ಪವಿತ್ರ ಗ್ರಂಥದಲ್ಲಿರುವ ಒಡಂಬಡಿಕೆಗಳು

ಮನುಷ್ಯನ ಮತ್ತು ದೇವರ ನಡುವಿನ ಯಾವುದೇ ವ್ಯವಹಾರ ನಡೆದದ್ದು ಒಡಂಬಡಿಕೆಗಳ ಮೂಲಕ
       ರಕ್ತ ಸುರಿಸದೆ ಪಾಪ ಕ್ಷಮಾಪನೆ ಇಲ್ಲ.

ಏದೇನಿನ ಒಡಂಬಡಿಕೆ,

ಆದಿಕಾಂಡ 1:26 ಆಮೇಲೆ ದೇವರು – ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.

27 ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು; ದೇವಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು; ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿದನು.

28 ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ – ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನಮಾಡಿರಿ ಅಂದನು.

29 ಮತ್ತು ದೇವರು – ಇಗೋ, ಸಮಸ್ತಭೂಮಿಯ ಮೇಲೆ ಬೀಜವುಳ್ಳ ಎಲ್ಲಾ ಪೈರುಗಳನ್ನೂ ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ. 30ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಎಂಬ ಜೀವಿಗಳಿಗೆ ಎಲ್ಲಾ ಹುಲ್ಲುಸೊಪ್ಪುಗಳನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಎಂದು ಹೇಳಿದನು; ಅದು ಹಾಗೆಯೇ ಆಯಿತು.

ನೋಹನ ಒಡಂಬಡಿಕೆ

ಆದಿಕಾಂಡ 8:15,16 ಆಗ ದೇವರು ನೋಹನಿಗೆ – ನೀನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ;

20 ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಮಾಡಿ ಅದರ ಮೇಲೆ ಶುದ್ಧವಾದ ಎಲ್ಲಾ ಪಶುಪಕ್ಷಿಜಾತಿಗಳಲ್ಲಿ ಸರ್ವಾಂಗಹೋಮ ಮಾಡಿದನು.

21 ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ – ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.

22 ಭೂಮಿಯು ಇರುವ ತನಕ ಬಿತ್ತನೆಯೂ ಕೊಯಿಲೂ, ಚಳಿಯೂ ಸೆಕೆಯೂ, ಬೇಸಿಗೆಕಾಲವೂ ಹಿಮಕಾಲವೂ, ಹಗಲೂ ಇರುಳೂ ಇವುಗಳ ಕ್ರಮ ತಪ್ಪುವದೇ ಇಲ್ಲ ಅಂದುಕೊಂಡನು.

ಆದಿಕಾಂಡ 9:1 ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ – ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.

2 ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ ಆಕಾಶದ ಎಲ್ಲಾ ಪಕ್ಷಿಗಳೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಸಮುದ್ರದ ಮೀನುಗಳೂ ನಿಮಗೆ ಬೆದರಿ ಅಂಜಿಕೊಳ್ಳುವವು; ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.

3 ಭೂಮಿಯ ಮೇಲೆ ತಿರುಗುವ ಎಲ್ಲಾ ಜೀವಜಂತುಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಪೈರುಗಳನ್ನು ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.

4 ಆದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಬಾರದು; ರಕ್ತವು ಜೀವವಷ್ಟೆ.

5 ಇದಲ್ಲದೆ ನಿಮ್ಮ ರಕ್ತವನ್ನು ಸುರಿಸಿ ಜೀವತೆಗೆಯುವವರಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ ಅದಕ್ಕೂ ಮನುಷ್ಯನಾಗಿದ್ದರೆ, ಹತವಾದವನು ಅವನ ಸಹೋದರನಾಗಿರುವದರಿಂದ, ಅವನಿಗೂ ಮುಯ್ಯಿ ತೀರಿಸುವೆನೆಂದು ತಿಳಿದುಕೊಳ್ಳಿರಿ.

6 ನರಹತ್ಯವು ಸಹೋದರ ಹತ್ಯವಲ್ಲವೇ. ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿಯೇ ಉಂಟುಮಾಡಿದನಾದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾರೋ ಅವರ ರಕ್ತವನ್ನು ಮನುಷ್ಯರೇ ಸುರಿಸುವರು.

7 ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹು ಸಂತಾನವಾಗಲಿ ಎಂದು ಹೇಳಿದನು.

8 ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ –

9 ಕೇಳಿರಿ, ನಾನು ನಿಮ್ಮನ್ನೂ ನಿಮ್ಮ ಸಂತತಿಯವರನ್ನೂ

10 ನಿಮ್ಮ ಕೂಡ ನಾವೆಯಿಂದ ಹೊರಟುಬಂದ ಪಶುಪಕ್ಷಿಮೃಗಾದಿ ಸಕಲ ಭೂಜಂತುಗಳನ್ನೂ ಕುರಿತು ಸ್ಥಿರಪ್ರತಿಜ್ಞೆ ಮಾಡುತ್ತೇನೆ;

11 ಆ ಪ್ರತಿಜ್ಞೆ ಯಾವದೆಂದರೆ – ಇನ್ನು ಮೇಲೆ ಎಲ್ಲಾ ಪ್ರಾಣಿಗಳು ಪ್ರಳಯದಿಂದ ನಾಶವಾಗುವದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳು ಮಾಡುವ ಪ್ರಳಯವು ಬರುವದೇ ಇಲ್ಲ ಎಂದು ಹೇಳಿದನು.

ಅಬ್ರಾಹಾಮನ ಒಡಂಬಡಿಕೆ

ಅಬ್ರಹಾಮನ ಒಡಂಬಡಿಕೆಯ ಬಗೆಗಿನ ಜ್ಞಾನ ನಮಗೆ ಮುಖ್ಯ,ಏಕೆಂದರೆ ಶಿಲುಬೆಯ ಮೂಲದ ಹೊಸ ಒಡಂಬಡಿಕೆಯ ಮೂಲಕ ಯೇಸು ನಮ್ಮನ್ನು  ಅಬ್ರಹಾಮನ ಒಡಂಬಡಿಕೆಗೂ  ಮತ್ತೂ ಅಬ್ರಹಾಮನ ವಾಗ್ದಾನಕ್ಕೂ ಕೂಡಿಸಿದೆ 

ಆದಿಕಾಂಡ 12:1ಯೆಹೋವನು ಅಬ್ರಾಮನಿಗೆ – ನೀನು ಸ್ವದೇಶವನ್ನೂ ಬಂಧು ಬಳಗವನ್ನೂ ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು.

