮಾಡುವ ಉಪಕಾರದ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು

ಯೋಹಾನ 6 :63 ಬದುಕಿಸುವಂಥದು ಆತ್ಮವೇ; ಮಾಂಸವು ಯಾವದಕ್ಕೂ ಬರುವದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಅವೆ.

ಕೊಲೊಸ್ಸೆಯವರಿಗೆ 2 :13 ಅಪರಾಧಗಳನ್ನು ಮಾಡುವದರಿಂದಲೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ಸಹ ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ. 

ಯಾಕೋಬ

ಯಾಕೋಬಿನ ಮೊದಲ ಹೋರಾಟ : ಬೇತೇಲಿನಲ್ಲಿ ಕನಸು

ಆದಿಕಾಂಡ 28 :10 ಯಾಕೋಬನು ಖಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು. 

11 ಅವನು ಹೋಗುತ್ತಿರಲು ಒಂದು ಸ್ಥಳಕ್ಕೆ ಸೇರಿದಾಗ ಹೊತ್ತು ಮುಣುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆಗಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು. 

12 ಆ ರಾತ್ರಿ ಅವನು ಕನಸುಕಂಡನು. ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೇಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು; ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು. 

13 ಇದಲ್ಲದೆ ಯೆಹೋವನು ಅವನ ಬಳಿಯಲ್ಲಿ ನಿಂತು – ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಯೆಹೋವನು. ನೀನು ಮಲಗಿಕೊಂಡಿರುವ ಈ ದೇಶವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ. 

14 ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವದು; ನೀನು ಪೂರ್ವಪಶ್ಚಿಮದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನ ಮೂಲಕವೂ ನಿನ್ನ ಸಂತತಿಯ ಮೂಲಕವೂ ಭೂಮಿಯ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು. 

15 ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು.

16 ಯಾಕೋಬನು ನಿದ್ದೆಯಿಂದ ಎಚ್ಚತ್ತು – ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ಇದ್ದಾನೆ;

17 ಅದು ನನಗೆ ತಿಳಿಯದೆ ಹೋಯಿತು ಅಂದುಕೊಂಡು ಭಯಪಟ್ಟವನಾಗಿ – ಈ ಸ್ಥಳವು ಎಷ್ಟೋ ಭಯಂಕರವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದು ಪರಲೋಕದ ಬಾಗಿಲು ಎಂದು ಹೇಳಿದನು.

18 ಹೊತ್ತಾರೆ ಅವನು ಎದ್ದಾಗ ತಾನು ತಲೆಗಿಂಬಿಗೆ ಇಟ್ಟುಕೊಂಡಿದ್ದ ಕಲ್ಲನ್ನು ಕಂಬವಾಗಿ ನಿಲ್ಲಿಸಿ ಅದರ ತುದಿಯಲ್ಲಿ ಎಣ್ಣೇ ಹೊಯಿದನು. 

19 ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಅಲ್ಲಿರುವ ಊರಿಗೆ ಮೊದಲು ಲೂಜ್ ಎಂದು ಹೆಸರಿತ್ತು. 

20 ಯಾಕೋಬನು ಅಲ್ಲಿ – ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ಆಹಾರವನ್ನೂ ಉಡುವದಕ್ಕೆ ವಸ್ತ್ರವನ್ನೂ ಕೊಟ್ಟು 

21 ತಿರಿಗಿ ನನ್ನನ್ನು ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನ್ನ ದೇವರಾಗಿರುವನು.

22 ಮತ್ತು ನಾನು ಕಂಬವಾಗಿ ನಿಲ್ಲಿಸಿರುವ ಈ ಕಲ್ಲು ದೇವರ ಮನೆಯಾಗುವದು. ಇದಲ್ಲದೆ ನಿನ್ನಿಂದ ನನಗೆ ಬರುವ ಎಲ್ಲಾ ಆಸ್ತಿಯಲ್ಲಿ ಹತ್ತರಲ್ಲೊಂದು ಪಾಲನ್ನು ನಿನಗೆ ಸಮರ್ಪಿಸುವೆನೆಂಬದಾಗಿ ಮಾತುಕೊಡುತ್ತೇನೆ ಎಂದು ಹರಕೆಮಾಡಿಕೊಂಡನು.

ಯಾಕೋಬಿನ ಎರಡನೇ ಹೋರಾಟ : ಯಾಕೋಬನ ದೇವರೊಂದಿಗೆ ಕುಸ್ತಿ

ಆದಿಕಾಂಡ 32 : 22 ಆ ರಾತ್ರಿ ಅವನು ತನ್ನ ಇಬ್ಬರು ಹೆಂಡರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು. 

23 ಅವರನ್ನೂ ತನ್ನ ಆಸ್ತಿಯೆಲ್ಲವನ್ನೂ ದಾಟಿಸಿದ ಮೇಲೆ 

24 ಯಾಕೋಬನು ಒಂಟಿಗನಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.

25 ಆ ಪುರುಷನು ತಾನು ಗೆಲ್ಲದೆ ಇರುವದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು. 

26 ಆ ಪುರುಷನು – ನನ್ನನ್ನು ಬಿಡು, ಬೆಳಗಾಗುತ್ತದೆ ಅನ್ನಲು, ಯಾಕೋಬನು – ನೀನು ನನ್ನನ್ನು ಆಶೀರ್ವದಿಸಿದ ಹೊರತು ನಿನ್ನನ್ನು ಬಿಡುವದಿಲ್ಲ ಅಂದನು. 

27ಆ ಪುರುಷನು – ನಿನ್ನ ಹೆಸರೇನು ಎಂದು ಕೇಳಿದ್ದಕ್ಕೆ ಅವನು – ಯಾಕೋಬನು ಅಂದಾಗ, 

28 ಅವನು ಯಾಕೋಬನಿಗೆ – ಇನ್ನು ಮೇಲೆ ನೀನು ಯಾಕೋಬನೆನ್ನಿಸಿಕೊಳ್ಳುವದಿಲ್ಲ; ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದ್ದರಿಂದ ನಿನಗೆ ಇಸ್ರಾಯೇಲೆಂದು ಹೆಸರುಂಟಾಗುವದು ಎಂದು ಹೇಳಿದನು. 

29 ಯಾಕೋಬನು – ನಿನ್ನ ಹೆಸರನ್ನು ನನಗೆ ತಿಳಿಸಬೇಕು ಸ್ವಾಮೀ ಅಂದಾಗ ಆ ಪುರುಷನು – ನನ್ನ ಹೆಸರನ್ನು ವಿಚಾರಿಸುವದೇಕೆ ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು. 

30 ಯಾಕೋಬನು – ನಾನು ದೇವರನ್ನೇ ಪ್ರತ್ಯಕ್ಷವಾಗಿ ನೋಡಿದ್ದೇನಲ್ಲಾ; ಆದರೂ ನನ್ನ ಪ್ರಾಣ ಉಳಿದದೆ ಅಂದುಕೊಂಡು ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು. 

31 ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು. 

32 ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವದಿಲ್ಲ.

ಪುನರುಜ್ಜೀವನ: ಯಾಕೋಬನು ಮತ್ತೆ ಬೆತೇಲಿಗೆ ಬರುವುದು:ಯಜ್ಞವೇದಿ ಕಟ್ಟುವುದು

ಆದಿಕಾಂಡ 35: 1 ದೇವರು ಯಾಕೋಬನಿಗೆ – ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾಹತ್ತಿ ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ; ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು ಎಂದು ಹೇಳಿದನು. 

2 ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ – ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ. 

3 ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ ಎಂದು ಹೇಳಿದನು. 

4 ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಾಕೋಬನಿಗೆ ಒಪ್ಪಿಸಲು ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು. 

5 ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ ದೇವರು ಹುಟ್ಟಿಸಿದ ಭಯವು ಸುತ್ತುಮುತ್ತಣ ಊರುಗಳಲ್ಲಿ ಇದ್ದದರಿಂದ ಆ ಊರುಗಳವರು ಯಾಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ. 

6 ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್‍ದೇಶದಲ್ಲಿರುವ ಬೇತೇಲೆಂಬ ಲೂಜಿಗೆ ಮುಟ್ಟಿದರು. 

7 ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋಗಲು ದೇವರು ಅಲ್ಲೇ ಅವನಿಗೆ ಪ್ರತ್ಯಕ್ಷನಾದದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.

8 ಅಲ್ಲಿ ರೆಬೆಕ್ಕಳ ದಾದಿಯಾದ ದೆಬೋರಳು ಸತ್ತುಹೋಗಲು ಅವರು ಆಕೆಗೆ ಬೇತೇಲಿನ ತಗ್ಗಿನಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿ ಅದಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.

9 ಯಾಕೋಬನು ಪದ್ದನ್ಅರಾಮಿನಿಂದ ಬಂದಾಗ ದೇವರು ತಿರಿಗಿ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು. 

10 ದೇವರು ಅವನಿಗೆ – ನಿನ್ನ ಹೆಸರು ಯಾಕೋಬನಲ್ಲವೇ; ಇನ್ನು ಮೇಲೆ ನೀನು ಯಾಕೋಬನೆನಿಸಿಕೊಳ್ಳದೆ ಇಸ್ರಾಯೇಲನೆನಿಸಿಕೊಳ್ಳಬೇಕು ಎಂದು ಹೇಳಿ ಅವನಿಗೆ ಇಸ್ರಾಯೇಲ ಎಂದು ಹೆಸರಿಟ್ಟನು. 

 

ಪ್ರವಾದಿ ಸಾಮುವೇಲನ ಮೂಲಕ ಇಸ್ರಾಯೇಲಿನಲ್ಲಿ ಪುನರುಜ್ಜೀವನ

1 ಸಮುವೇಲನು 7:1ಆಗ ಕಿರ್ಯತ್ಯಾರೀಮಿನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು.

2 ಮಂಜೂಷವು ಕಿರ್ಯತ್ಯಾರೀಮಿಗೆ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷಗಳು ಕಳೆದುಹೋದವು; ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ಯೆಹೋವನನ್ನೇ ಹಂಬಲಿಸುತ್ತಿದ್ದರು. 

3 ಆಗ ಸಮುವೇಲನು ಅವರಿಗೆ – ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರಿಗಿಕೊಂಡಿರುವದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ; ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು ಅಂದನು. 

4 ಹಾಗೆಯೇ ಇಸ್ರಾಯೇಲ್ಯರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಯೆಹೋವನೊಬ್ಬನನ್ನೇ ಸೇವಿಸತೊಡಗಿದರು. 

