ಪೌಲನಲ್ಲಿ ಪರಿಶುದ್ದಾತ್ಮನ ಕ್ರಿಯೆ

1ನೇಮಿಷನರಿಪ್ರಯಾಣ (ಅಪೊಸ್ತಲರಕೃತ್ಯಗಳು13-14)

2ನೇಮಿಷನರಿಪ್ರಯಾಣ (ಅಪೊಸ್ತಲರಕೃತ್ಯಗಳು15:36-18:22)

3ನೇಮಿಷನರಿಪ್ರಯಾಣ  (ಅಪೊಸ್ತಲರಕೃತ್ಯಗಳು18:23-20:38)

ರೋಮಾಪುರಕ್ಕೆ ಪ್ರಯಾಣ (ಅಪೊಸ್ತಲರಕೃತ್ಯಗಳು 27:1 to 28:16).

ಅಪೊಸ್ತಲರ ಕೃತ್ಯಗಳು 20 ಎಫೆಸದ ಹಿರಿಯರಿಂದ ಪೌಲನ ವಿದಾಯ

13ನಾವು ಮೊದಲು ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ಹತ್ತಿಸಿಕೊಳ್ಳಬೇಕೆಂದು ಅಲ್ಲಿಗೆ ಸಮುದ್ರಪ್ರಯಾಣ ಮಾಡಿದೆವು. ಪೌಲನು ತಾನು ಕಾಲುನಡೆಯಾಗಿ ಹೋಗಬೇಕೆಂದು ಹಾಗೆಯೇ ನಮಗೆ ಅಪ್ಪಣೆ ಮಾಡಿದ್ದನು.   
 
14ಅಸ್ಸೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹತ್ತಿಸಿಕೊಂಡು ಮಿತಿಲೇನೆಗೆ ಬಂದೆವು. 
 
15ಅಲ್ಲಿಂದ ಹೊರಟು ಮರುದಿನ ಖೀಯೊಸ್‍ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತರ ಬಂದೆವು. ಅದರ ಮರುದಿನ ಮಿಲೇತಕ್ಕೆ ಸೇರಿದೆವು. 
 
16ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿವಸದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವದಕ್ಕೆ ಮನಸ್ಸಿಲ್ಲದೆ ಎಫೆಸಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.
 
17ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು. 
 
18ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ –
ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲದಲ್ಲಿಯೂ ಹೇಗೆ ನಡಕೊಂಡೆನೆಂಬದನ್ನು ನೀವೇ ಬಲ್ಲಿರಿ. 
 
19ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರ ಒಳ ಸಂಚುಗಳಿಂದ ಸಂಭವಿಸಿದ ಕಷ್ಟಗಳನ್ನು ಸಹಿಸುತ್ತಿದ್ದೆನು. 
 
20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವದಕ್ಕೂ ಸಭೆಯಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗಿಯದೆ 
 
21ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ. 
 
22ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸುವದೋ ನಾನರಿಯೆ. 
 
23ನಿನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಖಂಡಿತವಾಗಿ ಹೇಳುತ್ತಾನೆ; ಇಷ್ಟು ಮಾತ್ರ ಬಲ್ಲೆನು. 
 
24ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ. 
 
25ಇಗೋ, ಇಷ್ಟು ದಿವಸ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ಬಲ್ಲೆನು. 
 
26ಆದಕಾರಣ ನಾನು ಈಹೊತ್ತು ಪ್ರಮಾಣವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ದೋಷವಲ್ಲ. 
 
27ಯಾಕಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದೆನು. 
 
28ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ. 
 
29ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವದಿಲ್ಲ. 
 
30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವ್ಯತ್ಯಾಸ ಬೋಧನೆಗಳನ್ನು ಮಾಡಿ ಯೇಸುವಿನ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು. 
 
31ಆದಕಾರಣ ನಾನು ಕಣ್ಣೀರುಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿಹೇಳಿದೆನೆಂದು ನೀವು ಜ್ಞಾಪಕಮಾಡಿಕೊಂಡು ಎಚ್ಚರವಾಗಿರಿ. 
 
32ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ. 
 
33ನಾನು ಯಾರ ಬೆಳ್ಳಿಬಂಗಾರವನ್ನಾಗಲಿ ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ. 
 
34ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ. 
 
35ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು – ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.
 
36ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು. ಆಗ ಅವರೆಲ್ಲರು ಬಹಳವಾಗಿ ಅತ್ತರು. 
 
37-38ನೀವು ಇನ್ನು ಮೇಲೆ ನನ್ನ ಮುಖವನ್ನು ಕಾಣುವದಿಲ್ಲವೆಂದು ಪೌಲನು ಹೇಳಿದ ಮಾತಿಗೆ ಅವರು ವಿಶೇಷವಾಗಿ ವ್ಯಥೆಪಟ್ಟು ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು. ಆಮೇಲೆ ಅವರು ಅವನನ್ನು ಹಡಗಿಗೆ ಸಾಗಕಳುಹಿಸಿದರು.
 

ಯೆರೂಸಲೇಮಿಗೆ ಪ್ರಯಾಣ

ಅಪೊಸ್ತಲರ ಕೃತ್ಯಗಳು 21

1ನಾವು ಪ್ರಯಾಸದಿಂದ ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೆಟ್ಟಗೆ ಹೋಗಿ ಕೋಸ್ ದ್ವೀಪಕ್ಕೆ ಸೇರಿದೆವು. ಮರುದಿನ ರೋದಕ್ಕೆ ಹೋಗಿ ಅಲ್ಲಿಂದ ಪತರಕ್ಕೆ ಬಂದೆವು. 
 
2ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು ಹತ್ತಿ ಪ್ರಯಾಣವನ್ನು ಸಾಗಿಸಿದೆವು. 
 
3ಮುಂದೆ ಕುಪ್ರದ್ವೀಪವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್‍ಪಟ್ಟಣಕ್ಕೆ ಬಂದು ಇಳಿದೆವು. ಯಾಕಂದರೆ ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು. 
 
4ಅಲ್ಲಿ ಶಿಷ್ಯರನ್ನು ಹುಡುಕಿ ಕಂಡು ಏಳು ದಿವಸ ನಿಂತೆವು. ಅವರು ಆತ್ಮನ ಪ್ರೇರಣೆಯಿಂದ ಪೌಲನಿಗೆ – ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು. 
 
5ಆ ದಿವಸಗಳನ್ನು ತೀರಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ಹೆಂಡರು ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಸಾಗಕಳುಹಿಸಿದರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆಮಾಡಿ 
 
6ಒಬ್ಬರಿಗೊಬ್ಬರು ವಂದನೆಮಾಡಿ ಹಡಗನ್ನು ಹತ್ತಿದೆವು; ಅವರು ಹಿಂತಿರಿಗಿ ತಮ್ಮತಮ್ಮ ಮನೆಗಳಿಗೆ ಹೋದರು.
 
7ನಾವು ತೂರ್‍ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದು 
 
8ಮರುದಿನ ಹೊರಟು ಕೈಸರೈಯಕ್ಕೆ ಬಂದು ಸೌವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳ್ವರಲ್ಲಿ ಒಬ್ಬನು. 
 
9ಅವನಿಗೆ ಮದುವೆಯಾಗದ ನಾಲ್ಕು ಮಂದಿ ಹೆಣ್ಣುಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು. 
 
10ನಾವು ಅಲ್ಲಿ ಅನೇಕ ದಿವಸಗಳು ಇದ್ದ ಮೇಲೆ, ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ನಮ್ಮ ಬಳಿಗೆ ಬಂದು 
 
11ಪೌಲನ ನಡುಕಟ್ಟನ್ನು ತೆಗೆದು ತನ್ನ ಕೈಕಾಲುಗಳನ್ನು ಕಟ್ಟಿಕೊಂಡು – ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿಕೊಡುವರು, ಹೀಗೆ ಪವಿತ್ರಾತ್ಮನು ಹೇಳುತ್ತಾನೆಂಬದಾಗಿ ಹೇಳಿದನು. 
 
12ಆ ಮಾತನ್ನು ಕೇಳಿದಾಗ ನಾವೂ ಆ ಸ್ಥಳದವರೂ – ನೀನು ಯೆರೂಸಲೇಮಿಗೆ ಹೋಗಬಾರದೆಂದು ಪೌಲನನ್ನು ಬೇಡಿಕೊಂಡೆವು.
 