2 ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.

3 ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.

4 ಯೆಹೋವನು ಹೇಳಿದ ಮೇರೆಗೆ ಅಬ್ರಾಮನು ಹೊರಟುಹೋದನು; ಲೋಟನೂ ಸಂಗಡ ಹೋದನು. ಅಬ್ರಾಮನು ಖಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.

ಆದಿಕಾಂಡ 15:1 ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.

2 ಅದಕ್ಕೆ ಅಬ್ರಾಮನು – ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನಾಗಿ ಹೋಗುವೆನಾದದರಿಂದ ನನ್ನ ಆಸ್ತಿಯೆಲ್ಲಾ ದಮಸ್ಕದ ಎಲೀಯೆಜರನ ಪಾಲಾಗುವದಲ್ಲಾ ಅಂದನು.

3 ತಿರಿಗಿ ಅಬ್ರಾಮನು – ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು ಎಂದು ಹೇಳಲು ಯೆಹೋವನು ಅವನ ಸಂಗಡ ಮಾತಾಡಿ –

4 ಇವನು ನಿನಗೆ ಬಾಧ್ಯಸ್ಥನಾಗುವದಿಲ್ಲ; ನಿನ್ನ ಹೊಟ್ಟೆಯಲ್ಲೇ ಹುಟ್ಟುವವನು ನಿನಗೆ ಬಾಧ್ಯಸ್ಥನಾಗುವನು ಎಂದು ಹೇಳಿ

5 ಅವನನ್ನು ಹೊರಗೆ ಕರತಂದು – ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವದು ನಿನ್ನಿಂದಾದರೆ ಲೆಕ್ಕಿಸು; ನಿನ್ನ ಸಂತಾನವು ಅಷ್ಟಾಗುವದು ಅಂದನು.

6 ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಿದನು.

ಬಲಿಪೀಠ ಕಟ್ಟುವುದು 

7 ಆಮೇಲೆ ಆತನು ಅವನಿಗೆ – ಈ ದೇಶದ ಬಾಧ್ಯತೆಯನ್ನು ನಿನಗೆ ಕೊಡುವದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನೇ ನಾನು ಎಂದು ಹೇಳಲು ಅವನು –

8 ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳುಕೊಳ್ಳುವದು ಹೇಗೆ ಎಂದು ಕೇಳಿದನು.

9 ಅದಕ್ಕೆ ಆತನು – ನೀನು ಮೂರು ಮೂರು ವರುಷಗಳ ಮಣಕ, ಆಡು, ಟಗರು ಇವುಗಳನ್ನೂ ಬೆಳವಕ್ಕಿಯನ್ನೂ ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ ಅಂದನು.

10 ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಪಶುಗಳನ್ನು ಕಡಿದು ಎರಡೆರಡು ಹೋಳುಮಾಡಿ ತುಂಡಿಗೆ ತುಂಡನ್ನು ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಕಡಿಯಲಿಲ್ಲ.

11 ಆ ಶವಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.

12 ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಭಯಭ್ರಾಂತನಾದನು.

13 ಆಗ ಯೆಹೋವನು ಅವನಿಗೆ – ನೀನು ಚೆನ್ನಾಗಿ ತಿಳಿಯತಕ್ಕದ್ದೇನಂದರೆ – ನಿನ್ನ ಸಂತತಿಯವರು ಅನ್ಯದೇಶದಲ್ಲಿ ಕೆಲವು ಕಾಲವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರುಷ ಆ ದೇಶದವರಿಂದ ಬಾಧೆಪಡುವರು.

14 ಅವರಿಂದ ಬಿಟ್ಟೀಕೆಲಸ ಮಾಡಿಸಿಕೊಂಡ ಜನಾಂಗವನ್ನು ನಾನು ಶಿಕ್ಷಿಸಿದ ನಂತರ ಅವರು ಬಹಳ ಆಸ್ತಿವಂತರಾಗಿ ಆ ದೇಶದಿಂದ ಬಿಡುಗಡೆಯಾಗಿ ಬರುವರು.

15 ನೀನಂತೂ ಸಮಾಧಾನದೊಡನೆ ಪಿತೃಗಳ ಬಳಿಗೆ ಸೇರುವಿ; ತುಂಬಾ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.

16 ನಿನ್ನ ಸಂತತಿಯವರು ನಾಲ್ಕನೆಯ ತಲಾಂತರದಲ್ಲಿ ಇಲ್ಲಿಗೆ ತಿರಿಗಿಬರುವರು; ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ ಎಂದು ಹೇಳಿದನು.

17 ಹೊತ್ತು ಮುಣುಗಿ ಕಾರ್ಗತ್ತಲಾದಾಗ ಇಗೋ ಹೊಗೆಹಾಯುವ ಒಲೆಯೂ ಉರಿಯುವ ದೀವಟಿಗೆಯೂ ಕಾಣಿಸಿ ಆ ತುಂಡುಗಳ ನಡುವೆ ಹೋದವು.

18 ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು – ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು;

19 ಅಂದರೆ ಕೇನಿಯರೂ ಕೆನಿಜೀಯರೂ ಕದ್ಮೋನಿಯರೂ

20ಹಿತ್ತಿಯರೂ ಪೆರಿಜೀಯರೂ ರೆಫಾಯರೂ ಅಮೋರಿಯರೂ

21 ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ಕೊಡುವೆನೆಂದು ವಾಗ್ದಾನ ಮಾಡಿದನು.

ಆದಿಕಾಂಡ 17:1 ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು – ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.

2 ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ಕೊಡುವೆನು ಅಂದನು.

3 ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತಾಡಿ –

4 ನಾನಂತೂ ನಿನಗೆ ವಾಗ್ದಾನಮಾಡುತ್ತೇನೆ; ಏನಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ.

5 ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲ ಪಿತೃವಾಗಿ ನೇಮಿಸಿರುವದರಿಂದ ನಿನಗೆ ಅಬ್ರಹಾಮನೆಂದು ಹೆಸರಿರುವದು.

6 ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು; ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರೂ ಹುಟ್ಟುವರು.

7 ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದು ನಾನು ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.

8 ನೀನು ಪ್ರವಾಸವಾಗಿರುವ ಕಾನಾನ್‍ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟು ಅವರಿಗೆ ದೇವರಾಗಿರುವೆನು ಅಂದನು.

9 ಇದಲ್ಲದೆ ದೇವರು ಅಬ್ರಹಾಮನಿಗೆ – ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರೂ ಎಲ್ಲಾ ತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.