5 ಸಮುವೇಲನು ತಿರಿಗಿ ಅವರಿಗೆ – ಇಸ್ರಾಯೇಲ್ಯರೆಲ್ಲರೂ ಮಿಚ್ಪೆಯಲ್ಲಿ ಕೂಡಿ ಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು ಅನ್ನಲು 

6 ಅವರು ಅಲ್ಲಿ ಕೂಡಿಬಂದು ನೀರು ಸೇದಿ ಯೆಹೋವನ ಮುಂದೆ ಹೊಯ್ದು ಆ ದಿವಸ ಉಪವಾಸವಿದ್ದು – ನಿನಗೆ ದ್ರೋಹಿಗಳಾಗಿದ್ದೇವೆಂದು ಆತನಿಗೆ ಅರಿಕೆ ಮಾಡಿದರು. ಸಮುವೇಲನು ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.

7 ಇಸ್ರಾಯೇಲ್ಯರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆಂಬದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ಪ್ರಭುಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟರು. ಇದನ್ನು ತಿಳಿದ ಇಸ್ರಾಯೇಲ್ಯರು ಬಹಳವಾಗಿ ಭಯಪಟ್ಟು ಸಮುವೇಲನಿಗೆ – 

8 ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ ಅಂದರು. 

9 ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು. ಹೇಗಂದರೆ – 

10 ಸಮುವೇಲನು ಯಜ್ಞವನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕೋಸ್ಕರ ಸಮೀಪಿಸಲಾಗಿ ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲ್ಯರಿಗೆ ಸೋತು ಓಡಿಹೋಗುವಂತೆ ಮಾಡಿದನು. 

11 ಇಸ್ರಾಯೇಲ್ಯರಾದರೋ ಮಿಚ್ಪೆಯಿಂದ ಹೊರಟು ಹಿಂದಟ್ಟಿ ಬೇತ್ಕರಿನ ತಗ್ಗಿನವರೆಗೆ ಅವರನ್ನು ಹತಮಾಡಿದರು. 

12 ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ – ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದನೆಂದು ಹೇಳಿ ಅದಕ್ಕೆ ಎಬೆನೆಜೆರೆಂದು ಹೆಸರಿಟ್ಟನು. 

13 ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರಿಗಿ ಇಸ್ರಾಯೇಲ್ಯರ ಪ್ರಾಂತದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು. 

14 ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನವರೆಗೆ ಇಸ್ರಾಯೇಲ್ಯರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲ್ಯರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲ್ಯರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲ್ಯರಿಗೂ ಅಮೋರಿಯರಿಗೂ ಸಮಾಧಾನವಿತ್ತು.

15 ಸಮುವೇಲನು ಜೀವದಿಂದಿರುವವರೆಗೆ ಇಸ್ರಾಯೇಲ್ಯರನ್ನು ಪಾಲಿಸುತ್ತಿದ್ದನು. 

16 ಅವನು ಇಸ್ರಾಯೇಲ್ಯರ ನ್ಯಾಯಗಳನ್ನು ತೀರಿಸುವದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರಿಗಿ ಬರುತ್ತಿದ್ದನು. 

17 ಅಲ್ಲಿ ಅವನ ಸ್ವಂತ ಮನೆಯಿದ್ದದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರನ್ನು ಪಾಲಿಸುತ್ತಿದ್ದನು.

ಸಾಮುವೇಲ ಒಬ್ಬ ಪ್ರಾರ್ಥನೆಭರಿತ ಮನುಷ್ಯ

ಕೀರ್ತನೆಗಳು 99: 6 ಆತನ ಯಾಜಕರಲ್ಲಿ ಮೋಶೆ ಆರೋನರೂ ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿಕೊಂಡಾಗೆಲ್ಲಾ ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.

7 ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.

8 ನಮ್ಮ ಯೆಹೋವದೇವರೇ, ಅವರಿಗೆ ಉತ್ತರಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ ಕ್ಷಮಿಸುವ ದೇವರಾಗಿದ್ದಿ.

9 ನಮ್ಮ ಯೆಹೋವದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವದೇವರು ಪರಿಶುದ್ಧನು.

ಮೌಂಟ್ ಕಾರ್ಮೆಲೆನಲ್ಲಿ ಪ್ರವಾದಿ ಎಲೀಯನ ಮೂಲಕ ಪುನರುಜ್ಜೀವನ

 1 ಅರಸುಗಳು 18:17ಅವನನ್ನು ಕಂಡ ಕೂಡಲೆ – ಇಸ್ರಾಯೇಲ್ಯರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ ಅಂದನು. 

18  ಅದಕ್ಕೆ ಅವನು – ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು. 

19 ನೀನು ಈಗ ಎಲ್ಲಾ ಇಸ್ರಾಯೇಲ್ಯರನ್ನೂ ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನೂ ಅಶೇರದೇವತೆಯ ನಾನೂರು ಮಂದಿ ಪ್ರವಾದಿಗಳನ್ನೂ ಕರ್ಮೆಲ್‍ಬೆಟ್ಟಕ್ಕೆ ಕರಿಸು ಎಂದು ಹೇಳಿದನು. 

20 ಅಹಾಬನು ಇಸ್ರಾಯೇಲ್ಯರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರಿಸಿದನು.

21 ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ – ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವದನ್ನು ಕಂಡು 

22 ಅವನು ತಿರಿಗಿ ಅವರಿಗೆ – ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಮಂದಿ ಇದ್ದಾರೆ. 

23 ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ, ಅವುಗಳಲ್ಲೊಂದನ್ನು ಆರಿಸಿಕೊಂಡು ಕಡಿದು ತುಂಡುಮಾಡಿ ಕಟ್ಟಿಗೆಯ ಮೇಲಿಡಲಿ; ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿ ಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು. 

24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ ಅಂದನು. ಎಲ್ಲಾ ಜನರೂ – ಸರಿ, ನೀನು ಹೇಳಿದಂತೆಯೇ ಆಗಲಿ ಎಂದು ಉತ್ತರಕೊಟ್ಟರು. 

25 ಆಗ ಅವನು ಬಾಳನ ಪ್ರವಾದಿಗಳಿಗೆ – ನೀವು ಹೆಚ್ಚು ಮಂದಿ ಇರುವದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು ಅಂದನು. 

26 ಅವರು ತರಲ್ಪಟ್ಟ ಹೋರಿಗಳಲ್ಲೊಂದನ್ನು ತೆಗೆದುಕೊಂಡು ಸಿದ್ಧಪಡಿಸಿ ತಮ್ಮ ದೇವರಾದ ಬಾಳನ ಹೆಸರು ಹೇಳಿ – ಬಾಳನೇ, ನಮಗೆ ಕಿವಿಗೊಡು ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ; ಅವರು ವೇದಿಯ ಸುತ್ತಲು ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ. 

27 ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯಮಾಡಿ – ಗಟ್ಟಿಯಾಗಿ ಕೂಗಿರಿ; ಅವನು ದೇವರಾಗಿರುತ್ತಾನಲ್ಲಾ! ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು ಎಂದು ಹೇಳಿದನು. 

28 ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ಧತಿಯ ಪ್ರಕಾರ ಈಟಿಕತ್ತಿಗಳಿಂದ ರಕ್ತಸೋರುವಷ್ಟು ಗಾಯ ಮಾಡಿಕೊಂಡರು. 29ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ, ಅವರನ್ನು ಲಕ್ಷಿಸಲಿಲ್ಲ

30 ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿನ ಯೆಹೋವವೇದಿಯನ್ನು ತಿರಿಗಿ ಕಟ್ಟಿಸಿದನು. 

31 ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು

 32 ಯೆಹೋವನ ಹೆಸರಿಗೋಸ್ಕರ ಒಂದು ವೇದಿಯನ್ನು ಕಟ್ಟಿಸಿ ಅದರ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗೆಸಿ ಕಾಲುವೆಮಾಡಿಸಿದನು. 

33 ಇದಲ್ಲದೆ ಕಟ್ಟಿಗೆಯನ್ನು ವೇದಿಯ ಮೇಲೆ ಕ್ರಮಪಡಿಸಿ ಹೋರಿಯನ್ನು ವಧಿಸಿ ತುಂಡುಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ – ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ ಎಂದು ಆಜ್ಞಾಪಿಸಿದನು. 

34 ಅವರು ತೆಗೆದುಕೊಂಡು ಬರಲು ಇನ್ನೊಂದು ಸಾರಿ ತನ್ನಿರಿ ಎಂದು ಹೇಳಿದನು. ತಿರಿಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು. 

35 ನೀರು ವೇದಿಯ ಸುತ್ತಲೂ ಹರಿಯಿತು; ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.

36 ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ವೇದಿಯ ಹತ್ತಿರ ಬಂದು – ಅಬ್ರಹಾಮ್ ಇಸಾಕ್ ಇಸ್ರಾಯೇಲ್ಯರ ದೇವರೇ, ಯೆಹೋವನೇ, ನೀನೋಬ್ಬನೇ ಇಸ್ರಾಯೇಲ್ಯರ ದೇವರಾಗಿರುತ್ತೀ ಎಂಬದನ್ನೂ ನಾನು ನಿನ್ನ ಸೇವಕನಾಗಿರುತ್ತೇನೆಂಬದನ್ನೂ ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬದನ್ನೂ ಈಹೊತ್ತು ತೋರಿಸಿ ಕೊಡು. 

37 ಕಿವಿಗೊಡು; ಯೆಹೋವನೇ, ಕಿವಿಗೊಡು; ಯೆಹೋವನಾದ ನೀನೊಬ್ಬನೇ ದೇವರೂ ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ಆಗಿರುತ್ತೀ ಎಂಬದನ್ನು ಇವರಿಗೆ ತಿಳಿಯಪಡಿಸು ಎಂದು ಪ್ರಾರ್ಥಿಸಿದನು. 

38 ಕೂಡಲೆ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ ಕಟ್ಟಿಗೆಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು. 

39 ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು – ಯೆಹೋವನೇ ದೇವರು, ಯೆಹೋವನೇ ದೇವರು ಎಂದು ಕೂಗಿದರು. 

40 ಆಗ ಎಲೀಯನು ಅವರಿಗೆ – ಬಾಳನ ಪ್ರವಾದಿಗಳೆಲ್ಲರನ್ನೂ ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್‍ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.

41 ಅನಂತರ ಅವನು ಅಹಾಬನಿಗೆ – ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ ಅಂದನು. 

42 ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು. 

43 ಅವನು ತನ್ನ ಸೇವಕನಿಗೆ – ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು ಏನೂ ತೋರುವದಿಲ್ಲ ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು. 

44 ಏಳನೆಯ ಸಾರಿ ಸೇವಕನು – ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಲಿದೆ ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ – ನೀನು ಹೋಗಿ ಅಹಾಬನಿಗೆ – ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು ಎಂದು ಹೇಳು ಅಂದನು. 