13ಅದಕ್ಕೆ ಪೌಲನು – ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು. 
 
14ಅವನು ಒಡಂಬಡದೆ ಇದ್ದದರಿಂದ ಕರ್ತನ ಚಿತ್ತವಿದ್ದಂತೆ ಆಗಲಿ ಎಂದು ಹೇಳಿ ನಾವು ಸುಮ್ಮಗಾದೆವು.
 
ಇಬ್ರಿಯರಿಗೆ 11:31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
 
32ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‍ಥ ದಾವೀದ್ ಸಮುವೇಲ್ ಎಂಬವರ ವೃತ್ತಾಂತವನ್ನೂ ಪ್ರವಾದಿಗಳ ವೃತ್ತಾಂತವನ್ನೂ ವಿವರವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು. 
 
33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು; 
 
34ಸಿಂಹಗಳ ಬಾಯಿ ಕಟ್ಟಿದರು; ಬೆಂಕಿಯ ಬಲವನ್ನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು. 
 
35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಪುನರುತ್ಥಾನದಿಂದ ತಿರಿಗಿ ಹೊಂದಿದರು. ಕೆಲವರು ತಾವು ಯಾತನೆಯ ಯಂತ್ರಕ್ಕೆ ಕಟ್ಟಲ್ಪಟ್ಟಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿ ಮುರಿಸಿಕೊಂಡು ಸತ್ತರು. 

36ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು. 
 
37ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಕೆಲವರನ್ನು ಗರಗಸದಿಂದ ಕೊಯ್ದು ಕೊಂದರು; ದೇವದ್ರೋಹಿಗಳಾಗಿ ಪ್ರಾಣವನ್ನು ಉಳಿಸಿಕೊಳ್ಳಿರೆಂದು ಕೆಲವರನ್ನು ಪ್ರೇರೇಪಿಸಿದರು; ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ತಿರುಗಾಡಿದರು. 
 
38ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಲ್ಲ; ಅವರು ತಮ್ಮ ದೇಶದ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
 
39ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಹೆಸರನ್ನು ಸಂಪಾದಿಸಿಕೊಂಡಿದ್ದರೂ ವಾಗ್ದಾನದ ಫಲವನ್ನು ಹೊಂದಲಿಲ್ಲ; 
 
40ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ಸಂಕಲ್ಪಿಸಿದನು.
 
 
15ಆ ದಿವಸಗಳಾದ ಮೇಲೆ ಸೌರಿಸಿಕೊಂಡು ಯೆರೂಸಲೇಮಿಗೆ ಹೊರಟೆವು. 
 
16ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ಕರಕೊಂಡು ಹೋದರು. ಆ ಮನೆಯವನು ಆದಿ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.
ಯೆರೂಸಲೇಮಿನ ಸಭೇಹಿರಿಯರು ಹೇಳಿದ ಆಲೋಚನೆಯನ್ನು ಅನುಸರಿಸಿ ಪೌಲನು ವಿರೋಧಿಗಳಾದ ಯೆಹೂದ್ಯಕ್ರೈಸ್ತರನ್ನು ಸಮಾಧಾನಪಡಿಸುವದಕ್ಕೆ ಪ್ರಯತ್ನಮಾಡಿದ್ದು

ಪೌಲನು ಯೆರೂಸಲೇಮಿಗೆ ಆಗಮನ

17ನಾವು ಯೆರೂಸಲೇಮಿಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು. 
 
18ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೇಹಿರಿಯರೆಲ್ಲರು ಸಹ ಬಂದರು. 
 
19ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು. 
20ಅವರು ಇದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ ಹೇಳಿದ್ದು – ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೋಡುತ್ತೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದಲ್ಲಿ ಅಭಿಮಾನಿಗಳಾಗಿದ್ದಾರೆ. 
 
21ನೀನು ಅನ್ಯಜನರಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ – ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ ಮೋಶೆಯ ಧರ್ಮವನ್ನು ತ್ಯಾಗಮಾಡಬೇಕೆಂಬದಾಗಿ ಬೋಧಿಸುತ್ತೀ ಎಂದು ನಿನ್ನ ವಿಷಯದಲ್ಲಿ ಬಹಳವಾಗಿ ಕೇಳಿದ್ದಾರೆ.
 
22ಹೀಗಿರುವಲ್ಲಿ ಏನು ಮಾಡಬೇಕು? ನೀನು ಬಂದಿರುವದನ್ನು ಹೇಗೂ ಕೇಳುವರು. 
 
23ಆದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ವ್ರತಹಿಡಿದವರು ನಾಲ್ಕುಮಂದಿ ಇದ್ದಾರೆ. 
 
24ನೀನು ಅವರನ್ನು ಕರೆದುಕೊಂಡು ಹೋಗಿ ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ವ್ರತವನ್ನು ತೀರಿಸಿಕೊಳ್ಳುವದಕ್ಕಾಗಿ ಅವರಿಗೋಸ್ಕರ ಹಣ ವೆಚ್ಚಮಾಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ ನೀನಾದರೂ ಧರ್ಮಶಾಸ್ತ್ರವನ್ನು ಕೈಕೊಂಡು ನಡೆ
ಯುತ್ತೀ ಎಂತಲೂ ತಿಳುಕೊಳ್ಳುವರು. 
 
25ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವು ಎಂದು ಹೇಳಿದರು. 
 
26ಆಗ ಪೌಲನು ಆ ಮನುಷ್ಯರನ್ನು ಕರೆದುಕೊಂಡು ಮರುದಿನ ಅವರೊಡನೆ ತನ್ನನ್ನು ಶುದ್ಧಿಮಾಡಿಕೊಂಡು ವ್ರತದ ದಿವಸಗಳು ಮುಗಿದವೆಂದು ತಿಳಿಸುವವನಾಗಿ ದೇವಾಲಯದೊಳಗೆ ಹೋದನು. ಪ್ರತಿಯೊಬ್ಬನಿಗೋಸ್ಕರ ಮಾಡಬೇಕಾದ ಅರ್ಪಣೆಯನ್ನು ಮುಂದೆ ಅರ್ಪಿಸಬೇಕಾಗಿತ್ತು.
ಯೆಹೂದ್ಯರು ಪೌಲನ ಮೇಲೆ ಬಿದ್ದು ಕೊಲ್ಲಬೇಕೆಂದಿದ್ದಾಗ ರೋಮ್‍ರಾಜ್ಯದ ಸರದಾರನೂ ಸಿಪಾಯಿಗಳೂ ಅವನನ್ನು ಬಿಡಿಸಿದ್ದು; ಅವನು ಜನರಿಗೆ ಪ್ರತಿವಾದಿಸಿದ್ದು

ಪೌಲನ ಬಂಧನ

27ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಕಲಕಿ ಅವನನ್ನು ಹಿಡಿದು – 
 
28ಇಸ್ರಾಯೇಲ್ ಜನರೇ, ಸಹಾಯಮಾಡಿರಿ, ನಮ್ಮ ಜನರಿಗೂ ಧರ್ಮಶಾಸ್ತ್ರಕ್ಕೂ ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ ಎಂದು ಕೂಗಿದರು. 
 
29ಮುಂಚೆ ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ಕಂಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು. 
 
30ಆಗ ಪಟ್ಟಣವೆಲ್ಲಾ ಕಲಕಿಹೋಯಿತು, ಜನರು ಎಲ್ಲಾ ಕಡೆಯಿಂದ ಓಡಿಬಂದು ಕೂಡಿದರು. ಮತ್ತು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದರು. ಕೂಡಲೇ ಬಾಗಿಲುಗಳನ್ನು ಮುಚ್ಚಿದರು. 
 
31ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲಮಿನ ಸಹಸ್ರಾಧಿಪತಿಗೆ ವರದಿ ಬಂತು. 
 
32ಅವನು ತಕ್ಷಣವೇ ಸಿಪಾಯಿಗಳನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಮೇಲೆ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು. 
 
33ಸಹಸ್ರಾಧಿಪತಿಯು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು –
 
34ಇವನಾರು? ಏನು ಮಾಡಿದ್ದಾನೆ ಎಂದು ಕೇಳಲು ಕೆಲವರು ಹೀಗೆ ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿಮಿತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು.
 