10 ನೀನೂ ನಿನ್ನ ಹಿಂದೆ ಬರುವ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ನಿಬಂಧನೆಯು ಯಾವದಂದರೆ – ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕೆಂಬದೇ.

11 ನೀವು ಮಾನಸ್ಥಾನದಲ್ಲಿ ಸುನ್ನತಿ ಮಾಡಿಸಿಕೊಳ್ಳಬೇಕು; ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತು.

12 ಎಲ್ಲಾ ತಲಾಂತರಗಳಲ್ಲಿ ನಿಮ್ಮಲ್ಲಿರುವ ಪ್ರತಿಯೊಬ್ಬ ಗಂಡಸೂ, ಮನೆಯಲ್ಲಿ ಹುಟ್ಟಿದವನಾದರೂ ನಿನ್ನ ಸಂತತಿಯಲ್ಲಿ ಹುಟ್ಟದೆ ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾದರೂ ಎಂಟು ದಿನಗಳ ವಯಸ್ಸುಳ್ಳವನಾದಾಗ ಅವನಿಗೆ ಸುನ್ನತಿ ಮಾಡಿಸಬೇಕು.

13 ನಿನ್ನ ಮನೆಯಲ್ಲಿ ಹುಟ್ಟಿದವರಿಗೂ ನೀನು ಕ್ರಯಕ್ಕೆ ತೆಗೆದುಕೊಂಡವರಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ನಿಬಂಧನೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವದು.

14 ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಮೀರಿದವನಾದ ಕಾರಣ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳಿದನು.

15 ಇದಲ್ಲದೆ ದೇವರು ಅಬ್ರಹಾಮನಿಗೆ – ನೀನು ಇನ್ನು ಮುಂದೆ ನಿನ್ನ ಪತ್ನಿಯನ್ನು ಸಾರಯಳೆಂದು ಕರೆಯದೆ ಸಾರಾ ಎಂದು ಕರೆಯಬೇಕು.

16 ನಾನು ಆಕೆಯನ್ನು ಆಶೀರ್ವದಿಸಿ ಆಕೆಯಲ್ಲಿ ನಿನಗೆ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು ಎಂದು ಹೇಳಲು ಅಬ್ರಹಾಮನು ಅಡ್ಡಬಿದ್ದು ನಕ್ಕು –

17 ನೂರು ವರುಷದವನಿಗೆ ಮಗ ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆತ್ತಾಳೇ ಎಂದು ಮನಸ್ಸಿನಲ್ಲಿ ಅಂದುಕೊಂಡು ದೇವರಿಗೆ

18 ಇಷ್ಮಾಯೇಲನಿದ್ದಾನಲ್ಲಾ, ಅವನೇ ನಿನ್ನ ದಯೆಹೊಂದಿ ಬಾಳಲಿ ಎನ್ನಲು ದೇವರು –

19 ಹಾಗಲ್ಲ, ನಿನ್ನ ಪತ್ನಿಯಾದ ಸಾರಳಲ್ಲಿಯೇ ನಿನ್ನಿಂದ ಮಗನು ಹುಟ್ಟುವನು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರಬೇಕು.

20 ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು.

21 ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನ ಸಂಗಡಲೇ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರುಷ ಇದೇ ಕಾಲದಲ್ಲಿ ಸಾರಳು ಅವನನ್ನು ಹೆರುವಳು ಅಂದನು.

22 ಆಗ ದೇವರು ಅಬ್ರಹಾಮನ ಸಂಗಡ ಮಾತಾಡುವದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಹೋದನು.

23 ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.

24 ಅಬ್ರಹಾಮನಿಗೆ ಸುನ್ನತಿಯಾದಾಗ ಅವನಿಗೆ ತೊಂಭತ್ತೊಂಭತ್ತು ವರುಷವಾಗಿತ್ತು. 25ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರುಷವಾಗಿತ್ತು.

26 ಅಬ್ರಹಾಮನಿಗೂ ಅವನ ಮಗನಾದ ಇಷ್ಮಾಯೇಲನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು.

27 ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನೊಂದಿಗೆ ಸುನ್ನತಿಯಾಯಿತು.

ಆದಿಕಾಂಡ 22:1ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರಿಶೋಧಿಸಿದನು. ಹೇಗಂದರೆ ಆತನು ಅವನನ್ನು – ಅಬ್ರಹಾಮನೇ ಎಂದು ಕರೆಯಲು ಅವನು – ಇಗೋ, ಇದ್ದೇನೆ ಅಂದನು.

2 ಆಗಲಾತನು – ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು ಅಂದನು.

3 ಬೆಳಿಗ್ಗೆ ಅಬ್ರಹಾಮನು ಎದ್ದು ಕತ್ತೆಗೆ ತಡಿಹಾಕಿಸಿ ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡಿಸಿ ತನ್ನ ಸೇವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.

4 ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು

5 ಅವನು ತನ್ನ ಸೇವಕರಿಗೆ – ನೀವು ಇಲ್ಲೇ ಕತ್ತೆಯ ಬಳಿಯಲ್ಲಿರ್ರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ತಿರಿಗಿ ಬರುತ್ತೇವೆ ಎಂದು ಹೇಳಿದನು.

6 ಆಗ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡನಂತರ ಅವರಿಬ್ಬರೂ ಹೊರಟು ಹೋದರು.

7 ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ – ಅಪ್ಪಾ ಎಂದು ಕರೆಯಲು ಅಬ್ರಹಾಮನು – ಏನು ಮಗನೇ ಅಂದನು. ಇಸಾಕನು – ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ ಎಂದು ಕೇಳಿದ್ದಕ್ಕೆ ಅಬ್ರಹಾಮನು –

8 ಮಗನೇ, ಹೋಮಕ್ಕೆ ಬೇಕಾದ ಕುರಿಯನ್ನು ದೇವರೇ ಒದಗಿಸುವನು ಅಂದನು. ಹೀಗೆ ಅವರಿಬ್ಬರೂ ಹೋದರು.

9 ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ ಕಟ್ಟಿಗೆಯನ್ನು ಒಟ್ಟಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಬಿಗಿದು ಅವನನ್ನು ವೇದಿಯಲ್ಲಿ ಕಟ್ಟಿಗೆಯ ಮೇಲೆ ಇಟ್ಟನು.