45 ತುಸುಹೊತ್ತಿನಲ್ಲಿಯೇ ಆಕಾಶವು ಮೋಡ ಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕೂತುಕೊಂಡು ಇಜ್ರೇಲಿಗೆ ಹೋದನು. 

46 ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.

ಪ್ರವಾದಿ ಆಸಾನ ಮೂಲಕ ಪುನರುಜ್ಜೀವನ , ಯೂದರ ಅರಸ

2 ಪೂರ್ವಕಾಲವೃತ್ತಾಂತ 14:1 ಅಬೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದಲ್ಲಿ ದೇಶದಲ್ಲಿ ಹತ್ತು ವರುಷ ಸಮಾಧಾನವಿತ್ತು. 

2 ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು. 

3 ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡಿಸಿ ಅಶೇರವಿಗ್ರಹಸ್ತಂಭಗಳನ್ನು ಕಡಿಸಿಬಿಟ್ಟು ಯೆಹೂದ್ಯರಿಗೆ – 

4 ನೀವು ನಿಮ್ಮ ಪಿತೃಗಳ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರವಿಧಿಗಳನ್ನು ಕೈಕೊಳ್ಳಿರಿ ಎಂದು ಆಜ್ಞಾಪಿಸಿದನು. 

5 ಯೆಹೂದದ ಎಲ್ಲಾ ಪಟ್ಟಣಗಳೊಳಗಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿದನು. ಇವನ ಆಳಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು. 

6 ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಆ ವರುಷಗಳಲ್ಲಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. 

7 ಇವನು ಯೆಹೂದ್ಯರಿಗೆ – ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣಗೋಡೆ ಬುರುಜು ಬಾಗಲು ಅಗುಳಿ ಇವುಗಳಿಂದ ಭದ್ರಪಡಿಸೋಣ ಅನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿತೀರಿಸಿದರು. 

8 ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯರೂ ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆಗಿರುವ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರೂ ರಣವೀರರು.

9 ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು. 

10 ಆಸನು ಅವನೆದುರಿಗೆ ಹೋದನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬೈಲಿನಲ್ಲಿ ಉಭಯರೂ ವ್ಯೂಹಕಟ್ಟಿದರು. 

11 ಆಸನು ತನ್ನ ದೇವರಾದ ಯೆಹೋವನಿಗೆ – ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು 

12 ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯಪಡಿಸಿದನು. 

13 ಕೂಷ್ಯರು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ಚೂರು ಚೂರಾದರು. ಇಸ್ರಾಯೇಲ್ಯರಿಗೆ ಅಪರಿಮಿತವಾದ ಕೊಳ್ಳೆ ಸಿಕ್ಕಿತು. 

14 ಇದಲ್ಲದೆ ಅವರು ಯೆಹೋವನ ಭಯಕ್ಕೆ ಒಳಗಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ವಶಮಾಡಿಕೊಂಡು ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲಿ ದೊಡ್ಡ ಕೊಳ್ಳೆ ಸಿಕ್ಕಿತು. 

15 ದನಕಾಯುವವರ ಗುಡಾರಗಳ ಮೇಲೆ ಬಿದ್ದು ಎಷ್ಟೋ ಒಂಟೆ ಕುರಿಗಳನ್ನು ಯೆರೂಸಲೇಮಿಗೆ ಹೊಡೆದುಕೊಂಡು ಬಂದರು.

ಆಸ ಸಂಸ್ಥಾಪನೆಮಾಡಿದ್ದು

2 ಪೂರ್ವಕಾಲವೃತ್ತಾಂತ 15:1 ಆಗ ಓಬೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದದರಿಂದ 

2 ಅವನು ಆಸನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ – ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿರಿ. ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟು ಬಿಡುವನು. 

3 ಇಸ್ರಾಯೇಲ್ಯರಿಗೆ ಬಹುಕಾಲದವರೆಗೆ ನಿಜವಾದ ದೇವರೂ ಬೋಧಿಸುವ ಯಾಜಕರೂ ಧರ್ಮಶಾಸ್ತ್ರವೂ ಇರಲಿಲ್ಲ. 

4 ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.

5 ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವದಕ್ಕೆ ಆಗುತ್ತಿರಲಿಲ್ಲ; ದೇಶ ನಿವಾಸಿಗಳೆಲ್ಲರೂ    ಕಳವಳಗೊಂಡಿದ್ದರು. 

6 ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರದ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದನು. ನೀವಾದರೋ ಸ್ಥಿರಚಿತ್ತರಾಗಿರಿ; 

7 ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು ಎಂದು ಹೇಳಿದನು.

8 ಆಸನು ಓಬೇದನ [ಮಗನಾದ ಅಜರ್ಯನ] ಈ ಪ್ರವಾದನೋಕ್ತಿಗಳನ್ನು ಕೇಳಿದಾಗ ಧೈರ್ಯಗೊಂಡು ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದುಹಾಕಿ ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಆತನ ಯಜ್ಞವೇದಿಯನ್ನು ಜೀರ್ಣೋದ್ಧಾರಮಾಡಿಸಿದನು.

 9 ಆಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವದನ್ನು ನೋಡಿ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದದೇಶದಲ್ಲಿ ಇಳಕೊಂಡಿದ್ದ ಎಫ್ರಾಯೀಮ್ ಮನಸ್ಸೆ ಸಿಮೆಯೋನ್ ಕುಲಗಳವರನ್ನೂ ಕರಿಸಿಕೊಂಡನು. 

10 ಅವರು ಆಸನ ಆಳಿಕೆಯ ಹದಿನೈದನೆಯ ವರುಷದ ಮೂರನೆಯ ತಿಂಗಳಲ್ಲಿ ಯೆರೂಸಲೇಮಿನಲ್ಲಿ ಕೂಡಿಬಂದು 

11 ಯೆಹೋವನಿಗೋಸ್ಕರ ಆ ದಿವಸ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಯಜ್ಞ ಮಾಡಿದರು. 

12 ಇದಲ್ಲದೆ ಅವರು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪಿತೃಗಳ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ 

13 ತಮ್ಮಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲುವೆವೆಂದೂ 

14 ತುತೂರಿಕೊಂಬುಗಳನ್ನೂದಿಸಿ ದೊಡ್ಡ ಆರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು. 

15 ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾಕಡೆಗಳಲ್ಲಿಯೂ ಸಮಾಧಾನವನ್ನನುಗ್ರಹಿಸಿದನು. 

16 ಅರಸನಾದ ಆಸನ ತಾಯಿ ಮಾಕಳು ಅಶೇರದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿದದರಿಂದ ಅವನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿಸಿ ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರುಚೂರು ಮಾಡಿ ಸುಡಿಸಿದನು. 

17 ಇಸ್ರಾಯೇಲ್‍ಪ್ರಾಂತದಲ್ಲಿದ್ದ ಪೂಜಾಸ್ಥಳಗಳು ತೆಗೆದುಹಾಕಲ್ಪಡದಿದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಚಿತ್ತನಾಗಿ ನಡೆದುಕೊಂಡನು. 

18 ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು. 

19 ಅವನ ಆಳಿಕೆಯ ಮೂವತ್ತೈದನೆಯ ವರುಷದವರೆಗೂ ಯುದ್ಧವಿರಲಿಲ್ಲ.

ಯೋನನ ಮುಖಾಂತರ ಆತ್ಮೀಕ ಜಾಗೃತಿ

 ಯೋನನು ನಿನವೆ ಪಟ್ಟಣಕ್ಕೆ ಹೋದದ್ದು

ಯೋನ 3:1 ಅನಂತರ ಯೆಹೋವನು ಯೋನನಿಗೆ – 

2 ನೀನೆದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಪ್ರಕಟಿಸುವದನ್ನು ಅಲ್ಲಿ ಸಾರು ಎಂದು ಎರಡನೆಯ ಸಲ ಅಪ್ಪಣೆಮಾಡಿದನು. 

3 ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾ ಪಟ್ಟಣವಾಗಿತ್ತು. 

4 ಯೋನನು ಪಟ್ಟಣದಲ್ಲಿ ಸೇರಿ ಮೊದಲು ಒಂದು ದಿವಸದ ಪ್ರಯಾಣದಷ್ಟು ದೂರ ನಡೆದು – ನಾಲ್ವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವದು ಎಂದು ಸಾರ ತೊಡಗಿದನು.

 5 ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಗೊತ್ತುಮಾಡಿ ಸಾರಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು. 

6 ಯೋನನ ಪ್ರಕಟನೆಯು ನಿನೆವೆಯ ಅರಸನಿಗೆ ಮುಟ್ಟಲು ಅವನು ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತನು. 

7 ಇದಲ್ಲದೆ ಅವನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನಾಗಿ – ಜನ ಪಶು ಮಂದೆ ಹಿಂಡು ಇವುಗಳು ಏನೂ ರುಚಿನೋಡದಿರಲಿ; ತಿನ್ನದಿರಲಿ, ಕುಡಿಯದಿರಲಿ; 

8 ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರು ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗವನ್ನೂ ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದುಬಿಡಲಿ. 

9 ದೇವರು ಒಂದು ವೇಳೆ ಮನಮರುಗಿ ಹಿಂದಿರುಗಿ ತನ್ನ ಉಗ್ರಕೋಪವನ್ನು ತೊಲಗಿಸಾನು, ನಾವು ನಾಶವಾಗದೆ ಉಳಿದೇವು ಎಂಬದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು. 

10 ದೇವರು ನಿನೆವೆಯವರ ಕಾರ್ಯಗಳನ್ನು ನೋಡಿ ಅವರು ತಮ್ಮ ದುರ್ಮಾರ್ಗದಿಂದ ತಿರುಗಿಕೊಂಡರೆಂದು ತಿಳಿದು ಮನಮರುಗಿ ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.

ಯೆಹೋಷಾಫಾಟನ ಪುನರುಜ್ಜೀವನ

 2 ಪೂರ್ವಕಾಲವೃತ್ತಾಂತ 19:1ಯೆಹೂದದ ಅರಸನಾದ ಯೆಹೋಷಾಫಾಟನು ಸುರಕ್ಷಿತವಾಗಿ ತನ್ನ ಮನೆಗೆ ಹಿಂದಿರುಗಿದನು. 

2 ಅವನು ಯೆರೂಸಲೇಮಿಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ – ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ. 

3 ಆದರೂ ನೀನು ದೇಶದೊಳಗಿಂದ ಅಶೇರವಿಗ್ರಹಸ್ತಂಭಗಳನ್ನು ತೆಗೆದುಹಾಕಿ ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟದ್ದರಿಂದ ನಿನ್ನಲ್ಲಿ ಸುಶೀಲತೆಯೂ ಉಂಟೆಂದು ತಿಳಿದುಬಂತು ಎಂಬದಾಗಿ ಹೇಳಿದನು.