35ಪೌಲನು ಮೆಟ್ಲುಗಳ ಮೇಲೆ ಬಂದಾಗ ಜನರ ನೂಕಾಟದ ನಿಮಿತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.
 
36ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು ಅವನನ್ನು ಕೊಲ್ಲಿರಿ ಎಂದು ಕೂಗುತ್ತಿದ್ದರು.
 

ಪೌಲನು ಜನಸಮೂಹಕ್ಕೆ ಮಾತಾಡಿದ್ದು

37ಪೌಲನನ್ನು ಕೋಟೆಯೊಳಗೆ ಸೇರಿಸುವದರೊಳಗಾಗಿ ಅವನು ಆ ಸಹಸ್ರಾಧಿಪತಿಯನ್ನು – ನಿನಗೆ ಒಂದು ಮಾತು ಹೇಳುವದಕ್ಕೆ ನನಗೆ ಅಪ್ಪಣೆ ಆದೀತೇ? ಎಂದು ಕೇಳಲು ಅವನು – ಗ್ರೀಕ್ ಭಾಷೆ ನಿನಗೆ ಬರುತ್ತದೋ? 
 
38ಕೆಲವು ದಿವಸಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತುಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ ಎಂದು ಕೇಳಿದನು. 
 
39ಅದಕ್ಕೆ ಪೌಲನು – ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.
 
40ಸಹಸ್ರಾಧಿಪತಿಯು ಅಪ್ಪಣೆ ಕೊಡಲು ಪೌಲನು ಮೆಟ್ಲುಗಳ ಮೇಲೆ ನಿಂತುಕೊಂಡು ಜನರಿಗೆ ಕೈಸನ್ನೆಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ –
 

ಅಪೊಸ್ತಲರ ಕೃತ್ಯಗಳು 22

1ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದವನ್ನು ಕೇಳಿರಿ ಎಂದು ಕೂಗಿ ಹೇಳಿದನು.
 
2ಅವನು ತಮ್ಮ ಸಂಗಡ ಇಬ್ರಿಯ ಭಾಷೆಯಲ್ಲಿ ಮಾತಾಡುವದನ್ನು ಕೇಳಿ ಅವರು ಮತ್ತೂ ನಿಶ್ಶಬ್ದವಾದರು. ಆಗ ಅವನು ಹೇಳಿದ್ದೇನಂದರೆ –
 
3ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಿತನಾದೆನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ ನಾನು ಅಭಿಮಾನಿಯಾಗಿದ್ದೆನು. 
 
4ಕ್ರಿಸ್ತ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ ಹೆಂಗಸರಿಗೂ ಬೇಡೀಹಾಕಿಸುತ್ತಾ ಅವರನ್ನು ಸೆರೆಮನೆಗಳಿಗೆ ಕೊಡಿಸುತ್ತಾ ಇದ್ದೆನು, ಅವರ ಕೊಲೆಗಾದರೂ ಹಿಂತೆಗೆಯಲಿಲ್ಲ. 
 
5ಈ ವಿಷಯದಲ್ಲಿ ಮಹಾಯಾಜಕನೂ ಹಿರೀಸಭೆಯವರೆಲ್ಲರೂ ಸಾಕ್ಷಿಗಳಾಗಿದ್ದಾರೆ. ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಕಾಗದಗಳನ್ನು ತೆಗೆದುಕೊಂಡು ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟೆನು. 
 
6ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು. 
 
7ಆಗ – ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆಪಡಿಸುತ್ತೀ? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು. 
 
8ಅದಕ್ಕೆ ನಾನು – ಕರ್ತನೇ, ನೀನಾರು? ಎಂದು ಕೇಳಲು ಆತನು – ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು. 
 
9ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು ನನ್ನ ಸಂಗಡ ಮಾತಾಡಿದವನ ಶಬ್ದವನ್ನು ಕೇಳಲಿಲ್ಲ. 
 
10ಆಗ ನಾನು – ಕರ್ತನೇ, ನಾನೇನು ಮಾಡಬೇಕು? ಎಂದು ಕೇಳಲು ಕರ್ತನು ನನಗೆ – ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವದಕ್ಕೆ ನಿನಗೆ ನೇಮಿಸಿರುವದೆಲ್ಲಾ ಅಲ್ಲಿ ತಿಳಿಸಲ್ಪಡುವದು ಎಂದು ಹೇಳಿದನು. 
 
11ಆ ಬೆಳಕಿನ ಪ್ರಭಾವದಿಂದ ನನಗೆ ಕಣ್ಣುಕಾಣದೆ ಇದ್ದದರಿಂದ ನನ್ನ ಜೊತೆಯಲ್ಲಿದ್ದವರು ನನ್ನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು. 
 
12ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ಸದ್ಭಕ್ತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಒಳ್ಳೆಯವನೆಂದು ಹೆಸರು ಹೊಂದಿದವನೂ 
 
13ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು ನಿಂತು – ಸಹೋದರನಾದ ಸೌಲನೇ, ನಿನಗೆ ಕಣ್ಣುಕಾಣಿಸಲಿ ಎಂದು ಹೇಳಿದನು. ಹೇಳಿದಾಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು. 
 
14ಆಮೇಲೆ ಅವನು – ನಮ್ಮ ಪಿತೃಗಳ ದೇವರು ತನ್ನ ಚಿತ್ತವನ್ನು ನೀನು ತಿಳುಕೊಳ್ಳುವದಕ್ಕೂ ಆ ನೀತಿವಂತನನ್ನು ನೋಡುವದಕ್ಕೂ ಆತನ ಬಾಯಿಂದ ಒಂದು ಮಾತನ್ನು ಕೇಳುವದಕ್ಕೂ ನಿನ್ನನ್ನು ನೇಮಿಸಿದ್ದಾನೆ. 
 
15ನೀನು ಕಂಡು ಕೇಳಿದ್ದರ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು. 
 
16ಈಗ ನೀನೇಕೆ ಸಾವಕಾಶಮಾಡುತ್ತೀ? ಎದ್ದು ಆತನ ಹೆಸರನ್ನು ಹೇಳಿಕೊಳ್ಳುವವನಾಗಿ ದೀಕ್ಷಾಸ್ನಾನಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ ಅಂದನು.
 
17ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ ಧ್ಯಾನಪರವಶನಾಗಿ ಯೇಸುವನ್ನು ಕಂಡೆನು. 
 
18ಆತನು – ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಅಂದನು. 
 
19ಅದಕ್ಕೆ ನಾನು – ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸುತ್ತಾ ಹೊಡಿಸುತ್ತಾ ಇದ್ದೆನೆಂಬದನ್ನು ಅವರೇ ತಿಳಿದಿದ್ದಾರೆ; 20ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ ನಾನೂ ಹತ್ತರ ನಿಂತು ಒಪ್ಪಿಕೊಂಡು ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ ಅಂದೆನು. 
 
21ಆತನು – ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು ಹೇಳಿದನು.
 

ಪೌಲನು ರೋಮಾಪುರದ ಹಕ್ಕುದಾರನು

22ಈ ಮಾತಿನ ತನಕ ಅವರು ಕೇಳುತ್ತಿದ್ದರು; ಆಮೇಲೆ – ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವದು ಯುಕ್ತವಲ್ಲವೆಂದು ಕೂಗಿಹೇಳಿದರು. 
 
23ಅವರು ಕೂಗುತ್ತಾ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ದೂಳನ್ನು ತೂರುತ್ತಾ ಇರಲಾಗಿ 
 
24ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬದನ್ನು ಸಹಸ್ರಾಧಿಪತಿಯು ತಿಳುಕೊಳ್ಳುವದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು. 
 
25ಅವರು ಪೌಲನನ್ನು ಬೊಗ್ಗಿಸಿ ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು – ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ ಕೊರಡೆಗಳಿಂದ ಹೊಡಿಸುವದು ನಿಮಗೆ ನ್ಯಾಯವೋ? ಎಂದು ಕೇಳಿದನು. 
 
26ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ – ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು ಎಂದು ಹೇಳಲು 
 
27ಸಹಸ್ರಾಧಿಪತಿಯು ಪೌಲನ ಹತ್ತಿರಕ್ಕೆ ಬಂದು – ನೀನು ರೋಮಾಪುರದವರ ಹಕ್ಕುಳ್ಳವನೇನು? ನನಗೆ ಹೇಳು ಎಂದು ಅವನನ್ನು ಕೇಳಿದನು. 
 