10 ಆದರೆ ತನ್ನ ಮಗನನ್ನು ವಧಿಸುವದಕ್ಕೆ ಅವನು

11 ಕೈಚಾಚಿ ಕತ್ತಿಯನ್ನು ಹಿಡಿದುಕೊಳ್ಳಲು ಯೆಹೋವನ ದೂತನು ಆಕಾಶದೊಳಗಿಂದ – ಅಬ್ರಹಾಮನೇ, ಅಬ್ರಹಾಮನೇ ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು – ಇಗೋ, ಇದ್ದೇನೆ ಅಂದನು.

12 ಆ ದೂತನು ಅವನಿಗೆ – ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು.

13  ಅಬ್ರಹಾಮನು ಕಣ್ಣೆತ್ತಿ ನೋಡುವಾಗ ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದುತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.

14 ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. ಯೆಹೋವನ ಬೆಟ್ಟದಲ್ಲಿ ಒದಗುವದು ಎಂಬದಾಗಿ ಇಂದಿನವರೆಗೂ ಹೇಳುವದುಂಟಲ್ಲಾ.

15 ಯೆಹೋವನ ದೂತನು ಆಕಾಶದೊಳಗಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ –

16 ಯೆಹೋವನು ನುಡಿದದ್ದನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕೆ ಹಿಂದೆಗೆಯದೆ ಹೋದದ್ದರಿಂದ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು;

17 ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು. 

18 ನೀನು ನನ್ನ ಮಾತನ್ನು ಕೇಳಿದ್ದರಿಂದ ಭೂಮಿಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಎಂಬದಾಗಿ ಯೆಹೋವನು ತನ್ನಾಣೆಯಿಟ್ಟು ಹೇಳಿದ್ದಾನೆ ಅಂದನು.

ಅಬ್ರಹಾಮನ ಒಡಂಬಡಿಕೆ ಇಸಾಕನ ಜೊತೆ ನವೀಕರಣ

ಆದಿಕಾಂಡ 26:22 ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ಅಗೆಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದದರಿಂದ ಅವನು – ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದಾನಾದದರಿಂದ ಅಭಿವೃದ್ಧಿಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು. ಇಸಾಕನು ಬೇರ್ಷೆಬದಲ್ಲಿ ತಿರಿಗಿ ದೇವರಿಂದ ವಾಗ್ದಾನವನ್ನು ಹೊಂದಿದ್ದು; ಅಬೀಮೆಲೆಕನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡದ್ದು

23 ಇಸಾಕನು ಅಲ್ಲಿಂದ ಹೊರಟು ಗಟ್ಟಾ ಹತ್ತಿ ಬೇರ್ಷೆಬಕ್ಕೆ ಬಂದನು.

24 ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು – ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಬಳಿಯಲ್ಲಿದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಎಂದು ಹೇಳಲಾಗಿ

25 ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.

26 ಅಲ್ಲಿಯೂ ಅವನ ಸೇವಕರು ಬಾವಿಯನ್ನು ಅಗೆದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು –

27 ನೀವು ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ ಎಂದು ಅವರನ್ನು ಕೇಳಿದ್ದಕ್ಕೆ ಅವರು –

28 ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡುಬಂದದರಿಂದ ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.

29 ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದೊಡನೆ ಕಳುಹಿಸಿದೆವಲ್ಲಾ; ಅದರಂತೆ ನೀನು ನಮಗೆ ಕೇಡನ್ನು ಮಾಡುವದಿಲ್ಲವೆಂಬದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಷ್ಟೆ ಎಂದು ಹೇಳಿದರು.

ಅಬ್ರಹಾಮನ ಒಡಂಬಡಿಕೆ ಯಾಕೋಬನೊಂದಿಗೆ  ನವೀಕರಣ

ಆದಿಕಾಂಡ 35:9 ಯಾಕೋಬನು ಪದ್ದನ್ಅರಾಮಿನಿಂದ ಬಂದಾಗ ದೇವರು ತಿರಿಗಿ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.

10 ದೇವರು ಅವನಿಗೆ – ನಿನ್ನ ಹೆಸರು ಯಾಕೋಬನಲ್ಲವೇ; ಇನ್ನು ಮೇಲೆ ನೀನು ಯಾಕೋಬನೆನಿಸಿಕೊಳ್ಳದೆ ಇಸ್ರಾಯೇಲನೆನಿಸಿಕೊಳ್ಳಬೇಕು ಎಂದು ಹೇಳಿ ಅವನಿಗೆ ಇಸ್ರಾಯೇಲ ಎಂದು ಹೆಸರಿಟ್ಟನು.

11 ಇದಲ್ಲದೆ ನಾನು ಸರ್ವಶಕ್ತನಾದ ದೇವರು. ನೀನು ಬಹು ಸಂತಾನವುಳ್ಳವನಾಗಿ ಹೆಚ್ಚು. ನಿನ್ನಿಂದ ಜನಾಂಗವುಂಟಾಗುವದು; ಅನೇಕ ಜನಾಂಗಗಳೂ ಅರಸರೂ ನಿನ್ನಿಂದ ಹುಟ್ಟುವರು.

12 ನಾನು ಅಬ್ರಹಾಮ್ ಇಸಾಕರಿಗೆ ವಾಗ್ದಾನಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೂ ಕೊಡುವೆನು ಎಂದು ಹೇಳಿ

13 ತಾನು ಅವನ ಸಂಗಡ ಮಾತಾಡಿದ ಸ್ಥಳದಿಂದ ಮೇಲಕ್ಕೇರಿ ಹೋದನು.

14 ಯಾಕೋಬನು ತನ್ನ ಸಂಗಡ ದೇವರು ಮಾತಾಡಿದ ಸ್ಥಳದಲ್ಲಿ ಕಲ್ಲಿನ ಕಂಬವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೇ ಹೊಯಿದನು.

15 ಅವನು ತನ್ನ ಸಂಗಡ ದೇವರು ಮಾತಾಡಿದ ಸ್ಥಳಕ್ಕೆ ಬೇತೇಲೆಂದು ಹೆಸರಿಟ್ಟನು.

1 ಪೂರ್ವಕಾಲವೃತ್ತಾಂತ 16 :14ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.

15 ಆತನು ಸಾವಿರ ತಲೆಗಳವರೆಗಿರುವವರಿಗೂ ಮಾಡಿದ ವಾಗ್ದಾನ, ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.

16 ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ಆಣೆಯಿಟ್ಟನು.

17 ಅದು ರಾಜಶಾಸನದಂತಿರುವದೆಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು.

18 ನೀವು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್ ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ

19 ಆತನು – ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿರುವದು ಎಂದು ಹೇಳಿದನು.

20 ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ

21 ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ –

22 ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು ಎಂದು ಹೇಳಿದನು.