ಯೆಹೋಷಾಫಾಟನು ಸ್ಥಳಿಕ ನ್ಯಾಯಸ್ಥಾನಗಳನ್ನೂ ಮುಖ್ಯನ್ಯಾಯಸ್ಥಾನವನ್ನೂ ಸ್ಥಾಪಿಸಿದ್ದು

4 ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು ಇನ್ನೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದವರೆಗೂ ಸಂಚರಿಸಿ ತನ್ನ ಪ್ರಜೆಗಳನ್ನು ಅವರ ಪಿತೃಗಳ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು. 

5 ಅವನು ಯೆಹೂದದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿ ಅವರಿಗೆ –

6 ನೀವು ಹೇಗೆ ಕೆಲಸನಡಿಸುತ್ತೀರಿ ಎಂಬದರ ವಿಷಯ ನೋಡಿಕೊಳ್ಳಿರಿ. ನೀವು ನ್ಯಾಯತೀರಿಸುವದು ಮನುಷ್ಯರಿಗೋಸ್ಕರವಲ್ಲ, ಯೆಹೋವನಿಗೋಸ್ಕರವೇ. ನ್ಯಾಯವಿಚಾರಣೆ ನಡೆಯುವಾಗ ಆತನು ನಿಮ್ಮ ಮಧ್ಯದಲ್ಲಿರುತ್ತಾನೆ. 

7 ಹೀಗಿರುವಲ್ಲಿ ನಿಮಗೆ ಯೆಹೋವನ ಭಯವು ಇರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ ಮುಖದಾಕ್ಷಿಣ್ಯವೂ ಲಂಚತಿನ್ನುವದೂ ಇಲ್ಲವಾದದರಿಂದ ಜಾಗರೂಕತೆಯಿಂದ ಕೆಲಸಮಾಡಿರಿ ಎಂದು ಎಚ್ಚರಿಸಿದನು. 

8 ಇದಲ್ಲದೆ ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇಮಿಗೆ ಹಿಂದಿರುಗಿ ಬಂದು ಲೇವಿಯರಿಂದಲೂ ಯಾಜಕರಿಂದಲೂ ಇಸ್ರಾಯೇಲ್‍ಗೋತ್ರ ಪ್ರಧಾನರಿಂದಲೂ ಕೆಲವರನ್ನು ಆರಿಸಿ ಯೆಹೋವ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವ್ಯಾಜ್ಯಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವದಕ್ಕೋಸ್ಕರ ಯೆರೂಸಲೇಮಿನಲ್ಲಿ ಇರಿಸಿ ಅವರಿಗೆ – 

9 ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸವು ಯಾವದಂದರೆ – 

10 ಯೆಹೂದದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ ಅದು ನಿಮ್ಮ ಮುಂದೆ ಬರುವದಾದರೆ ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆಯೂ ನೀವು ಅವರೊಂದಿಗೆ ದೇವಕೋಪಕ್ಕೆ ಗುರಿಯಾಗದಂತೆಯೂ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವದಾದರೆ ನೀವು ನಿರ್ದೋಷಿಗಳಾಗಿರುವಿರಿ. 

11 ಇಗೋ, ಯೆಹೋವನ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯಕಾರ್ಯ ಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದಕುಲಪ್ರಭುವೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನ ಲೇಖಕರು; ಧೈರ್ಯದಿಂದ ಕೆಲಸಮಾಡಿರಿ, ಯೆಹೋವನು ಸಜ್ಜನರ ಸಹಾಯಕನು ಎಂದು ಹೇಳಿದನು.

 ಪುನರುಜ್ಜೀವನದ ನಂತರದ ಆಶೀರ್ವಾದ :ಮೋವಾಬ ಮತ್ತು ಆಮೋನನ್ನು ಸೋಲಿಸಿದ್ದು

1ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರೋಧವಾಗಿ ಯುದ್ಧಕ್ಕೆ ಬಂದರು.

2ದೂತರು ಬಂದು ಯೆಹೋಷಾಫಾಟನಿಗೆ – ಮಹಾಸಮೂಹವು ನಿನಗೆ ವಿರೋಧವಾಗಿ ಲವಣಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತದ ಕಡೆಯಿಂದ ಬಂದು ಈಗ ಏಂಗೆದಿಯೆನಿಸಿಕೊಳ್ಳುವ ಹಚೆಚೋನ್‍ತಾಮಾರಿನಲ್ಲಿರುತ್ತಾರೆಂದು ತಿಳಿಸಿದಾಗ 

3ಯೆಹೋಷಾಫಾಟನು ಹೆದರಿ ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡು ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು. 

4ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.

ಪ್ರಾರ್ಥನೆ

 5ಯೆರೂಸಲೇಮಿನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ ಯೆಹೋಷಾಫಾಟನು ಅದರ ಮುಂಗಡೆಯಲ್ಲಿ ನಿಂತು – 

6ಯೆಹೋವನೇ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿರುವಾತನು ನೀನಲ್ಲವೋ? ನೀನು ಜನಾಂಗಗಳ ಎಲ್ಲಾ ರಾಜ್ಯಗಳನ್ನು ಆಳುವವನಾಗಿರುತ್ತೀ. ನಿನ್ನ ಹಸ್ತದಲ್ಲಿ ಬಲಪರಾಕ್ರಮಗಳಿರುತ್ತವೆ; ನಿನ್ನೆದುರಿನಲ್ಲಿ ಯಾರೂ ನಿಲ್ಲಲಾರರು.

 7ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಹೊರಡಿಸಿ ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟಿಯಲ್ಲಾ. 

8ಅವರು ಈ ದೇಶದಲ್ಲಿ ಇಳುಕೊಂಡು ಇದರಲ್ಲಿ ನಿನ್ನ ಹೆಸರಿಗೋಸ್ಕರ ಪವಿತ್ರಾಲಯವನ್ನು ಕಟ್ಟಿ – 

9ತಮ್ಮ ಮೇಲೆ ಖಡ್ಗವಿಧಿ ಘೋರವ್ಯಾಧಿ ಕ್ಷಾಮ ಮೊದಲಾದ ಆಪತ್ತುಗಳು ಬರುವಾಗ ತಾವು ನಿನ್ನ ನಾಮಮಹತ್ತು ಇರುವ ಈ ಆಲಯದ ಮುಂದೆಯೂ ನಿನ್ನ ಮುಂದೆಯೂ ನಿಂತು ತಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಿಡುವದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡರಷ್ಟೆ. 

10ಈ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತಪ್ರದೇಶದವರನ್ನೂ ನೋಡು; ಇಸ್ರಾಯೇಲ್ಯರು ಐಗುಪ್ತದೇಶದಿಂದ ಬರುತ್ತಿದ್ದಾಗ ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ ಇವರನ್ನು ಸಂಹರಿಸದೆ ವಾರೆಯಾಗಿ ಹೋದರಲ್ಲಾ. 

11ಈಗ ಇವರು ಉಪಕಾರಕ್ಕೆ ಅಪಕಾರಮಾಡಿ ನೀನು ನಮಗೆ ಅನುಗ್ರಹಿಸಿದ ಸ್ವಾಸ್ತ್ಯದೊಳಗಿಂದ ನಮ್ಮನ್ನು ಹೊರಪಡಿಸುವದಕ್ಕೋಸ್ಕರ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ. 

12ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು. 

13ಎಲ್ಲಾ ಯೆಹೂದ್ಯರೂ ಅವರ ಹೆಂಡತಿಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.

14 ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ ಬೆನಾಯನ ಮೊಮ್ಮಗನೂ ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.

15ಅವನು – ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವದನ್ನು ಕೇಳಿರಿ! ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ, ಹೆದರಬೇಡಿರಿ, ಯುದ್ಧವು ನಿಮ್ಮದಲ್ಲ, ದೇವರದೇ.

16ನಾಳೆ ಬೆಳಿಗ್ಗೆ ಅವರಿಗೆ ವಿರೋಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ. 

17ಈ ಸಾರಿ ನೀವು ಯುದ್ಧಮಾಡುವದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ನಡಿಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು ಎಂದು ಹೇಳಿದನು. 

18ಆಗ ಯೆಹೋಷಾಫಾಟನು ನೆಲದ ಮಟ್ಟಿಗೂ ತಲೆಬಾಗಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಮುಂದೆ ಅಡ್ಡ ಬಿದ್ದು ನಮಸ್ಕರಿಸಿದರು. 

19ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ ಕೋರಹಿಯರೂ ಎದ್ದು ಇಸ್ರಾಯೇಲ್‍ದೇವರಾದ ಯೆಹೋವನನ್ನು ಮಹಾಸ್ವರದಿಂದ ಕೀರ್ತಿಸಿದರು.

20ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ – ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.

 21ಆಮೇಲೆ ಅವನು ಜನರ ಸಮ್ಮತಿಯಿಂದ ಯೆಹೋವನಿಗೋಸ್ಕರ ಗಾಯನಮಾಡುವದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ – ಪರಿಶುದ್ಧತ್ವವೆಂಬ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ – ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂದು ಭಜಿಸಿರಿ ಎಂಬದಾಗಿ ಆಜ್ಞಾಪಿಸಿದನು. 

22ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವದಕ್ಕೆ ಪ್ರಾರಂಭಿಸಲು ಯೆಹೋವನು ಯೆಹೂದ್ಯರಿಗೆ ವಿರೋಧವಾಗಿ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತದವರನ್ನೂ ನಶಿಸುವದಕ್ಕೋಸ್ಕರ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರಿಂದ ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು; 

23ಅವರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವದಕ್ಕೆ ಪ್ರಾರಂಭಿಸಿದರು. 

24ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ ನೆಲದ ಮೇಲೆ ಬಿದ್ದಿರುವ ಹೆಣಗಳು ಹೊರತಾಗಿ ಜೀವದಿಂದುಳಿದವರು ಯಾರೂ ಕಾಣಿಸಲಿಲ್ಲ. 

25ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವದಕ್ಕೋಸ್ಕರ ಅಲ್ಲಿಗೆ ಹೋಗಲು ಅವರಿಗೆ ದ್ರವ್ಯ ವಸ್ತ್ರ ಶ್ರೇಷ್ಠಾಯುಧ ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲುಕೊಂಡರು. ಕೊಳ್ಳೆಯು ಬಲುಹೆಚ್ಚಾಗಿದ್ದದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು. 

26ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ. 