28ಅವನು, ಹೌದು ಅಂದನು. ಅದಕ್ಕೆ ಸಹಸ್ರಾಧಿಪತಿಯು – ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು ಅನ್ನಲು ಪೌಲನು – ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು ಅಂದನು. 
 
29ಅವನನ್ನು ಹೊಡೆದು ವಿಚಾರಿಸುವದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು.
ಪೌಲನು ಹಿರೀಸಭೆಯವರ ಮುಂದೆ ನಿಂತು ಮಾತಾಡಿದ್ದು

ಪೌಲನು ಹಿರೀಸಭೆಯವರ ಮುಂದೆ:

30ಪೌಲನ ಮೇಲೆ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಮಹಾಯಾಜಕರೂ ಹಿರೀಸಭೆಯವರೆಲ್ಲರೂ ಕೂಡಿಬರುವದಕ್ಕೆ ಅಪ್ಪಣೆಕೊಟ್ಟು ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.

ಅಪೊಸ್ತಲರ ಕೃತ್ಯಗಳು 23

1ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ – ಸಹೋದರರೇ, ನಾನು ಈ ದಿನದವರೆಗೂ ಒಳ್ಳೇ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ ಅಂದನು. 
 
2ಅದಕ್ಕೆ ಮಹಾಯಾಜಕನಾದ ಅನನೀಯನು – ಅವನ ಬಾಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆಕೊಡಲು 
 
3ಪೌಲನು ಅವನಿಗೆ – ಎಲೈ ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರಾನುಸಾರವಾಗಿ ನನ್ನ ವಿಚಾರಣೆ ಮಾಡುವದಕ್ಕೆ ಕೂತುಕೊಂಡು ಧರ್ಮಶಾಸ್ತ್ರ ವಿರುದ್ಧವಾಗಿ ನನ್ನನ್ನು ಹೊಡೆಯುವದಕ್ಕೆ ಅಪ್ಪಣೆಕೊಡುತ್ತೀಯೋ? ಅಂದನು. 
 
4ಹತ್ತರ ನಿಂತಿದ್ದವರು – ದೇವರು ನೇಮಿಸಿದ ಮಹಾಯಾಜಕನನ್ನು ನೀನು ಬೈಯುತ್ತೀಯಾ? ಅನ್ನಲು 
 
5ಪೌಲನು – ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ ಅಂದನು. 
 
6ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ ಒಂದು ಪಾಲು ಫರಿಸಾಯರೂ ಇರುವದನ್ನು ಪೌಲನು ತಿಳಿದು – ಸಹೋದರರೇ, ನಾನು ಫರಿಸಾಯನು, ಫರಿಸಾಯರ ಮಗನು; ಸತ್ತವರೆದ್ದು ಬರುವರು ಎಂಬ ನಿರೀಕ್ಷೆಯ ವಿಷಯವಾಗಿ ನನ್ನನ್ನು ವಿಚಾರಣೆಮಾಡುತ್ತಾರೆ ಎಂದು ಹಿರೀಸಭೆಯಲ್ಲಿ ಕೂಗಿದನು. 
 
7ಇದನ್ನು ಅವನು ಹೇಳಿದಾಗ ಫರಿಸಾಯರಿಗೂ ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಭೇದವುಂಟಾಯಿತು. 
 
8ಯಾಕಂದರೆ – ಸತ್ತವರು ಎದ್ದುಬರುವದಿಲ್ಲವೆಂತಲೂ ದೇವದೂತನಾಗಲಿ ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂತಲೂ ಸದ್ದುಕಾಯರು ಹೇಳುವರು; ಆ ಎರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು. 
 
9ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು – ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಾಣಬರುವದಿಲ್ಲ; ಆತ್ಮವಾಗಲಿ ದೇವದೂತನಾಗಲಿ ಅವನ ಸಂಗಡ ಮಾತಾಡಿದ್ದರೂ ಮಾತಾಡಿರಬಹುದು ಎಂದು ವಾಗ್ವಾದಮಾಡಿದರು. 
 
10ಜಗಳವು ಬಹಳವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ – ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಆಜ್ಞೆಕೊಟ್ಟನು.
 
11ಆ ದಿನದ ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು – ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವದು ಅಂದನು.
ಕೆಲವರು ಪೌಲನನ್ನು ಕೊಲ್ಲುವದಕ್ಕೆ ಶಪಥಮಾಡಲು ಸಹಸ್ರಾಧಿಪತಿಯು ಅವನನ್ನು ಕೈಸರೈಯಕ್ಕೆ ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಕಳುಹಿಸಿದ್ದು.

ಪೌಲನನ್ನು ಕೊಲ್ಲುವದಕ್ಕೆ ಸಂಚು

12ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ – ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವದಿಲ್ಲವೆಂದು ಶಪಥಮಾಡಿಕೊಂಡರು. 
 
13ಹೀಗೆ ಮಾಡಿದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು. 
 
14ಇವರು ಮಹಾಯಾಜಕರ ಮತ್ತು ಸಭೇಹಿರಿಯರ ಬಳಿಗೆ ಹೋಗಿ – ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವದಿಲ್ಲವೆಂದು ಕಠಿನ ಶಪಥವನ್ನು ಮಾಡಿಕೊಂಡಿದ್ದೇವೆ. 
 
15ಆದದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಮರ್ಶೆಮಾಡಬೇಕೆಂದು ನೆವಹೇಳಿ ಅವನನ್ನು ಕೋಟೆಯಿಂದ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ ಅವನು ಹತ್ತರ ಬರುವದಕ್ಕಿಂತ ಮುಂಚೆಯೇ ಅವನನ್ನು ಕೊಲ್ಲುವದಕ್ಕೆ ಸಿದ್ಧವಾಗಿದ್ದೇವೆ ಅಂದರು. 
 
16ಅವರು ಹೊಂಚಿಕೊಂಡಿರುವದನ್ನು ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ತಿಳಿಸಿದನು. 
 
17ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ – ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಅದೆ ಎಂದು ಹೇಳಿದನು. 
 
18ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ – ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಅದೆಯಂತೆ ಎಂಬದಾಗಿ ಹೇಳಲು 
 
19ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ – ನೀನು ನನಗೆ ಹೇಳಬೇಕಾದದ್ದು ಏನು? ಎಂದು ಕೇಳಿದನು. 
 
20ಅವನು – ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀನು ನಾಳೆ ಅವನನ್ನು ಹಿರೀಸಭೆಯ ಬಳಿಗೆ ಕರೆದುಕೊಂಡು ಬರಬೇಕೆಂದು ಕೇಳಿಕೊಳ್ಳುವದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ. 
 
21ನೀನು ಅವರ ಮಾತಿಗೆ ಒಡಂಬಡಬೇಡ; ಯಾಕಂದರೆ ನಾಲ್ವತ್ತಕ್ಕಿಂತ ಹೆಚ್ಚು ಮಂದಿ ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವದಿಲ್ಲವೆಂದು ಶಪಥವನ್ನು ಮಾಡಿಕೊಂಡು ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿನ್ನ ಅಪ್ಪಣೆಯನ್ನು ಎದುರುನೋಡುತ್ತಾ ಸಿದ್ಧವಾಗಿದ್ದಾರೆ ಅಂದನು. 
 
22ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ – ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು. 

ಪೌಲನು ಕೈಸರೈಯಕ್ಕೆ ಕಳುಹಿಸಲ್ಪಟ್ಟಿದ್ದು

23ಆಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ – ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ ಎಪ್ಪತ್ತು ಮಂದಿ ಸವಾರರನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿರಿ; 
 
24ಮತ್ತು ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು. 
 
25ಇದಲ್ಲದೆ ಈ ಕೆಳಗಣ ಅಭಿಪ್ರಾಯದ ಒಂದು ಕಾಗದವನ್ನು ಬರೆದನು, ಏನಂದರೆ –
 
26ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ. 
 
27ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು. 
 
28ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು. 
 
29ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರವಿಷಯಗಳನ್ನು ಹಿಡಿದು ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು. 
 
30ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ಹುಟ್ಟಿತೆಂದು ನನಗೆ ತಿಳಿದುಬಂದದರಿಂದ ಕೂಡಲೆ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ಮಾತಾಡುವ ಹಾಗೆ ಅಪ್ಪಣೆ ಕೊಟ್ಟೆನು ಎಂಬದೇ.
 
31ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ ರಾತ್ರಿ ಕಾಲದಲ್ಲಿ ಪೌಲನನ್ನು ಅಂತಿಪತ್ರಿಗೆ ಕರೆದುಕೊಂಡು ಹೋದರು. 
 
32ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ ತಾವು ಕೋಟೆಗೆ ಹಿಂತಿರುಗಿ ಬಂದರು. 
 
33ಸವಾರರು ಕೈಸರೈಯಕ್ಕೆ ಸೇರಿ ದೇಶಾಧಿಪತಿಗೆ ಕಾಗದವನ್ನು ಒಪ್ಪಿಸಿ ಪೌಲನನ್ನು ಅವನ ಮುಂದೆ ನಿಲ್ಲಿಸಿದರು. 
 
34ದೇಶಾಧಿಪತಿಯು ಆ ಕಾಗದವನ್ನು ಓದಿ ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು – 
 
35ನಿನ್ನ ಮೇಲೆ ತಪ್ಪುಹೊರಿಸುವವರು ಬಂದನಂತರ ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ ಎಂದು ಹೇಳಿ ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬದಾಗಿ ಅಪ್ಪಣೆಮಾಡಿದನು.

ಫೇಲಿಕ್ಸನ ಮುಂದೆ ನಡೆದ ಪೌಲನ ನ್ಯಾಯವಿಚಾರಣೆ

:ಅಪೊಸ್ತಲರ ಕೃತ್ಯಗಳು 24

1ಐದು ದಿವಸಗಳಾದ ಮೇಲೆ ಮಹಾಯಾಜಕನಾದ ಅನನೀಯನು ಸಭೇಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಲನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು ಪೌಲನ ಮೇಲೆ ದೇಶಾಧಿಪತಿಗೆ ಫಿರಿಯಾದಿ ಹೇಳಿದನು. 
 
2ಪೌಲನನ್ನು ಕರೆಯಿಸಿದ ನಂತರ ತೆರ್ತುಲ್ಲನು ಅವನ ಮೇಲೆ ತಪ್ಪುಹೊರಿಸುವದಕ್ಕೆ ಪ್ರಾರಂಭಿಸಿ ಹೀಗಂದನು – ಶ್ರೀಮತ್ ಮಹಾ ಫೇಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ ಎಲ್ಲಾ ಸ್ಥಳದಲ್ಲಿಯೂ 
 
3ಸುಧಾರಣೆಗಳು ಆಗುವದರಿಂದಲೂ ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ. 
 
4ಆದರೆ ನಿನ್ನನ್ನು ಹೆಚ್ಚಾಗಿ ಬೇಸರಗೊಳಿಸುವದಕ್ಕೆ ಮನಸ್ಸಿಲ್ಲದೆ ನಾವು ಸಂಕ್ಷೇಪವಾಗಿ ಹೇಳುವ ಮಾತುಗಳನ್ನು ದಯೆಯಿಂದ ಲಾಲಿಸಬೇಕೆಂದು ಬೇಡಿಕೊಳ್ಳುತ್ತೇನೆ. 
 
5ಈ ಮನುಷ್ಯನು ಪೀಡೆಯಂತಿದ್ದು ಲೋಕದಲ್ಲಿ ಎಲ್ಲೆಲ್ಲಿಯೂ ಇರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನೆಂತಲೂ ಕಂಡೆವು. 
 
6ಇದಲ್ಲದೆ ಇವನು ದೇವಾಲಯವನ್ನು ಹೊಲೆಮಾಡುವದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು. 
 
8ಇವನನ್ನು ನೀನೇ ವಿಚಾರಿಸಿದರೆ ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ ಸುಳ್ಳೋ ಇವನಿಂದಲೇ ತಿಳಿದುಕೊಳ್ಳಬಹುದು ಎಂದು ಹೇಳಿದನು. 
 
9ಆಗ ಯೆಹೂದ್ಯರು ಈ ಸಂಗತಿಗಳು ನಿಜವೇ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವದರಲ್ಲಿ ಸೇರಿದರು.
 
10ದೇಶಾಧಿಪತಿಯು ಪೌಲನಿಗೆ – ನೀನು ಮಾತಾಡಬಹುದೆಂದು ಸನ್ನೆಮಾಡಲು ಅವನು ಪ್ರತ್ಯುತ್ತರವನ್ನು ಹೇಳಿದ್ದೇನಂದರೆ –
ನೀನು ಅನೇಕ ವರುಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತೇನೆ. 
 
11ನಾನು ದೇವಾರಾಧನೆಮಾಡುವದಕ್ಕೆ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸ ಮಾತ್ರವಾಯಿತೆಂದು ನೀನು ತಿಳಿದುಕೊಳ್ಳಬಹುದು. 
 
12ಅಲ್ಲಿ ದೇವಾಲಯದಲ್ಲಾಗಲಿ ಸಭಾಮಂದಿರಗಳಲ್ಲಾಗಲಿ ಪಟ್ಟಣದಲ್ಲಾಗಲಿ ನಾನು ಯಾರ ಸಂಗಡವಾದರೂ ವಾದಿಸುವದನ್ನು ಇಲ್ಲವೆ ಜನರ ಗುಂಪು ಕೂಡಿಸುವದನ್ನು ಇವರು ಕಾಣಲಿಲ್ಲ. 
 
13ಇದಲ್ಲದೆ ಇವರು ಈಗ ನನ್ನ ಮೇಲೆ ಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು. 
 
14ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಅದೇನಂದರೆ – ಇವರು ಪಾಷಂಡಮತವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಸೇವಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ. 
 
15ಇದಲ್ಲದೆ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುವದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ; 
 
16ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ. 
 
17ಕೆಲವು ವರುಷಗಳಾದ ಮೇಲೆ ನಾನು ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು ತರುವದಕ್ಕೂ ಕಾಣಿಕೆಗಳನ್ನು ಒಪ್ಪಿಸುವದಕ್ಕೂ ಬಂದೆನು. 
 
18ನಾನು ಶುದ್ಧಮಾಡಿಕೊಂಡವನಾಗಿ ಅವುಗಳನ್ನು ಒಪ್ಪಿಸುತ್ತಿರುವಲ್ಲಿ ನನ್ನನ್ನು ದೇವಾಲಯದಲ್ಲಿ ಕಂಡರು. ನನ್ನ ಬಳಿಯಲ್ಲಿ ಜನರ ಗುಂಪು ಇರಲಿಲ್ಲ, ಗದ್ದಲವೂ ಇರಲಿಲ್ಲ. 
 
19ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ; ನನ್ನ ಮೇಲೆ ಅವರಿಗೆ ಏನಾದರೂ ಇದ್ದರೆ ತಾವೇ ನಿನ್ನ ಮುಂದೆ ತಪ್ಪುಹೊರಿಸುವದಕ್ಕೆ ಇಲ್ಲಿ ಬರಬೇಕಾಗಿತ್ತು. 
 
20ಇಲ್ಲವಾದ್ದರಿಂದ ನಾನು ಹಿರೀಸಭೆಯ ಎದುರಿನಲ್ಲಿ ನಿಂತಿದ್ದಾಗ ನನ್ನಲ್ಲಿ ಅಕ್ರಮವನ್ನೇನಾದರೂ ಕಂಡಿದ್ದರೆ ಇವರೇ ಹೇಳಲಿ. 
 
21ನಾನು ಇವರ ನಡುವೆ ನಿಂತು – ಪುನರುತ್ಥಾನದ ವಿಷಯದಲ್ಲಿ ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ ಎಂದು ಕೂಗಿದ್ದನ್ನೇ ಹೊರತು ಬೇರೆ ಏನೂ ಹೇಳಲಾರರು ಅಂದನು.
 
22ಫೇಲಿಕ್ಸನು ಕ್ರಿಸ್ತ ಮಾರ್ಗವನ್ನು ತಕ್ಕ ಮಟ್ಟಿಗೆ ತಿಳಿದವನಾದರೂ ಅವರಿಗೆ – ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿಮ್ಮ ಕಾರ್ಯವನ್ನು ತೀರ್ಮಾನಿಸುತ್ತೇನೆಂದು ಹೇಳಿ ವಿಚಾರಣೆಯನ್ನು ತಡೆಮಾಡಿದನು. 
 