ಅಬ್ರಹಾಮನ ಒಡಂಬಡಿಕೆ ನಮ್ಮೊಂದಿಗೆ ಈಗ  ನವೀಕರಣಗೊಂಡಿದೆ: 

ಗಲಾತ್ಯದವರಿಗೆ 3 :6 ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬದಾಗಿ ಬರೆದದೆಯಲ್ಲಾ.

7 ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.

8 ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬದಾಗಿ ಶಾಸ್ತ್ರವು ಮೊದಲೇ ಕಂಡು ಅಬ್ರಹಾಮನಿಗೆ – ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಶುಭವರ್ತಮಾನವನ್ನು ಮುಂಚಿತವಾಗಿಯೇ ತಿಳಿಸಿತು.

9 ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಸೌಭಾಗ್ಯವನ್ನು ಹೊಂದುವರು.

13 ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ

14 ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ.

ಅಬ್ರಹಾಮನ ಒಡಂಬಡಿಕೆಯ ಮೂಲಕ ಹೊಂದಿದನ್ನು ,ಮೋಶೆಯ ಧರ್ಮಶಾಸ್ತ್ರವು ರದ್ದುಗೊಳಿಸಲಾಗಲಿಲ್ಲ 

17 ನನ್ನ ತಾತ್ಪರ್ಯವೇನಂದರೆ, ದೇವರು ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರಮೂವತ್ತು ವರುಷಗಳ ಮೇಲೆ ಬಂದ ಧರ್ಮಶಾಸ್ತ್ರವು ರದ್ದುಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.

18 ಆ ಬಾಧ್ಯತೆಯು ಕರ್ಮಮಾರ್ಗದಿಂದ ದೊರೆಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯುವದಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.

ಕ್ರಿಸ್ತನ ಮೂಲಕ ಅಬ್ರಹಾಮನ ಸಂತತಿಯವರು ಭಾಧ್ಯರು.

26 ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಪುತ್ರರಾಗಿದ್ದೀರಿ.

27 ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ದೀಕ್ಷಾಸ್ನಾನಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿಕೊಂಡಿರಿ.

28 ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.

29 ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರೂ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

ಮೋಶೆಯ ಒಡಂಬಡಿಕೆ ( ಮೋಶೆಯ ಮೂಲಕ ಜನರಿಗೆ ಉಂಟಾದ ಒಡಂಬಡಿಕೆ)

ಇದು 10 ಕಟ್ಟಳೆಗಳನ್ನು ,613 ಕಟ್ಟಳೆಗಳನ್ನು,ಮೋಶೆಯ ಧರ್ಮಶಾಸ್ತ್ರಗಳನ್ನು ಒಳಗೊಂಡಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ವಿಮೋಚನಕಾಂಡ ಅಧ್ಯಾಯ19:24 ಓದಿ 

ವಿಮೋಚನಕಾಂಡ 19:1ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿವಸದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.

2 ಅವರು ರೆಫೀದೀಮನ್ನು ಬಿಟ್ಟು ಆ ಅರಣ್ಯಕ್ಕೆ ಬಂದಾಗ ಅಲ್ಲಿ ಬೆಟ್ಟಕ್ಕೆ ಎದುರಾಗಿ ಇಳುಕೊಂಡರು.

3 ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದಾಗ ಯೆಹೋವನು ಅವನಿಗೆ ಬೆಟ್ಟದ ಮೇಲಿನಿಂದ ಕೂಗಿ – ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ಯರಿಗೆ ಈ ಮಾತುಗಳನ್ನು ಹೇಳಬೇಕು;

4 ಏನಂದರೆ – ನಾನು ಐಗುಪ್ತ್ಯರಿಗೆ ಏನು ಮಾಡಿದೆನೋ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ನನ್ನ ಸ್ಥಳಕ್ಕೆ ಹೇಗೆ ಸೇರಿಸಿದೆನೋ ಇದನ್ನೆಲ್ಲಾ ನೀವು ನೋಡಿದ್ದೀರಷ್ಟೆ.

5 ಹೀಗಿರಲಾಗಿ ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಮಾಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯಜನರಾಗುವಿರಿ; ಸಮಸ್ತ ಭೂಮಿಯೂ ನನ್ನದಷ್ಟೆ.

6 ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನವೂ ಆಗಿರುವಿರಿ. ಇವೇ ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದ ಮಾತುಗಳು ಎಂದನು.

7 ಆಗ ಮೋಶೆ ಬಂದು ಜನರ ಹಿರಿಯರನ್ನು ಕೂಡಿಸಿ ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.

8 ಜನರೆಲ್ಲರೂ – ಯೆಹೋವನು ಹೇಳಿದಂತೆಯೇ ಮಾಡುವೆವು ಎಂದು ಒಗ್ಗಟ್ಟಾಗಿ ಪ್ರತ್ಯುತ್ತರ ಕೊಡಲಾಗಿ ಮೋಶೆ ಯೆಹೋವನ ಬಳಿಗೆ ಹೋಗಿ ಅವರ ಮಾತುಗಳನ್ನು ಆತನಿಗೆ ಅರಿಕೆ ಮಾಡಿದನು.

9 ಯೆಹೋವನು ಮೋಶೆಗೆ – ಇಗೋ ನಾನು ನಿನ್ನ ಸಂಗಡ ಮಾತಾಡುವಾಗ ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು ಎಂದು ಹೇಳಿದನು. 

ಮೋಶೆಯ ಒಡಂಬಡಿಕೆಗೆ ಮುದ್ರೆ

ವಿಮೋಚನಕಾಂಡ 24: 3-8

3 ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ನ್ಯಾಯವಿಧಿಗಳನ್ನೂ ವಿವರಿಸಲು ಜನರೆಲ್ಲರು – ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು ಎಂದು ಒಕ್ಕಟ್ಟಾಗಿ ಉತ್ತರ ಕೊಟ್ಟರು.

4 ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಆ ಬೆಟ್ಟದ ಬುಡದಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿ ಇಸ್ರಾಯೇಲ್ಯರ ಯೌವನಸ್ಥರಿಗೆ –

5 ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟನು.

6 ಆಗ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.

7 ತರುವಾಯ ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ – ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗಿರುವೆವು ಅಂದರು.

8 ಆಗ ಮೋಶೆ ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮಿಕಿಸಿ – ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವು ಇದೇ ಅಂದನು.