27ಆಮೇಲೆ ಯೆಹೂದ್ಯರೂ ಯೆರೂಸಲೇಮಿನವರೂ ಅವರ ಮುಂಗಡೆಯಲ್ಲಿ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇಮಿಗೆ ಹಿಂದಿರುಗಿದರು. 

28ಅವರು ಸ್ವರಮಂಡಲ ಕಿನ್ನರಿ ತುತೂರಿ ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು. 

29ಯೆಹೋವನು ತಾನೇ ಇಸ್ರಾಯೇಲ್ಯರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು. 

    ಹಿಜ್ಕೀಯನು ಮೂಲಕ  ಪುನರುಜ್ಜೀವನ : ದೇವಾಲಯವನ್ನು ಶುದ್ದಿಗೊಳಿಸಿದ್ದು

2 ಪೂರ್ವಕಾಲವೃತ್ತಾಂತ 29:1 ಹಿಜ್ಕೀಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ. 

2ಅವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.

3ಅವನು ತನ್ನ ಆಳಿಕೆಯ ಮೊದಲನೆಯ ವರುಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು. 

4ಆಮೇಲೆ ಯಾಜಕರನ್ನೂ ಲೇವಿಯರನ್ನೂ [ದೇವಾಲಯದ] ಮೂಡಣದಿಕ್ಕಿನ ಬೈಲಿನಲ್ಲಿ ಕೂಡಿಸಿ ಅವರಿಗೆ – 

5ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧಪಡಿಸಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ. 

6ನಮ್ಮ ಪಿತೃಗಳು ನಮ್ಮ ದೇವರಾದ ಯೆಹೋವನಿಗೆ ದ್ರೋಹ ಮಾಡಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ಬಿಟ್ಟರು. ಅವರು ಆತನ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು. 

7ಅದರ ಮಂಟಪದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ನಂದಿಸಿ ಇಸ್ರಾಯೇಲ್‍ದೇವರ ಪವಿತ್ರಸ್ಥಾನದಲ್ಲಿ ಧೂಪಹಾಕುವದನ್ನೂ ಸರ್ವಾಂಗಹೋಮ ಸಮರ್ಪಿಸುವದನ್ನೂ ನಿಲ್ಲಿಸಿಬಿಟ್ಟರು. 

8ಆದದರಿಂದ ಯೆಹೋವನು ಯೆಹೂದದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಕೋಪವುಳ್ಳವನಾಗಿ ಅವುಗಳನ್ನು ಭಯವಿಸ್ಮಯ ಪರಿಹಾಸಗಳಿಗೆ ಆಸ್ಪದಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು. 

9ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು. 

10ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿಹೋಗುವಂತೆ ಇಸ್ರಾಯೇಲ್‍ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವದಕ್ಕೆ ಮನಸ್ಸುಳ್ಳವನಾಗಿದ್ದೇನೆ. 

11ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯೆಹೋವನು ತನ್ನನ್ನು ಆರಾಧಿಸುವದಕ್ಕೂ ಧೂಪಹಾಕುವದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡನಲ್ಲಾ ಎಂದು ಹೇಳಿದನು. 

12ಕೂಡಲೆ ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್, 

13ಎಲೀಚಾಫಾನ್ಯರಲ್ಲಿ ಶಿಮ್ರೀ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ, ಮತ್ತನ್ಯ, 

14ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ, ಉಜ್ಜೀಯೇಲ್ ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಕೂಡಿಸಿದರು. 

15 ಅವರು ಅರಸನ ಆಜ್ಞಾಧಾರಕರಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧಪಡಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವದಕ್ಕೆ ಬಂದರು. 

16ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವದಕ್ಕೋಸ್ಕರ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು. 

17ಅವರು ಮೊದಲನೆಯ ತಿಂಗಳಿನ ಮೊದನೆಯ ದಿನದಲ್ಲಿ ಶುದ್ಧೀಕರಣವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಯೆಹೋವನ ಆಲಯವನ್ನು ಶುದ್ಧಪಡಿಸುವದರಲ್ಲಿ ಎಂಟು ದಿನಗಳು ಕಳೆದುಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ತೀರಿತು. 

18ಆಮೇಲೆ ಅವರು ಅರಮನೆಯೊಳಕ್ಕೆ ಹೋಗಿ ಅರಸನಾದ ಹಿಜ್ಕೀಯನಿಗೆ – ನಾವು ಯೆಹೋವನ ಸಮಸ್ತಾಲಯವನ್ನೂ ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಅದರ ಸಾಮಾನುಗಳನ್ನೂ ಶುದ್ಧಮಾಡಿದೆವು. 

19ಅರಸನಾದ ಆಹಾಜನು ತನ್ನ ಆಳಿಕೆಯಲ್ಲಿ ದೇವದ್ರೋಹಿಯಾಗಿ ತಳ್ಳಿಬಿಟ್ಟ ಪಾತ್ರೆಗಳನ್ನು ತಿರಿಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ ಅಂದರು.

20ಅರಸನಾದ ಹಿಜ್ಕೀಯನು [ಮರುದಿನ] ಬೆಳಗಿನ ಜಾವದಲ್ಲೆದ್ದು ಪಟ್ಟಣದ ಮುಖಂಡರನ್ನು ಕೂಡಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು. 

21ಅವರು ಸರಕಾರ ದೇವಾಲಯ ಯೆಹೂದಪ್ರಜೆ ಇವುಗಳಿಗೋಸ್ಕರ ದೋಷಪರಿಹಾರಕಯಜ್ಞಮಾಡುವದಕ್ಕಾಗಿ ಹೋರಿ ಟಗರು ಕುರಿಮರಿ ಹೋತ ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಮಾಡಬೇಕೆಂದು ಆಜ್ಞಾಪಿಸಿದನು. 

22ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಎರಚಿದರು. ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಎರಚಿದರು. ಆಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಎರಚಿದರು. 

23ಕಡೆಯಲ್ಲಿ ದೋಷಪರಿಹಾರಕಯಜ್ಞಕ್ಕಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಸಮೂಹದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನಿಟ್ಟನಂತರ 

24ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲ್ಯರ ದೋಷಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲ್ಯರಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದ್ದನು. 

25ಇದಲ್ಲದೆ ಅವನು ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದ ಭಜಿಸುವದಕ್ಕೋಸ್ಕರ ಲೇವಿಯರನ್ನು ದಾವೀದ, ರಾಜದರ್ಶಿಯಾದ ಗಾದ್, ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ಇರಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು. 

26ಆ ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರಲು ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವದಕ್ಕೆ ಆಜ್ಞಾಪಿಸಿದನು. 

27ಸರ್ವಾಂಗಹೋಮಸಮರ್ಪಣೆಯು ಪ್ರಾರಂಭಿಸಿದೊಡನೆ ಇಸ್ರಾಯೇಲ್‍ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವದೂ ತುತೂರಿಯೂದುವದೂ ಆರಂಭವಾಯಿತು. 

28ಸರ್ವಾಂಗಹೋಮ ಸಮರ್ಪಣೆಯು ತೀರುವವರೆಗೆ ಸರ್ವಸಮೂಹದವರು ಸಾಷ್ಟಾಂಗನಮಸ್ಕಾರ ಮಾಡುತ್ತಲೂ ಗಾಯಕರು ಗಾನಮಾಡುತ್ತಲೂ ತುತೂರಿಯೂದುವವರು ತುತೂರಿಯೂದುತ್ತಲೂ ಇದ್ದರು. 

29ಸರ್ವಾಂಗಹೋಮಸಮರ್ಪಣೆಯು ತೀರಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗನಮಸ್ಕಾರಮಾಡಿದರು. 

30ಅರಸನಾದ ಹಿಜ್ಕೀಯನೂ ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು ಅವರು ಉತ್ಸಾಹದಿಂದ ಸ್ತುತಿಸುತ್ತಾ ಬೊಗ್ಗಿಕೊಂಡು ನಮಸ್ಕರಿಸಿದರು.

31ಆಮೇಲೆ ಹಿಜ್ಕೀಯನು ಸಮೂಹದವರಿಗೆ – ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರಲ್ಲಾ; ಹತ್ತಿರ ಬಂದು ಯೆಹೋವನ ಆಲಯಕ್ಕೋಸ್ಕರ ಸಮಾಧಾನಯಜ್ಞಗಳನ್ನೂ ಕೃತಜ್ಞತಾ ಯಜ್ಞಗಳನ್ನೂ ಸಮರ್ಪಿಸಿರಿ ಅನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ ಅನೇಕರು ಸ್ವೇಚ್ಫೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. 

32ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮಸಮರ್ಪಣೆಗಾಗಿಯೇ.

33ದೇವರಿಗೆ ಕಾಣಿಕೆಯಾಗಿ ತರಲ್ಪಟ್ಟ ಹೋರಿಗಳು ಆರು ನೂರು, ಕುರಿಗಳು ಮೂರು ಸಾವಿರ. 

34ಚರ್ಮವನ್ನು ಸುಲಿಯುವದು [ಶುದ್ಧಿಪಡಿಸಿಕೊಂಡ] ಕೆಲವು ಮಂದಿ ಯಾಜಕರಿಂದ ಆಗದೆ ಹೋಯಿತು. ಆದದರಿಂದ ಮಿಕ್ಕ ಯಾಜಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸ ತೀರುವ ತನಕ ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. 

35ತಮ್ಮನ್ನು ಶುದ್ಧಪಡಿಸಿಕೊಳ್ಳುವದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು. ಇದಲ್ಲದೆ ಯಾಜಕರು ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನಯಜ್ಞಗಳ ಕೊಬ್ಬು, ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.

36 ಹೀಗೆ ಯೆಹೋವನ ಆಲಯ ದ ಸೇವಾಕ್ರಮವು ಪುನಃಸ್ಥಾಪಿತವಾಯಿತು. ಯಾರೂ ನೆನಸದೆ ಇರುವಲ್ಲಿ ದೇವರು ತಾನೇ ತನ್ನ ಪ್ರಜೆಗಳಿಗೋಸ್ಕರ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲಾ ಜನರೂ ಸಂತೋಷಿಸಿದರು.

ಹಿಜ್ಕೀಯನು ಪಸ್ಕವನ್ನಾಚರಿಸಿದ್ದು

2 ಪೂರ್ವಕಾಲವೃತ್ತಾಂತ 30:1ತರುವಾಯ ಹಿಜ್ಕೀಯನು – ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕವನ್ನಾಚರಿಸುವದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು ಎಲ್ಲಾ ಇಸ್ರಾಯೇಲ್ಯರಿಗೂ ಯೆಹೂದ್ಯರಿಗೂ ಎಫ್ರಾಯೀಮ್ಯರಿಗೂ ಮನಸ್ಸೆಯರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು. 