23ಆಗ ಅವನು ಶತಾಧಿಪತಿಗೆ – ಪೌಲನು ಕಾವಲಲ್ಲಿರಬೇಕು, ಆದರೆ ಅವನು ಬಿಡುವಾಗಿರಲಿ, ಅವನನ್ನು ಉಪಚರಿಸುವದಕ್ಕೆ ಅವನ ಸ್ವಂತ ಜನರಲ್ಲಿ ಯಾರಿಗೂ ಅಡ್ಡಿಮಾಡಬಾರದೆಂದು ಅಪ್ಪಣೆಮಾಡಿದನು.
ಪೌಲನು ಎರಡು ವರುಷ ಕಾವಲಲ್ಲಿದ್ದದ್ದು; ಅವನು ಪ್ರಸ್ತಾಪಿಸಿದ್ದನ್ನು ಫೇಲಿಕ್ಸನು ಕೇಳಿ ಮನಸ್ಸಿನಲ್ಲಿ ದಿಗಿಲುಬಿದ್ದದ್ದು.
 
24ಕೆಲವು ದಿವಸಗಳಾದ ಮೇಲೆ ಫೇಲಿಕ್ಸನು ಯೆಹೂದ್ಯಳಾದ ದ್ರೂಸಿಲ್ಲಳೆಂಬ ಸ್ವಂತ ಹೆಂಡತಿಯೊಂದಿಗೆ ಬಂದು ಪೌಲನನ್ನು ಕರಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು. 
 
25ಪೌಲನು ಸುನೀತಿ ದಯೆ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ – ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರಿಸುವೆನು ಎಂದು ಹೇಳಿದನು. 
 
26ಇದಲ್ಲದೆ ತನಗೆ ಪೌಲನಿಂದ ಹಣ ಸಿಕ್ಕೀತೆಂಬ ನಿರೀಕ್ಷೆ ಅವನಿಗಿದ್ದ ಕಾರಣ ಅವನನ್ನು ಬಾರಿಬಾರಿಗೂ ಕರಿಸಿ ಅವನ ಸಂಗಡ ಸಲ್ಲಾಪಮಾಡುತ್ತಿದ್ದನು. 
 
27ಎರಡು ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂಬ ಕೋರಿಕೆಯಿಂದ ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟುಹೋದನು.

ಅಪೊಸ್ತಲರ ಕೃತ್ಯಗಳು 25

ದೇಶಾಧಿಪತಿಯಾದ ಫೆಸ್ತನು ಪೌಲನನ್ನು ತಿರಿಗಿ ಯೆರೂಸಲೇಮಿಗೆ ಕಳುಹಿಸಬೇಕೆಂದಿದ್ದಾಗ ಪೌಲನು ಚಕ್ರವರ್ತಿಗೆ ಅಪ್ಪೀಲ್ ಮಾಡಿದ್ದು
1ಫೆಸ್ತನು ಸೀಮೆಯ ಕಾರ್ಯಭಾರವನ್ನು ವಹಿಸಿಕೊಂಡು ಮೂರು ದಿವಸಗಳ ತರುವಾಯ ಕೈಸರೈಯದಿಂದ ಯೆರೂಸಲೇಮಿಗೆ ಹೋದನು. 
 
2ಅಲ್ಲಿ ಮಹಾಯಾಜಕನೂ ಯೆಹೂದ್ಯರಲ್ಲಿ ಪ್ರಮುಖರೂ ಅವನಿಗೆ ಪೌಲನ ಮೇಲಣ ಫಿರಿಯಾದಿಯನ್ನು ಹೇಳಿ
 
3ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕರತರಿಸಬೇಕೆಂದು ಪೌಲನ ಕೇಡಿಗಾಗಿ ಬಿನ್ನಹವನ್ನು ಮಾಡಿದರು. ಮಾರ್ಗದಲ್ಲಿ ಅವನನ್ನು ಕೊಲ್ಲುವದಕ್ಕಾಗಿ ಹೊಂಚುಹಾಕಿಕೊಂಡಿದ್ದರು. 
 
4ಫೆಸ್ತನು ಅವರಿಗೆ – ಪೌಲನು ಕೈಸರೈಯದಲ್ಲಿ ಕಾವಲೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟುಹೋಗಬೇಕೆಂದಿದ್ದೇನೆ; 
 
5ಆದಕಾರಣ ನಿಮ್ಮಲ್ಲಿ ಪ್ರಮುಖರು ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅನುಚಿತವಾದದ್ದೇನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು ಹೇಳಿದನು.
 
6ಅವನು ಅವರಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿವಸಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕೂತುಕೊಂಡು ಪೌಲನನ್ನು ತರಬೇಕೆಂದು ಅಪ್ಪಣೆಮಾಡಿದನು. 
 
7ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲು ನಿಂತುಕೊಂಡು ತಾವು ಸ್ಥಾಪಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು 
 
8ಪೌಲನು – ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ ದೇವಾಲಯದ ವಿಷಯದಲ್ಲಾಗಲಿ ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು ಪ್ರತ್ಯುತ್ತರ ಹೇಳಿದನು. 
 
9ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಪೌಲನನ್ನು – ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟವುಂಟೋ? ಎಂದು ಕೇಳಲು 
 
10ಪೌಲನು – ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ. 
 
11ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದಾದರೆ ಮರಣದಂಡನೆಯನ್ನು ಬೇಡವೆನ್ನುವದಿಲ್ಲ. ಇವರು ನನ್ನ ಮೇಲೆ ಹೊರಿಸುವ ತಪ್ಪುಗಳಲ್ಲಿ ಒಂದೂ ನಿಜವಲ್ಲದ ಮೇಲೆ ಇವರ ಮೇಲಣ ದಯೆಯಿಂದ ನನ್ನನ್ನು ಒಪ್ಪಿಸಿಕೊಡುವದಕ್ಕೆ ಒಬ್ಬರಿಗೂ ಅಧಿಕಾರವಿಲ್ಲ. ನಾನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎನ್ನಲು 
 
12ಫೆಸ್ತನು ತನ್ನ ಸಭೆಯವರ ಸಂಗಡ ಆಲೋಚನೆಮಾಡಿದ ಮೇಲೆ ಪೌಲನಿಗೆ – ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಅಂದಿಯಲ್ಲಾ, ಚಕ್ರವರ್ತಿಯ ಬಳಿಗೆ ಹೋಗಬೇಕು ಎಂದು ಹೇಳಿದನು.
ಫೆಸ್ತನು ಅಗ್ರಿಪ್ಪರಾಜನಿಗೆ ಪೌಲನ ಸಂಗತಿಯನ್ನು ತಿಳಿಸಿದ ಮೇಲೆ ಪೌಲನು ಅವರಿಬ್ಬರ ಮುಂದೆ ಪ್ರತಿವಾದ ಮಾಡಿದ್ದು

ಫೆಸ್ತನು ಅಗ್ರಿಪ್ಪರಾಜನಿಗೆ ಪೌಲನ ಸಂಗತಿಯನ್ನು ತಿಳಿಸಿದನು

13ಕೆಲವು ದಿವಸಗಳು ಗತಿಸಿದ ನಂತರ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಫೆಸ್ತನ ದರ್ಶನಮಾಡಿಕೊಳ್ಳುವದಕ್ಕೆ ಕೈಸರೈಯಕ್ಕೆ ಬಂದರು. 
 
14ಅವರು ಅನೇಕ ದಿವಸ ಅಲ್ಲಿ ನಿಂತಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ – ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ. 
 
15ನಾನು ಯೆರೂಸಲೇಮಿನಲ್ಲಿದ್ದಾಗ ಯೆಹೂದ್ಯರ ಮಹಾಯಾಜಕರೂ ಸಭೇಹಿರಿಯರೂ ಅವನ ವಿಷಯವಾಗಿ ನನಗೆ ಫಿರ್ಯಾದಿ ಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು. 
 