ಸಬ್ಬತ್ತಿನ ಮೂಲಕ ಒಡಂಬಡಿಕೆ

ವಿಮೋಚನಕಾಂಡ 31:12 ಯೆಹೋವನು ಮೋಶೆಗೆ ಹೀಗಂದನು –

13 ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾದದ್ದೇನಂದರೆ – ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ನೀವು ತಿಳುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು.

14 ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪರಿಶುದ್ಧವಾದದ್ದೆಂದು ಎಣಿಸಿ ನಡೆದವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಕೆಲಸವೇನಾದರೂ ಮಾಡುವವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.

15 ಆರು ದಿನಗಳು ಕೆಲಸಮಾಡಬೇಕು; ಏಳನೆಯ ದಿವಸ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ; ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು;

16 ಆದದರಿಂದ ಇಸ್ರಾಯೇಲ್ಯರು ಸಬ್ಬತ್ ದಿವಸವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಬಂಧನೆ.

17 ನನಗೂ ಇಸ್ರಾಯೇಲ್ಯರಿಗೂ ನಡುವೆ ಇದು ಸದಾಕಾಲವೂ ಗುರುತು. ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೆ ವಿಶ್ರಮಿಸಿಕೊಂಡನಲ್ಲವೇ.

ಯೇಸುಕ್ರಿಸ್ತನ ಮೂಲಕ ಹೊಸ ಒಡಂಬಡಿಕೆ 

ಇಬ್ರಿಯರಿಗೆ 8:1ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನಂದರೆ – ಪರಲೋಕದೊಳಗೆ ಮಹತ್ವವುಳ್ಳ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.

2 ಈತನು ಪವಿತ್ರಸ್ಥಾನದಲ್ಲಿ ಅಂದರೆ ಮನುಷ್ಯನು ಹಾಕದೆ ಕರ್ತನೇ ಹಾಕಿದ ನಿಜವಾದ ದೇವದರ್ಶನಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.

3 ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರುತ್ತಾನಷ್ಟೆ ; ಆದದರಿಂದ ಸಮರ್ಪಿಸುವದಕ್ಕೆ ಈ ಮಹಾಯಾಜಕನಿಗೂ ಏನಾದರೂ ಇರಬೇಕು.

4 ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇ ಆದರೆ ಯಾಜಕನಾಗಿರುತ್ತಿರಲಿಲ್ಲ; ಯಾಕಂದರೆ ಧರ್ಮನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದೇ ಇರುತ್ತಾರೆ;

5 ಅವರು ಪರಲೋಕದಲ್ಲಿರುವ ದೇವಾಲಯದ ಪ್ರತಿರೂಪವೂ ಛಾಯೆಯೂ ಆಗಿರುವ ಆಲಯದಲ್ಲಿ ಯಾಜಕತ್ವವನ್ನು ನಡಿಸುವವರು. ಮೋಶೆಯು ದೇವದರ್ಶನಗುಡಾರವನ್ನು ಮಾಡುವದಕ್ಕಿದ್ದಾಗ ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು ಎಂಬ ದೈವೋಕ್ತಿಯು ಅವನಿಗೆ ಉಂಟಾಯಿತಲ್ಲಾ.

6 ಆದರೆ ಯೇಸು ಅದಕ್ಕಿಂತ ಶ್ರೇಷ್ಠವಾದ ಯಾಜಕೋದ್ಯೋಗವನ್ನು ಹೊಂದಿದವನಾಗಿದ್ದಾನೆ; ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.

7 ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ ಎರಡನೆಯ ಒಡಂಬಡಿಕೆಗೆ ಅವಕಾಶವು ಇರುತ್ತಿರಲಿಲ್ಲ.

8 ಆದರೆ ದೇವರು ಆ ಒಡಂಬಡಿಕೆಗೆ ಸೇರಿದವರ ಮೇಲೆ ತಪ್ಪುಹೊರಿಸಿ ಹೀಗೆಂದನು – ಇಗೋ, ನಾನು ಇಸ್ರಾಯೇಲ್‍ವಂಶದವರೊಂದಿಗೂ ಯೆಹೂದವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು ಎಂದು ಕರ್ತನು ಹೇಳುತ್ತಾನೆ;

9 ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರಕೊಂಡು ಬಂದ ಕಾಲದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದದರಿಂದ ನಾನು ಅವರ ಚಿಂತೆಯನ್ನು ಬಿಟ್ಟೆನೆಂದು ಕರ್ತನು ಹೇಳುತ್ತಾನೆ.

10 ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು – ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;

11 ಒಂದೇ ಊರಿನವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು – ಕರ್ತನ ಜ್ಞಾನವನ್ನು ಪಡೆಯಿರಿ ಎಂದು ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು;

12 ನಾನು ಅವರ ದುಷ್ಕೃತ್ಯಗಳ ವಿಷಯವಾಗಿ ಕ್ಷಮೆಯುಳ್ಳವನಾಗಿರುವೆನು, ಅವರ ಪಾಪಗಳನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯುತ್ತಾನೆ.

13 ಇಲ್ಲಿ ಹೊಸ ಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೇದಾಗಿ ಮಾಡಿದ್ದಾನೆ. ಆದರೆ ಹಳೇದಾಗುತ್ತಾ ಮುದಿಯಾಗುವಂಥದಕ್ಕೆ ಅಂತ್ಯವು ಸಮೀಪವಾಗಿದೆ.

ಇಬ್ರಿಯರಿಗೆ 9: 11ಆದರೆ ಕ್ರಿಸ್ತನು ಈಗ ದೊರೆತಿರುವ ಮೇಲುಗಳನ್ನು ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಸೃಷ್ಟಿಗೆ ಸಂಬಂಧಪಡದಂಥ ಘನವಾಗಿಯೂ ಉತ್ಕೃಷ್ಟವಾಗಿಯೂ ಇರುವ ಗುಡಾರದಲ್ಲಿ ಸೇವೆಯನ್ನು ಮಾಡುವವನಾಗಿ

12 ಹೋತಗಳ ಮತ್ತು ಹೋರಿಕರಗಳ ರಕ್ತವನ್ನು ತೆಗೆದುಕೊಳ್ಳದೆ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ದೇವರ ಸನ್ನಿಧಾನಕ್ಕೆ ಪ್ರವೇಶಿಸಿದನು.

13 ಹೋತಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚೆಲ್ಲುವ ಕಡಸಿನ ಬೂದಿಯೂ ಶರೀರದ ಹೊಲೆಯನ್ನು ಹೋಗಲಾಡಿಸಿ ಪವಿತ್ರಮಾಡುವದಾದರೆ

14 ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.