2ಯಾಜಕರಲ್ಲಿ ತಕ್ಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲವಾದದರಿಂದಲೂ ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದದರಿಂದಲೂ ಕೂಡಲೆ ಪಸ್ಕವನ್ನು ಆಚರಿಸಲಾಗದೆಂದು ಅರಸನೂ ಅವನ ಸರದಾರರೂ ಯೆರೂಸಲೇಮಿನ ಸರ್ವಸಂಘದವರೂ ತಿಳಿದು 

3ಎರಡನೆಯ ತಿಂಗಳಿನಲ್ಲಿ ಅದನ್ನು ಆಚರಿಸಬೇಕೆಂದು ಅಭಿಪ್ರಾಯಪಟ್ಟರು.

4ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದರಿಂದ ಅವರು –

5ಜನರು ಇಸ್ರಾಯೇಲ್‍ದೇವರಾದ ಯೆಹೋವನಿಗೋಸ್ಕರ ಪಸ್ಕವನ್ನಾಚರಿಸುವದಕ್ಕಾಗಿ ಯೆರೂಸಲೇಮಿಗೆ ಬರಬೇಕು ಎಂಬದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಾಯೇಲ್ಯರೊಳಗೆ ಡಂಗುರಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆವರೆಗೂ ಧರ್ಮಶಾಸ್ತ್ರವಿಧಿಯ ಮೇರೆಗೆ ಪಸ್ಕವನ್ನು ಆಚರಿಸಿರಲಿಲ್ಲ.

6ಅರಸನ ಮತ್ತು ಅವನ ಸರದಾರರ ಪತ್ರಗಳನ್ನು ತೆಗೆದುಕೊಂಡುಹೋದ ದೂತರು ಇಸ್ರಾಯೇಲ್ ಯೆಹೂದದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಪ್ರಕಟಿಸಿದ್ದೇನಂದರೆ – ಇಸ್ರಾಯೇಲ್ಯರೇ, ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನೂ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ತಿರುಗಿಕೊಳ್ಳುವನು. 

7ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು. 

8ಈಗ ನಿಮ್ಮ ಪಿತೃಗಳಂತೆ ಆಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಆತನನ್ನು ಸೇವಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವದು. 

9ನೀವು ಯೆಹೋವನ ಕಡೆಗೆ ತಿರುಗಿಕೊಳ್ಳುವದಾದರೆ ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ ತಿರಿಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳವನಾಗಿರುತ್ತಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವದಿಲ್ಲ ಎಂಬದೇ.

10ದೂತರು ಎಫ್ರಾಯೀಮ್ ಮನಸ್ಸೆ ಜೆಬುಲೂನ್ ಪ್ರಾಂತಗಳಲ್ಲಿ ಪಟ್ಟಣದಿಂದ ಪಟ್ಟಣಕ್ಕೆ ಹೋಗುತ್ತಿರಲು ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು. 

11ಕೆಲವು ಮಂದಿ ಆಶೇರ್ಯರೂ ಮನಸ್ಸೆಯವರೂ ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. 

12ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು. 

13ಹೀಗೆ ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನಾಚರಿಸುವದಕ್ಕಾಗಿ ಯೆರೂಸಲೇಮಿನಲ್ಲಿ ಕೂಡಿದರು; ಆ ಕೂಟವು ಮಹಾಸಮೂಹವಾಗಿತ್ತು. 

14ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್‍ಹಳ್ಳದಲ್ಲಿ ಬೀಸಾಟುಬಿಟ್ಟರು. 

15ಆಮೇಲೆ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ವಧಿಸಿದರು. ಯಾಜಕರೂ ಲೇವಿಯರೂ [ಮೊದಲನೆಯ ಸಾರಿ ತಪ್ಪಿದ್ದಕ್ಕಾಗಿ] ನಾಚಿಕೆಪಟ್ಟು ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ 

16ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. 

17ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು. ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದದರಿಂದ ಅಶುದ್ಧರಾದವರೆಲ್ಲರ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು. 

18ಜನರಲ್ಲಿ ಅನೇಕಾನೇಕರು ಅಂದರೆ ಹೆಚ್ಚಾಗಿ ಎಫ್ರಾಯೀಮ್ ಮನಸ್ಸೆ ಇಸ್ಸಾಕಾರ್ ಜೆಬುಲೂನ್ ಪ್ರಾಂತಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು – ಯೆಹೋವನೇ, ದಯಾಪರನಾದ ದೇವರೇ, ದೇವಾಲಯಯಾತ್ರಿಕರಿಗಿರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ 

19ಪಿತೃಗಳ ದೇವರಾದ ನಿನ್ನನ್ನು ಹುಡುಕಬೇಕೆಂದು ಮನಸ್ಸು ಮಾಡಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದ್ದರಿಂದ 

20ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು.

21ಯೆರೂಸಲೇಮಿನಲ್ಲಿ ಕೂಡಿಬಂದ ಇಸ್ರಾಯೇಲ್ಯರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ ಯಾಜಕರೂ ಮಹಾವಾದ್ಯದೊಡನೆ ಯೆಹೋವನನ್ನು ಪ್ರತಿದಿನವೂ ಕೀರ್ತಿಸುತ್ತಾ ಇದ್ದರು. 

22ಹಿಜ್ಕೀಯನು ಯೆಹೋವನ [ಭಜನೆಯಲ್ಲಿ] ಗಟ್ಟಿಗರಾಗಿದ್ದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತಾಡಿದನು. ನೇಮಕವಾದ ಏಳು ದಿವಸಗಳವರೆಗೂ ಜನರು ಸಮಾಧಾನಯಜ್ಞಗಳನ್ನರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣ ಮಾಡಿದರು. 

23ಯೆಹೂದದ ಅರಸನಾದ ಹಿಜ್ಕೀಯನು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಪ್ರಭುಗಳು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ತಮಗೆ ಯಜ್ಞಕ್ಕಾಗಿ ದಾನಮಾಡಿದ್ದರಿಂದಲೂ ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿದ್ದರಿಂದಲೂ 

24ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ಗೊತ್ತುಮಾಡಿಕೊಂಡು ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು. 

25ಯೆಹೂದ್ಯರ ಸರ್ವಸಮೂಹದವರೂ ಯಾಜಕರೂ ಲೇವಿಯರೂ ಇಸ್ರಾಯೇಲ್‍ಪ್ರಾಂತಗಳಿಂದ ನೆರೆದುಬಂದವರೆಲ್ಲರೂ ಇಸ್ರಾಯೇಲ್ ಯೆಹೂದ ಪ್ರಾಂತಗಳಲ್ಲಿದ್ದ ಪ್ರವಾಸಿಗಳೂ ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು. 

26ದಾವೀದನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದದರಿಂದ ಯೆರೂಸಲೇಮಿನಲ್ಲಿ ಬಹುಸಂತೋಷವುಂಟಾಯಿತು. 

27ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರವು [ದೇವರಿಗೆ] ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.

2 ಪೂರ್ವಕಾಲವೃತ್ತಾಂತ 31:1ಇದಾದನಂತರ ನೆರೆದುಬಂದ ಇಸ್ರಾಯೇಲ್ಯರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು ಅಶೇರವಿಗ್ರಹಸ್ತಂಭಗಳನ್ನು ಕಡಿದುಹಾಕಿ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಲ್ಲದೆ ಎಫ್ರಾಯೀಮ್ ಮನಸ್ಸೆ ಪ್ರಾಂತಗಳಲ್ಲಿಯೂ ಯಾವದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.

ಆರಾದನೆಗೆ ಕೊಡುಗೆ

2ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ ಸರ್ವಾಂಗಹೋಮ ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸುವದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವದಕ್ಕೂ ನೇಮಿಸಿದನು. 

3ಇದಲ್ಲದೆ ಅವನು ಯೆಹೋವನ ಧರ್ಮಶಾಸ್ತ್ರವಿಧಿಗನುಸಾರವಾಗಿ ಪ್ರಾತಃಕಾಲ ಸಾಯಂಕಾಲ ಸಬ್ಬತ್‍ದಿನ ಅಮಾವಾಸ್ಯೆ ಜಾತ್ರೆ ಇವುಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗೋಸ್ಕರ ಆಗಬೇಕಾದದ್ದೆಲ್ಲಾ ತನ್ನ ಆಸ್ತಿಯಿಂದ ಸಲ್ಲಿಸಬೇಕೆಂತಲೂ 

4ಯಾಜಕರು ಮತ್ತು ಲೇವಿಯರು ಯೆಹೋವ ಧರ್ಮದಲ್ಲಿ ಆಸಕ್ತರಾಗಿರುವದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.

 5ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲ್ಯರು ಧಾನ್ಯ ದ್ರಾಕ್ಷಾರಸ ಎಣ್ಣೆ ಜೇನು ಮುಂತಾದ ಎಲ್ಲಾ ಹುಟ್ಟುವಳಿಯಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು; ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು. 

6ಯೆಹೂದದ ಪಟ್ಟಣಗಳಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ಯರೂ ಯೆಹೂದ್ಯರೂ ಕುರಿದನಗಳಲ್ಲಿ ದಶಮಾಂಶವನ್ನು ಕೊಟ್ಟದ್ದಲ್ಲದೆ ದೇವರಾದ ಯೆಹೋವನಿಗೆ ಸಮರ್ಪಣೆಯಾಗತಕ್ಕ ಪರಿಶುದ್ಧದ್ರವ್ಯಗಳಲ್ಲಿಯೂ ದಶಮಾಂಶವನ್ನು ತಂದು ರಾಶಿಮಾಡಿದರು. 

7ರಾಶಿಮಾಡುವದು ಮೂರನೆಯ ತಿಂಗಳಲ್ಲಿ ಪ್ರಾರಂಭವಾಯಿತು, ಏಳನೆಯ ತಿಂಗಳಲ್ಲಿ ತೀರಿತು. 

8ಹಿಜ್ಕೀಯನೂ ಪ್ರಭುಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಹರಸಿದರು. 

9ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಹತ್ತಿರ ಆ ರಾಶಿಗಳ ವಿಷಯದಲ್ಲಿ ವಿಚಾರಿಸಲು 

10ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ – ಜನರು ದೇವರಾದ ಯೆಹೋವನಿಗೋಸ್ಕರ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗೆ ಸಮೃದ್ಧಿಯನ್ನನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ ಅಂದನು.

ಅರಸನಾದ ಯೋಷೀಯನ ಮೂಲಕ ಪುನರುಜ್ಜೀವನ

2 ಪೂರ್ವಕಾಲವೃತ್ತಾಂತ 34 :1ಯೋಷೀಯನು ಅರಸನಾದಾಗ ಎಂಟು ವರುಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರುಷ ಆಳಿದನು. 