16ನಾನು ಅವರಿಗೆ – ಪ್ರತಿವಾದಿಯು ವಾದಿಗಳಿಗೆ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷವಿಷಯದಲ್ಲಿ ಪ್ರತಿವಾದಮಾಡುವದಕ್ಕೆ ಆಸ್ಪದಕೊಡದೆ ಅವನನ್ನು ಒಪ್ಪಿಸಿಬಿಡುವದು ರೋಮಾಯರ ಪದ್ಧತಿಯಲ್ಲವೆಂದು ಹೇಳಿದೆನು. 
 
17ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವಾದರೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕೂತುಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆಕೊಟ್ಟೆನು. 
 
18ತಪ್ಪುಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ 
 
19ಅವರ ಮತದ ವಿಷಯದಲ್ಲಿಯೂ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು. ಆ ಯೇಸು ಜೀವಿತನಾಗಿದ್ದಾನೆಂದು ಪೌಲನು ಹೇಳಿದನು. 
 
20ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೋ ನನಗೆ ತೋರದೆ – ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಲು 
 
21ಪೌಲನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುವ ಪರ್ಯಂತರ ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಚಕ್ರವರ್ತಿಯ ಬಳಿಗೆ ಕಳುಹಿಸುವ ತನಕ ಅವನನ್ನು ಕಾಯುವದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು. 
 
22ಅದಕ್ಕೆ ಅಗ್ರಿಪ್ಪನು – ಆ ಮನುಷ್ಯನು ಹೇಳಿಕೊಳ್ಳುವದನ್ನು ಕೇಳುವದಕ್ಕೆ ನನಗೂ ಮನಸ್ಸದೆ ಎಂದು ಹೇಳಲು ಫೆಸ್ತನು – ನಾಳೆ ಕೇಳಬಹುದು ಅಂದನು.

ಪೌಲನು ಅಗ್ರಿಪ್ಪ ರಾಜನ ಮುಂದೆ

23ಮರುದಿನ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಸ್ಥಾನದೊಳಗೆ ಸೇರಿದಾಗ ಫೆಸ್ತನು ಅಪ್ಪಣೆಕೊಡಲು ಪೌಲನನ್ನು ಕರತಂದರು. 
 
24ಆಗ ಫೆಸ್ತನು – ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ – ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇಮಿನಲ್ಲಿಯೂ ಇಲ್ಲಿಯೂ ನನ್ನನ್ನು ಬೇಡಿಕೊಂಡರು. 
 
25ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂತು. ತಾನೇ ಚಕ್ರವರ್ತಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ ಇವನನ್ನು ಕಳುಹಿಸುವದಕ್ಕೆ ತೀರ್ಮಾನಿಸಿದೆನು. 
 
26ಇವನ ವಿಷಯದಲ್ಲಿ ಮಹಾಸನ್ನಿಧಾನಕ್ಕೆ ಬರೆಯುವದಕ್ಕೆ ನಿಶ್ಚಯವಾದದ್ದೇನೂ ಇಲ್ಲ. ಸೆರೆಯವನ ಮೇಲೆ ಆರೋಪಿಸಿರುವ ದೋಷಗಳನ್ನು ಸೂಚಿಸದೆ ಅವನನ್ನು ಕಳುಹಿಸುವದು ಯುಕ್ತವಲ್ಲವೆಂದು ನನಗೆ ತೋರುತ್ತದೆ. 
 
27ಆದದರಿಂದ ವಿಚಾರಣೆಯಾದ ಮೇಲೆ ಬರೆಯುವದಕ್ಕೆ ಏನಾದರೂ ಸಿಕ್ಕೀತೆಂದು ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ ಅಂದನು.
 

ಅಪೊಸ್ತಲರ ಕೃತ್ಯಗಳು 26

1ಆಗ ಅಗ್ರಿಪ್ಪನು ಪೌಲನಿಗೆ – ನೀನು ನಿನ್ನ ಪಕ್ಷದಲ್ಲಿ ಮಾತಾಡಬಹುದು ಅನ್ನಲು ಪೌಲನು ಕೈಯೆತ್ತಿ ಪ್ರತಿವಾದ ಮಾಡಿದ್ದೇನಂದರೆ –
 
2ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ದೋಷಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ. 
 
3ಯಾಕಂದರೆ ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನದಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ. 
 
4ನಾನು ಮೊದಲಿಂದಲೂ ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದುಕೊಂಡು ಬಾಲ್ಯದಿಂದ ಬದುಕಿದ ಬಗೆಯು ಎಲ್ಲಾ ಯೆಹೂದ್ಯರಿಗೆ ತಿಳಿದೇ ಅದೆ; 
 
5ನಮ್ಮ ಧರ್ಮದಲ್ಲಿ ಬಹು ಖಂಡಿತವಾದ ಮತವನ್ನನುಸರಿಸಿ ಫರಿಸಾಯನಾಗಿ ನಡಕೊಂಡೆನೆಂದು ಪ್ರಾರಂಭದಿಂದಲೂ ಅವರು ಬಲ್ಲರು; ಸಾಕ್ಷಿಹೇಳುವದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು. 
 
6ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವು ನೆರವೇರುವದೆಂಬ ನಿರೀಕ್ಷೆಯನ್ನು ಕುರಿತೇ ವಿಚಾರಿಸಲ್ಪಡುವವನಾಗಿ ಇಲ್ಲಿ ನಿಂತಿದ್ದೇನೆ. 
 
7ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಸೇವಿಸುತ್ತಾ ಆ ವಾಗ್ದಾನದ ಫಲವನ್ನು ಹೊಂದುವದಕ್ಕೆ ನಿರೀಕ್ಷಿಸುತ್ತಾ ಇದ್ದಾರೆ. ರಾಜಾ, ಆ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆಮಾಡುತ್ತಾರೆ. 
 
8ದೇವರು ಸತ್ತವರನ್ನು ಎಬ್ಬಿಸಿದ್ದು ನಂಬತಕ್ಕದ್ದಲ್ಲವೆಂದು ನೀವು ಯಾಕೆ ತೀರ್ಮಾನಿಸುತ್ತೀರಿ? 
 
9ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡಿಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು. 
 
10ಯೆರೂಸಲೇಮಿನಲ್ಲಿ ಹಾಗೆಯೇ ನಡಿಸಿದೆನು. ಮಹಾಯಾಜಕರಿಂದ ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇಡಿಸಿ ಅವರಿಗೆ ಮರಣದ ತೀರ್ಪಾದಾಗ ನನ್ನ ಸಮ್ಮತಿಯನ್ನು ಸೂಚಿಸಿದೆನು. 
 
11ಎಲ್ಲಾ ಸಭಾಮಂದಿರಗಳಲ್ಲಿಯೂ ನಾನು ಅನೇಕಾವರ್ತಿ ಅವರನ್ನು ದಂಡಿಸಿ ಅವರಿಂದ ದೂಷಣೆಯ ಮಾತುಗಳನ್ನಾಡಿಸುವದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಪರಪಟ್ಟಣಗಳ ತನಕ ಅವರನ್ನು ಹಿಂಸೆಪಡಿಸಿದೆನು. 
 
12ಈ ಉದ್ದೇಶದಿಂದ ನಾನು ಮಹಾಯಾಜಕರಿಂದ ಅಧಿಕಾರವನ್ನೂ ಉದ್ಯೋಗವನ್ನೂ ಹೊಂದಿ ದಮಸ್ಕಕ್ಕೆ ಹೋಗುತ್ತಾ ನಾನು ದಾರಿಯಲ್ಲಿದ್ದಾಗ 
 
13ರಾಜನೇ, ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದಾದ ಒಂದು ಬೆಳಕು ನನ್ನ ಸುತ್ತಲೂ ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವದನ್ನು ಕಂಡೆನು. 
 
14ನಾವೆಲ್ಲರು ನೆಲಕ್ಕೆ ಬೀಳಲು – ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು ಕೇಳಿದೆನು. 
 
15ಆಗ ನಾನು – ಕರ್ತನೇ, ನೀನಾರು? ಅನ್ನಲು ಕರ್ತನು – ನೀನು ಹಿಂಸೆಪಡಿಸುವ ಯೇಸುವೇ ನಾನು. ನೀನು ಎದ್ದು ನಿಂತುಕೋ. 
 