15 ಮತ್ತು ಈ ಕಾರಣದಿಂದ ಆತನು ಒಂದು ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. ಮೊದಲನೆಯ ಒಡಂಬಡಿಕೆಯ ಕಾಲದಲ್ಲಿ ನಡೆದ ಅಕ್ರಮಗಳ ಪರಿಹಾರಕ್ಕಾಗಿ ಆತನು ಮರಣವನ್ನು ಅನುಭವಿಸಿದ್ದರಿಂದ ದೇವರಿಂದ ಕರೆಯಿಸಿಕೊಂಡವರು ವಾಗ್ದಾನವಾಗಿದ್ದ ನಿತ್ಯಬಾಧ್ಯತೆಯನ್ನು ಹೊಂದುವದಕ್ಕೆ ಆತನ ಮೂಲಕ ಮಾರ್ಗವಾಯಿತು.

ಮದ್ಯಸ್ತನ ಮರಣ ಆಗಲೇಬೇಕು 

16 ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವು ಪ್ರಸಿದ್ಧವಾಗಿರಬೇಕಷ್ಟೆ.

17 ಮರಣಶಾಸನವು ಮರಣವಾದ ಮೇಲೆ ನಡೆಯುವದೇ ಹೊರತು ಬರೆಯಿಸಿದವನು ಜೀವದಿಂದಿರುವಾಗ ಎಂದಿಗೂ ಸಲ್ಲುವದಿಲ್ಲ.

18 ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾದರೂ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.

19 ಮೋಶೆಯು ದೇವರ ವಿಧಿಗಳನ್ನೆಲ್ಲಾ ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೆ, ಹಿಸ್ಸೋಪು ಕಡ್ಡಿ ಇವುಗಳೊಂದಿಗೆ ಹೋರಿಕರಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು –

20 ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವಾಗಿದೆ ಎಂದು ಹೇಳಿ ಅದನ್ನು ಗ್ರಂಥದ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.

21 ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಉಪಕರಣಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು.

22 ಧರ್ಮಶಾಸ್ತ್ರದ ಪ್ರಕಾರ ಸ್ವಲ್ಪಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತಧಾರೆಯಿಲ್ಲದೆ ಪಾಪಪರಿಹಾರ ಉಂಟಾಗುವದಿಲ್ಲ.

26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಟ್ಟು ಸಾಯಬೇಕಾಗಿತ್ತು. ಆದರೆ ಒಂದೇ ಸಾರಿ ಯುಗಗಳ ಸಮಾಪ್ತಿಯಲ್ಲೇ ಆತನು ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ತನ್ನನ್ನು ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.

27 ಒಂದೇ ಸಾರಿ ಸಾಯುವದೂ ಆಮೇಲೆ ನ್ಯಾಯತೀರ್ಪೂ ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ ಹಾಗೆಯೇ ಕ್ರಿಸ್ತನು ಸಹ ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತನಾದನು, 28ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

ಹೊಸ ಒಡಂಬಡಿಕೆ v/s ಹಳೆ ಒಡಂಬಡಿಕೆ

ಇಬ್ರಿಯ 12:18ನೀವು ಮುಟ್ಟುವದಕ್ಕೆ ಸಾಧ್ಯವಾದಂಥ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮೋಡದ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ.

19 ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;

20 ಯಾಕಂದರೆ – ಒಂದು ಮೃಗವಾದರೂ ಬೆಟ್ಟಕ್ಕೆ ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ ವಿಧಿಯನ್ನು ತಾಳಲಾರದೆ ಇದ್ದರು.

21 ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು – ನನಗೆ ಬಹು ಭಯವಾಗುತ್ತದೆ, ನಡುಗುತ್ತೇನೆ ಎಂದು ಹೇಳಿದನು.

22 ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ

23 ಪರಲೋಕದಲ್ಲಿ ಹೆಸರು ಬರಸಿಕೊಂಡಿರುವ ಚೊಚ್ಚಲಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಸಿದ್ಧಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ

24 ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

2 ಕೊರಿಂಥದವರಿಗೆ 3 : 4-6

ದೇವರಾತ್ಮ , ಲಿಖಿತರೂಪವಲ್ಲ

4 ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು.

5 ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;

6 ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತ ರೂಪವಾದದ್ದಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತರೂಪವಾದ ಒಡಂಬಡಿಕೆಯು ಮರಣವನ್ನುಂಟುಮಾಡುತ್ತದೆ; ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.

ಹೊಸ ಒಡಂಬಡಿಕೆಯ ಮಹಿಮೆ/ಪ್ರಭಾವ 

7 ಮರಣವಿಧಿಸುವ ನಿಯಮದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿ ಆಧಾರಗೊಂಡಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು. ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿಹೋಗುವಂಥದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ನೋಡಲಾರದೆ ಇದ್ದರು.

8 ಹೀಗಿದ್ದ ಮೇಲೆ ದೇವರಾತ್ಮಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕು.

9 ಅಪರಾಧನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಪ್ರಭಾವದಿಂದಿರಲಾಗಿ ನೀತಿಗೆ ಸಾಧನವಾಗಿರುವ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.

10 ಅಧಿಕವಾದ ಪ್ರಭಾವವುಳ್ಳದ್ದು ಬಂದದರಿಂದ ಮೊದಲಿದ್ದ ಪ್ರಭಾವವು ಅದರ ಬಳಿಯಲ್ಲಿ ಪ್ರಭಾವವಿಲ್ಲದ್ದಾಯಿತು.

11 ಇಲ್ಲದೆಹೋಗುವಂಥದು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಇರುವಂಥದು ಬಹು ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕಲ್ಲವೇ.

14 ಆದರೆ ಅವರ ಬುದ್ಧಿ ಮಂದವಾಯಿತು; ಈ ದಿನದವರೆಗೂ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗ ಅದು ಕ್ರಿಸ್ತನಲ್ಲಿ ಗತಿಸಿಹೋಗುತ್ತದೆಂಬದು ಅವರಿಗೆ ಪ್ರಕಟವಾಗದೆ ಇರುವದರಿಂದ ಅದೇ ಮುಸುಕು ಎತ್ತಲ್ಪಡದೆ ಇರುತ್ತದೆ.

15 ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ.

16 ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.

17 ಆ ಕರ್ತನು ದೇವರಾತ್ಮನೇ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.

18 ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.

ಯೇಸು ಕ್ರಿಸ್ತನ ಮೂಲದ ಹೊಸ ಒಡಂಬಡಿಕೆಯು ನಮ್ಮನ್ನು ಅಬ್ರಹಾಮನ ನಂಬಿಕೆಯ ಒಡಂಬಡಿಕೆಗೆ ಸೇರಿಸುತ್ತದೆ.