2ಅವನು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.

3ಅವನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರುಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ ಇದ್ದ ಪೂಜಾಸ್ಥಳಗಳನ್ನೂ ಅಶೇರ ಸ್ತಂಭಗಳನ್ನೂ ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಪಡಿಸಿದನು. 

4ಇದಲ್ಲದೆ ಅವನು ಬಾಳ್‍ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಹಾಳು ಮಾಡಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಅಶೇರಸ್ತಂಭ ಕೆತ್ತಿದ ಮತ್ತು ಎರಕದ ವಿಗ್ರಹ ಇವುಗಳನ್ನು ಒಡಿಸಿ ಪುಡಿಪುಡಿಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ದೂಳನ್ನು ಚೆಲ್ಲಿಸಿದನು. 

5ಅವುಗಳ ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದದ ಮತ್ತು ಯೆರೂಸಲೇಮಿನ ಅಶುದ್ಧತ್ವವನ್ನೆಲ್ಲಾ ಪರಿಹರಿಸಿದನು. 

6ಮನಸ್ಸೆ ಎಫ್ರಾಯೀಮ್ ಸಿಮೆಯೋನ್ ನಫ್ತಾಲಿ ಪ್ರಾಂತಗಳ ಊರುಗಳ ಸುತ್ತಣ ಹಾಳುಬೀಳುಗಳಲ್ಲಿದ್ದ ಯಜ್ಞವೇದಿಗಳನ್ನು ಕೆಡವಿಸಿ 

7ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡಿಸಿ ಪುಡಿಪುಡಿಮಾಡಿಸಿ ಇಸ್ರಾಯೇಲ್‍ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಯೆರೂಸಲೇಮಿಗೆ ಹಿಂದಿರುಗಿದನು.

8ಅವನು ತನ್ನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ದೇಶವನ್ನೂ ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವದಕ್ಕೋಸ್ಕರ ಅಚಲ್ಯನ ಮಗನಾದ ಶಾಫಾನನನ್ನೂ ಪುರಾಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು. 

9ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕೋಸ್ಕರ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ ಯೆರೂಸಲೇಮಿನವರಿಂಲೂ ಕೂಡಿಸಿದ್ದ ಹಣವನ್ನು 

10ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವದಕ್ಕೋಸ್ಕರ ಅವನಿಗೆ ಒಪ್ಪಿಸಿದರು. 

11ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವದಕ್ಕಾಗಿಯೂ ಯೆಹೂದರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವದಕ್ಕಾಗಿಯೂ ಅಂತು ದೇವಾಲಯವನ್ನು ಜೀರ್ಣೋದ್ಧಾರಮಾಡಿ ಭದ್ರಪಡಿಸುವದಕ್ಕೆ ಬಡಗಿಯವರಿಗೂ ಶಿಲ್ಪಿಯವರಿಗೂ ಕೊಟ್ಟರು. 

12ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು. 

13ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡಿಸುತ್ತಿದ್ದರು; ಎಲ್ಲಾ ಲೇಖಕರೂ ಅಧಿಕಾರಿಗಳೂ ದ್ವಾರಪಾಲಕರೂ ಲೇವಿಯರೇ.

14ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶದ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು. 

15ಹಿಲ್ಕೀಯನು ಲೇಖಕನಾದ ಶಾಫಾನನಿಗೆ – ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ ಎಂದು ಹೇಳಿ ಅದನ್ನು ಅವನ ಕೈಯಲ್ಲಿಕೊಟ್ಟನು. 

16ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ – ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ. 

17ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಕೆಲಸಮಾಡಿಸುವವರಿಗೂ ಮಾಡುವವರಿಗೂ ಒಪ್ಪಿಸಿದರು ಎಂದು ತಿಳಿಸಿದನು. 

18ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ – ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.

19ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡು 

20ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಸಹಕಾರಿಯಾದ ಅಸಾಯ ಎಂಬವರಿಗೆ – 

21ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದದರಿಂದ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದದರಿಂದ ನೀವು ನನಗೋಸ್ಕರವೂ ಇಸ್ರಾಯೇಲ್ಯರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು. 

22ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಅಪ್ಪಣೆಯಾದಂತೆ ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು. 

23ಹುಲ್ದಳು ಅವರಿಗೆ – ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್‍ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ. 

24ಆತನು – ಈ ದೇಶದ ಮೇಲೆಯೂ ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು; 

25ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯುತ್ತಿರುವದು, ಆರಿಹೋಗುವದಿಲ್ಲ ಅನ್ನುತ್ತಾನೆ. 

26ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನಂದರೆ – ಇಸ್ರಾಯೇಲ್‍ದೇವರಾದ ಯೆಹೋವನು ಇಂತೆನ್ನುತ್ತಾನೆ, 

27ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರುಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು. 

28ನಾನು ಈ ದೇಶದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿಸೇರುವಂತೆ ಅನುಗ್ರಹಿಸುವೆನು ಎಂಬದೇ ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.

29ಅನಂತರ ಅರಸನು ದೂತರ ಮುಖಾಂತರ ಯೆರೂಸಲೇಮಿನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಕೂಡಿಸಿ 

30ಯೆರೂಸಲೇಮಿನವರನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಲೇವಿಯರನ್ನೂ ಕರಕೊಂಡು ಯೆಹೋವನ ಆಲಯಕ್ಕೆ

ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ನಿಬಂಧನಗ್ರಂಥವನ್ನು ಸಂಪೂರ್ಣವಾಗಿ ಓದಿಸಿ 

31ತನ್ನ ಸ್ಥಳದಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣ ಮಾಡಿದನು. 

32ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪಿತೃಗಳ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು. 

33ಯೋಷೀಯನು ಇಸ್ರಾಯೇಲ್ಯರಿಗೆ ಸೇರಿದ ಎಲ್ಲಾ ಪ್ರಾಂತಗಳೊಳಗಿನ ಅಸಹ್ಯಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ ಇಸ್ರಾಯೇಲ್ಯರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಸೇವಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.

ಯೋಷೀಯನ ಕಾಲದಲ್ಲಿ ನಡೆದ ದೊಡ್ಡ ಪಸ್ಕಹಬ್ಬ

2 ಪೂರ್ವಕಾಲವೃತ್ತಾಂತ 35:1ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇಮಿನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು; ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ವಧಿಸಿದರು. 

2ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ ಯೆಹೋವನ ಆಲಯದ ಸೇವೆಗಾಗಿ ಅವರನ್ನು ಪ್ರೋತ್ಸಾಹಪಡಿಸಿ 

3ಎಲ್ಲಾ ಇಸ್ರಾಯೇಲ್ಯರನ್ನು ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ – ದಾವೀದನ ಮಗನೂ ಇಸ್ರಾಯೇಲ್‍ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇಟ್ಟುಬಿಡಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವದು ಅವಶ್ಯವಿಲ್ಲ; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನೂ ಸೇವಿಸಿರಿ. 

4ಇಸ್ರಾಯೇಲ್ಯರ ಅರಸನಾದ ದಾವೀದನೂ ಅವನ ಮಗನಾದ ಸೊಲೊಮೋನನೂ ಬರೆದು ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರ ವರ್ಗಗಳ ಪ್ರಕಾರ ಸಿದ್ಧರಾಗಿದ್ದು

5ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಒಂದೊಂದು ಗೋತ್ರಶಾಖೆಗೋಸ್ಕರ ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಸ್ಕದ ಕುರಿಯನ್ನು ವಧಿಸಲಿ.

6ಮೋಶೆಯಿಂದ ಪ್ರಕಟವಾದ ಯೆಹೋವನ ವಿಧಿಗನುಸಾರವಾಗಿ ನಿಮ್ಮ ಸಹೋದರರು ಪಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಮಾಡಿರಿ ಎಂದು ಆಜ್ಞಾಪಿಸಿದನು.

7ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕ ಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ ಕುರಿಮರಿಗಳನ್ನೂ ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.

8ಅವನ ಸರದಾರರು ಜನರಿಗೂ ಯಾಜಕರಿಗೂ ಲೇವಿಯರಿಗೂ [ಯಜ್ಞಪಶುಗಳನ್ನು] ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ ಮುನ್ನೂರು ಹೋರಿಗಳನ್ನೂ ಕೊಟ್ಟರು. 

9ಲೇವಿಯರಲ್ಲಿ ಮುಖ್ಯಸ್ಥರಾದ ಕೋನನ್ಯ, ಸೆಮಾಯ, ನೆತನೇಲ್ ಎಂಬ ಅಣ್ಣತಮ್ಮಂದಿರೂ ಹಷಲ್ಯ, ಯೆಗೀಯೇಲ್, ಯೋಜಾಬಾದ್ ಎಂಬವರೂ ಲೇವಿಯರಿಗೆ ಐದು ಸಾವಿರ ಪಸ್ಕದ ಕುರಿಮರಿಗಳನ್ನೂ ಐನೂರು ಹೋರಿಗಳನ್ನೂ ದಾನಮಾಡಿದರು.

10ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು;

11ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.

12ಲೇವಿಯರು ಚರ್ಮಸುಲಿದು ಹೋಮಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಪ್ರತ್ಯೇಕಿಸಿ ಜನರಿಗೆ ಆಯಾ ಗೋತ್ರ ಶಾಖೆಗಳಿಗನುಸಾರವಾಗಿ ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಯೆಹೋವನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲಿಯೂ ಅದೇ ಕ್ರಮವನ್ನು ಅನುಸರಿಸಿದರು.

13ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ ಬಾನೆ ಹಂಡೆಗಳಲ್ಲಿ ಬೇಯಿಸಿ ಬೇಗನೆ ತಂದು ಜನರಿಗೆ ಬಡಿಸಿದರು.

14ತರುವಾಯ ತಮಗೋಸ್ಕರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ಸರ್ವಾಂಗಹೋಮಗಳನ್ನೂ ಕೊಬ್ಬನ್ನೂ ಸಮರ್ಪಿಸುತ್ತಾ ಇದ್ದದರಿಂದ ಲೇವಿಯರು ತಮಗೋಸ್ಕರ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೋಸ್ಕರವೂ ಸಿದ್ಧಮಾಡಿದರು.

15ಆಸಾಫ್ಯರಾದ ಗಾಯಕರು ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವದಕ್ಕೆ ಕಾರಣವಿರಲಿಲ್ಲ.

16ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿವಸವೇ ಸಿದ್ಧವಾಯಿತು.

17ಕೂಡಿಬಂದಿದ್ದ ಇಸ್ರಾಯೇಲ್ಯರು ಆ ಕಾಲದಲ್ಲಿ ಪಸ್ಕಹಬ್ಬವನ್ನೂ ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನೂ ಆಚರಿಸಿದರು.

18ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿವಸಗಳಿಂದ ಇಸ್ರಾಯೇಲ್ಯರಲ್ಲಿ ನಡೆಯಲೇ ಇಲ್ಲ. ಯೋಷೀಯನೂ ಯಾಜಕರೂ ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲ್ಯ ಯೆಹೂದ್ಯರೂ ಯೆರೂಸಲೇಮಿನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.

19ಈ ಪಸ್ಕಹಬ್ಬವು ಯೋಷೀಯನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ನಡೆಯಿತು.

ಪುನರುಜ್ಜೀವನದ ಕುರಿತಾದ ದಾನಿಯೇಲನ ಪ್ರಾರ್ಥನೆ

ದಾನಿಯೇಲನ ದೇವಪ್ರಾರ್ಥನೆ, ಅವನಿಗೆ ಬಂದ ಉತ್ತರ

ದಾನಿಯೇಲನು 9 :1ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳಿಕೆಯ ಮೊದಲನೆಯ ವರುಷದಲ್ಲಿ 

2ದಾನಿಯೇಲನಾದ ನಾನು ಶಾಸ್ತ್ರಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮು ಹಾಳುಬಿದ್ದಿರಬೇಕಾದ ಪೂರ್ಣಕಾಲದ ವರುಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದು 

3ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ ವಿಜ್ಞಾಪನೆಗಳಲ್ಲಿ ನಿರತನಾದೆನು.

ದೇವಾಲಯವನ್ನು ಪುನಃ ಕಟ್ಟಲು ಪ್ರವಾದಿಯಾದ ಹಗ್ಗಾಯನನ್ನು ಕರೆದದ್ದು

ಹಗ್ಗಾಯ 1:1ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು –

ದೇವಾಲಯವನ್ನು ಪುನಃ ಕಟ್ಟಲು ಎಚ್ಚರಿಕೆ

2ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ -ಯೆಹೋವನ ಆಲಯವನ್ನು ಕಟ್ಟುವದಕ್ಕೆ ಸಮಯವು ಇನ್ನೂ ಬಂದಿಲ್ಲ ಎಂದು ಈ ಜನರು ಅಂದುಕೊಳ್ಳುತ್ತಾರಲ್ಲಾ.

3ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿಸಿದನು –

4ಈ ಆಲಯವು ಹಾಳುಬಿದ್ದಿದೆಯಲ್ಲಾ; ನೀವು ಒಳಗೋಡೆಗೆಲ್ಲಾ ಹಲಿಗೆಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವದಕ್ಕೆ ಈ ಸಮಯವು ತಕ್ಕದ್ದೋ?

5ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ -ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.

6ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ತಿನ್ನುತ್ತೀರಿ, ತೃಪ್ತಿಯಾಗದು, ಕುಡಿಯುತ್ತೀರಿ,, ಆನಂದವಾಗದು; ಹೊದಿಯುತ್ತೀರಿ, ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಿನದು.

7ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ -ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.

8ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು; ಇದು ಯೆಹೋವನ ನುಡಿ.

9ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ ಆಹಾ, ಸ್ವಲ್ಪ ಮಾತ್ರ   ಸಿಕ್ಕಿತು; ನೀವು ಮನೆಗೆ ತೆಗೆದುಕೊಂಡು ಬಂದಾಗ ನಾನು ಅದರ ಮೇಲೆ ಉಸುರುಬಿಟ್ಟೆನು. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ -ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಹಾಳುಬಿದ್ದಿದೆ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.

10ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ,ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ.

11ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ, ಇವುಗಳಿಗೆಲ್ಲಾ ಹಾಳುದೆಶೆ ತಂದಿದ್ದೇನೆ.

ಪ್ರವಾದಿಯದ ಜೆಕರ್ಯನ ಮೂಲಕ ಯೆಹೋವನ ಕಡೆಗೆ ಪುನಃ ತಿರುಗಬೇಕೆಂಬ ಎಚ್ಚರಿಕೆ

 ಜೆಕರ್ಯ 1:1ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು – 

2ಯೆಹೋವನು ನಿಮ್ಮ ಪಿತೃಗಳ ಮೇಲೆ ಬಹುಕೋಪಗೊಂಡಿದ್ದಾನೆ. 

3ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು – ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ – ನನ್ನ ಕಡೆಗೆ ಪುನಃ ತಿರುಗಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ; ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ. 

4ನಿಮ್ಮ ಪಿತೃಗಳಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ – ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ – ನಿಮ್ಮ ದುರ್ಮಾರ್ಗ ದುಷ್ಕೃತ್ಯಗಳಿಂದ ಹಿಂದಿರುಗಿರಿ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ; ಇದು ಯೆಹೋವನ ನುಡಿ. 

5ನಿಮ್ಮ ಪಿತೃಗಳು ಎಲ್ಲಿ? ಪ್ರವಾದಿಗಳು ನಿತ್ಯಜೀವಿಗಳೋ? 6ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು – ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.

ನೆಹೆಮೀಯನ ಮೂಲಕ ಪುನರುಜ್ಜೀವನ

 ನೆಹೆಮೀಯ 8:1ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಲಿನ ಮುಂದಿನ ಬೈಲಿನಲ್ಲಿ ಒಟ್ಟಾಗಿ ಕೂಡಿಬಂದು – ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲ್ಯರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕು ಎಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.

 2ಯಾಜಕನಾದ ಎಜ್ರನು ಗ್ರಹಿಸಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ 

3ಆ ಧರ್ಮಶಾಸ್ತ್ರವನ್ನು ತಂದು ಪ್ರಾತಃಕಾಲದಿಂದ ಮಧ್ಯಾಹ್ನದವರೆಗೂ ಓದಿದನು. ನೀರುಬಾಗಲಿನ ಮುಂದಣ ಬೈಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಶಕ್ತರಾದವರೆಲ್ಲರೂ ಧರ್ಮಶಾಸ್ತ್ರಪಾರಾಯಣವನ್ನು ಲಾಲಿಸುತ್ತಾ ಇದ್ದರು.

4ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬವರೂ ಎಡಗಡೆಯಲ್ಲಿ ಪೆದಾಯ, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬವರೂ ನಿಂತರು. 

5ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷದಲ್ಲಿ ಗ್ರಂಥವನ್ನು ತೆರೆದ ಕೂಡಲೆ ಎಲ್ಲರೂ ಎದ್ದು ನಿಂತರು. 

6ಎಜ್ರನು ಪರಾತ್ಪರ ದೇವರಾದ ಯೆಹೋವನನ್ನು ಸ್ತುತಿಸಿದ್ದಕ್ಕೆ ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್ ಎಂದು ಹೇಳಿ ನೆಲದ ಮಟ್ಟಿಗೂ ತಲೆಬಾಗಿ ಯೆಹೋವನನ್ನು ಆರಾಧಿಸಿದರು. 

7ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು. 

8ಜನರು ಎದ್ದು ನಿಂತನಂತರ ಅವರು ದೇವರ ಧರ್ಮಶಾಸ್ತ್ರವನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿಲು ಜನರು ಗ್ರಹಿಸಿದರು.

9ಜನರೆಲ್ಲರೂ ಧರ್ಮೋಪದೇಶವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದದರಿಂದ ದೇಶಾಧಿಪತಿಯಾದ ನೆಹೆಮೀಯನೂ ಧರ್ಮೋಪದೇಶಮಾಡುವ ಯಾಜಕನಾದ ಎಜ್ರನೂ ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಅವರಿಗೆ – ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ಪರಿಶುದ್ಧದಿನವಾಗಿರುವದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ ಎಂದು ಹೇಳಿದರು. 

10ಇದಲ್ಲದೆ ಎಜ್ರನು ಅವರಿಗೆ – ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ; ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಭಾಗಗಳನ್ನು ಕಳುಹಿಸಿರಿ. ಈ ದಿನವು ನಮ್ಮ ಕರ್ತನಿಗೆ ಪ್ರತಿಷ್ಠಿತ ದಿನವಾಗಿರುವದರಿಂದ ವ್ಯಸನಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ ಅಂದನು. 

11ಲೇವಿಯರೂ – ಸುಮ್ಮನಿರಿ, ಇದು ದೇವರ ದಿವಸ, ದುಃಖಿಸಬೇಡಿರಿ ಎಂದು ಹೇಳಿ ಜನರನ್ನು ಸಂತೈಸಿದರು. 

12ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗಮನಿಸಿ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ಏನೂ ಇಲ್ಲದವರಿಗೆ ಭಾಗಗಳನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.

13ಮರುದಿನ ಎಲ್ಲಾ ಇಸ್ರಾಯೇಲ್ ಗೋತ್ರಪ್ರಧಾನರೂ ಯಾಜಕರೂ ಲೇವಿಯರೂ ಧರ್ಮಶಾಸ್ತ್ರದ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಕೂಡಿಬಂದಾಗ 

14ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಾಯೇಲ್ಯರು ಪರ್ಣಶಾಲೆಗಳಲ್ಲಿ ವಾಸಿಸಬೇಕು; 

15ಈ ನಿಯಮದ ಪ್ರಕಾರ ಆ ಪರ್ಣಶಾಲೆಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ, ಕಾಡು ಒಲೀವ, ಸುಗಂಧ, ಖರ್ಜೂರ ಮುಂತಾದ ಮರಗಳ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರುವ ಹಾಗೆ ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯೂ ಡಂಗುರದಿಂದ ಪ್ರಕಟಿಸಬೇಕು ಎಂಬದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದಲ್ಲಿ ಸಿಕ್ಕಿತು. 

16ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಲು, ಎಫ್ರಾಯೀಮ್ ಬಾಗಲು ಇವುಗಳ ಮುಂದಣ ಬೈಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು. 

17ನೂನನ ಮಗನಾದ ಯೆಹೋಶುವನ ಕಾಲದಿಂದ ಆವರೆಗೂ ಇಸ್ರಾಯೇಲ್ಯರು ಹೀಗೆ ಮಾಡಿದ್ದಿಲ್ಲ. ಸೆರೆಯಿಂದ ತಿರಿಗಿ ಬಂದ ಸರ್ವಸಮೂಹದವರಾದರೋ ಪರ್ಣಶಾಲೆಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಿಸುತ್ತಾ ಬಹು ಸಂತೋಷಪಟ್ಟರು. 

18ಎಜ್ರನು ಮೊದಲನೆಯ ದಿನದಿಂದ ಕಡೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು [ಜನರಿಗೋಸ್ಕರ] ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಿತು.

 

 

 

 

 

 

 

 

Related Quiz Articles