ಸುನ್ನತಿ v/s ಹೊಸ ಒಡಂಬಡಿಕೆ

ರೋಮಾಪುರದವರಿಗೆ 2 :25ನೀನು ಧರ್ಮಶಾಸ್ತ್ರಾನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ಪ್ರಯೋಜನಕರವಾದದ್ದೇ ಸರಿ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.

26 ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವದಿಲ್ಲವೇ?

27 ಅವನು ಶರೀರದಲ್ಲಿ ಸುನ್ನತಿಯಿಲ್ಲದವನಾಗಿದ್ದು ಧರ್ಮಶಾಸ್ತ್ರದಲ್ಲಿ ಹೇಳಿದ್ದನ್ನು ನೆರವೇರಿಸುವದರಲ್ಲಿ ಶಾಸ್ತ್ರವೂ ಸುನ್ನತಿಯೂ ಇದ್ದು ಧರ್ಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ನಿರ್ಣಯಿಸುವದಿಲ್ಲವೇ?

28 ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.

29 ಆದರೆ ಒಳಗೆ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಹೃದಯದಲ್ಲಿ ಆಗುವ ಸುನ್ನತಿಯೇ ಸುನ್ನತಿ. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮ ಸಂಬಂಧಪಟ್ಟದ್ದೇ; ಇಂಥಾ ಸುನ್ನತಿಯಿದ್ದವನಿಗೆ ಬರುವ ಹೊಗಳಿಕೆಯು ದೇವರಿಂದಲೇ ಹೊರತು ಮನುಷ್ಯರಿಂದ ಬರುವದಲ್ಲ.

ಮತ್ತಾಯ 5 :17 ಮೋಶೆಯ ಧರ್ಮಶಾಸ್ತ್ರವನ್ನಾಗಲಿ ಪ್ರವಾದಿಗಳ ವಚನಗಳನ್ನಾಗಲಿ ತೆಗೆದುಹಾಕುವದಕ್ಕೆ ನಾನು ಬಂದೆನೆಂದು ನೆನಸಬೇಡಿರಿ. ತೆಗೆದುಹಾಕುವದಕ್ಕೆ ಬಂದಿಲ್ಲ; ನೆರವೇರಿಸುವದಕ್ಕೆ ಬಂದಿದ್ದೇನೆ.

18 ನಿಮಗೆ ಸತ್ಯವಾಗಿ ಹೇಳುತ್ತೇನೆ – ಆಕಾಶವೂ ಭೂಮಿಯೂ ಅಳಿದು ಹೋಗುವ ತನಕ ಧರ್ಮಶಾಸ್ತ್ರವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದುಹೋಗಲಾರದು.

19 ಆದದರಿಂದ ಈ ಸಣ್ಣಸಣ್ಣ ಆಜ್ಞೆಗಳಲ್ಲಿಯಾದರೂ ಒಂದನ್ನು ಮೀರಿ ಜನರಿಗೂ ಹಾಗೆ ಮೀರುವದಕ್ಕೆ ಬೋಧಿಸುವವನು ಪರಲೋಕರಾಜ್ಯದಲ್ಲಿ ಬಹಳ ಚಿಕ್ಕವನೆನಿಸಿಕೊಳ್ಳುವನು; ಆದರೆ ತಾನೇ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕರಾಜ್ಯದಲ್ಲಿ ದೊಡ್ಡವನೆನಿಸಿಕೊಳ್ಳುವನು.

20 ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ ನೀವು ಪರಲೋಕರಾಜ್ಯದಲ್ಲಿ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.

ಮುಂಬರುವ ಹೊಸ ಒಡಂಬಡಿಕೆ ಬಗ್ಗೆ  ಹಳೆ ಒಡಂಬಡಿಕೆಯು ಪ್ರವಾದಿಸಿರುವುದು

ಯೆರೆಮೀಯ 31:27ಯೆಹೋವನು ಇಂತೆನ್ನುತ್ತಾನೆ – ಇಗೋ, ನಾನು ಇಸ್ರಾಯೇಲ್ ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ ಪಶುಗಳನ್ನೂ ಬಿತ್ತುವ ದಿನಗಳು ಬರುವವು.

28 ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.

29 ತಂದೆಗಳು ಹುಳಿದ್ರಾಕ್ಷೆಯನ್ನು ತಿಂದರು, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂದು ಆ ಕಾಲದಲ್ಲಿ ಜನರು ಮತ್ತೆ ಅನ್ನರು.

30 ಸಾಯತಕ್ಕವನು ತನ್ನ ತನ್ನ ದೋಷದಿಂದ ಸಾಯುವನು. ಹುಳಿದ್ರಾಕ್ಷೆಯನ್ನು ತಿನ್ನುವವನ ಹಲ್ಲುಗಳೇ ಚಳಿತುಹೋಗುವವು.

ಯೆಹೋವನು ತನ್ನ ಜನರೊಂದಿಗೆ ಮಾಡಿಕೊಳ್ಳುವ ಹೊಸ ಒಡಂಬಡಿಕೆ

31 ಯೆಹೋವನು ಇಂತೆನ್ನುತ್ತಾನೆ – ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು;

32 ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.

33 ಯೆಹೋವನು ಇಂತೆನ್ನುತ್ತಾನೆ – ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು – ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;

34 ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು – ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.

ಯೆಶಾಯ 59:21ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; ನಿಮ್ಮಲ್ಲಿ ಆವೇಶಿಸಿರುವ ನನ್ನ ಆತ್ಮವೂ ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ ನಿಮ್ಮ ಬಾಯಿಂದಾಗಲಿ ನಿಮ್ಮ ಸಂತತಿಯ ಬಾಯಿಂದಾಗಲಿ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.

ಯೋವೇಲ 2: 28ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು, ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;

29 ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು.

ಮತ್ತಾಯ 26: 27 ಆಮೇಲೆ ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟು – ಇದರಲ್ಲಿರುವದನ್ನು ಎಲ್ಲರೂ ಕುಡಿಯಿರಿ;

28 ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.

1 ಕೊರಿಂಥದವರಿಗೆ 11:25 ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು – ಈ ಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ ಅಂದನು.

26 ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.

27 ಹೀಗಿರುವದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ದ್ರೋಹಮಾಡಿದವನಾಗಿರುವನು.

28 ಪ್ರತಿಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.

29 ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳಗಾಗುವನು.

Related Quiz Articles