16ನಿನ್ನನ್ನು ನನ್ನ ಸೇವಕನಾಗಿಯೂ ಸಾಕ್ಷಿಯಾಗಿಯೂ ನೇಮಿಸುವದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ನಾನು ಈಗಲೂ ಮುಂದೆ ನಿನಗೆ ಕೊಡಲಿಕ್ಕಿರುವ ದರ್ಶನಗಳಲ್ಲಿಯೂ ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ಸಾಕ್ಷಿಯಾಗಿರಬೇಕು. 
 
17ನಾನು ನಿನ್ನನ್ನು ಇಸ್ರಾಯೇಲ್ ಜನರ ಕೈಯೊಳಗಿಂದಲೂ ಅನ್ಯಜನರ ಕೈಯೊಳಗಿಂದಲೂ ಬಿಡಿಸುವೆನು. 
 
18ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು. 
 
19ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ 
 
20ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ – ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು. 
 
21ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕೆ ಪ್ರಯತ್ನಿಸಿದರು. 
 
22ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಆಗುವವೆಂದು ತಿಳಿಸಿದ ಸಂಗತಿಗಳನ್ನೇ ಹೊರತು ಇನ್ನೇನೂ ಹೇಳುವವನಲ್ಲ. 
 
23ಆ ಸಂಗತಿಗಳು ಏನಂದರೆ – ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು ಎಂಬದೇ.
 
24ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ – ಪೌಲನೇ, ನೀನು ಮರುಳಾಗಿದ್ದೀ; ನೀನು ಬಹಳವಾಗಿ ಮಾಡುವ ಶಾಸ್ತ್ರವಿಚಾರವು ನಿನ್ನನ್ನು ಮರುಳುಗೊಳಿಸುತ್ತದೆ ಎಂದು ಹೇಳಿದನು. 
 
25ಅದಕ್ಕೆ ಪೌಲನು – ಶ್ರೀಮನ್ ಮಹಾ ಫೆಸ್ತನೇ, ನಾನು ಮರುಳಾಗಿಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನಾಡುತ್ತೇನೆ. 
 
26ಅಗ್ರಿಪ್ಪರಾಜನು ಈ ಸಂಗತಿಗಳನ್ನು ತಿಳಿದವನು; ಅವನ ಮುಂದೆ ಧೈರ್ಯವಾಗಿ ಮಾತಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮರೆಯಾದದ್ದಲ್ಲವೆಂದು ನಂಬಿದ್ದೇನೆ, ಯಾಕಂದರೆ ಇದು ಮೂಲೆಯಲ್ಲಿ ನಡೆದ ಕಾರ್ಯವಲ್ಲ. 
 
27ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ? ಉಂಟೆಂದು ಬಲ್ಲೆನು ಅಂದನು. 
 
28ಅದಕ್ಕೆ ಅಗ್ರಿಪ್ಪನು – ಅಲ್ಪಪ್ರಯತ್ನದಿಂದ ನನ್ನನ್ನು ಕ್ರೈಸ್ತನಾಗುವದಕ್ಕೆ ಒಡಂಬಡಿಸುತ್ತೀಯಾ? ಎಂದು ಹೇಳಲು 
 
29ಪೌಲನು – ಅಲ್ಪಪ್ರಯತ್ನದಿಂದಾಗಲಿ ಅಧಿಕಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ ಈ ಬೇಡಿಗಳ ಹೊರತು ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ ಅಂದನು.
 
30ಆಮೇಲೆ ರಾಜನೂ ದೇಶಾಧಿಪತಿಯೂ ಬೆರ್ನಿಕೆಯೂ ಅವರ ಸಂಗಡ ಕೂತಿದ್ದವರೂ ಎದ್ದು ಆಚೆಗೆ ಹೋಗಿ
 
31ಈ ಮನುಷ್ಯನು ಮರಣದಂಡನೆಗಾಗಲಿ ಬೇಡಿಗಾಗಲಿ ಆಧಾರವಾದದ್ದೇನೂ ಮಾಡುವವನಲ್ಲ ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು. 
 
32ಅಗ್ರಿಪ್ಪನು ಫೆಸ್ತನಿಗೆ – ಈ ಮನುಷ್ಯನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.

Info: Those days, Jerusalem was ruled by the Roman Empire with Cesar as their head from Italy, Just as India was ruled by the British empire from London with the Queen as their head.

ಪೌಲನು ರೋಮಾಪುರಕ್ಕೆ ಪ್ರಯಾಣ

ಅಪೊಸ್ತಲರ ಕೃತ್ಯಗಳು 27

1ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಬೇರೆ ಕೆಲವು ಸೆರೆಯವರನ್ನೂ ಚಕ್ರವರ್ತಿಯ ಪಟಾಲಮಿಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. 
 
2ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು. 
 
3ಮರುದಿನ ಸೀದೋನಿಗೆ ಮುಟ್ಟಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವದಕ್ಕೆ ಬಿಟ್ಟನು. 
 
4ಅಲ್ಲಿಂದ ಹೊರಟು ಎದುರು ಗಾಳಿ ಬೀಸುತ್ತಿದ್ದದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ 
 
5ಕಿಲಿಕ್ಯಕ್ಕೂ ಪಂಫೂಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು. 
 
6ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರ ಮೇಲೆ ಹತ್ತಿಸಿದನು. 
 
7ಅನೇಕ ದಿವಸ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಎದುರಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದದರಿಂದ ಕ್ರೇತದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಎದುರಾಗಿ ಬಂದು 
 
8ಪ್ರಯಾಸದಿಂದ ಆ ದ್ವೀಪದ ಕರಾವಳಿಯನ್ನು ಹಿಡಿದು ಹೋಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.
 
9ಹೀಗೆ ಬಹುಕಾಲ ಕಳೆದುಹೋಯಿತು; ಮಹಾ ಉಪವಾಸದ ದಿವಸವು ಆಗಿಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವದು ಅಪಾಯಕರವಾಗಿದ್ದದರಿಂದ 
10ಪೌಲನು – ಜನರೇ, ಈ ಪ್ರಯಾಣದಿಂದ ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೂ ಕಷ್ಟವೂ ಬಹು ನಷ್ಟವೂ ಸಂಭವಿಸುವದೆಂದು ನನಗೆ ತೋರುತ್ತದೆ ಎಂದು ಅವರನ್ನು ಎಚ್ಚರಿಸಿದನು. 
 
11ಆದರೆ ಪೌಲನು ಹೇಳಿದ ಮಾತುಗಳಿಗಿಂತ ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು. 
 
12ಆ ರೇವು ಹಿಮಕಾಲವನ್ನು ಕಳೆಯುವದಕ್ಕೆ ಅನುಕೂಲವಲ್ಲದ್ದರಿಂದ ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ ಅಲ್ಲೇ ಆ ಹಿಮಕಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ಆಲೋಚನೆ ಹೇಳಿದರು. ಫೊಯಿನಿಕ್ಸವು ಕ್ರೇತದ್ವೀಪದ ಒಂದು ರೇವು; ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ. 
 
ಬಿರುಗಾಳಿ
 
13ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರ ಎತ್ತಿ ಕ್ರೇತದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು. 
 
14ಸ್ವಲ್ಪ ಹೊತ್ತಿನ ಮೇಲೆ ಆ ದ್ವೀಪದ ಮೇಲಣಿಂದ ಈಶಾನ್ಯಪೂರ್ವವಾಯು ಎಂಬ ಹುಚ್ಚುಗಾಳಿಯು ಹೊಡೆಯಿತು. 
 
15ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವದಕ್ಕೆ ಆಗದೆಹೋದದರಿಂದ ಗಾಳಿಗೆ ಆಸ್ಪದಕೊಟ್ಟು ನೂಕಿಸಿಕೊಂಡು ಹೋದೆವು. 
 
16ಕ್ಲೌಡವೆಂಬ ಒಂದು ಸಣ್ಣ ದ್ವೀಪದ ಮರೆಯಲ್ಲಿ ಹಡಗನ್ನು ನಡಿಸಿಕೊಂಡು ಬಂದ ತರುವಾಯ ಹಡಗಿನ ದೋಣಿಯನ್ನು ಎತ್ತಿ ಭದ್ರಮಾಡಿಕೊಳ್ಳುವದು ನಮಗೆ ಪ್ರಯಾಸವಾಯಿತು. 
 
17ಅದನ್ನು ಮೇಲಕ್ಕೆ ಎತ್ತಿದ ತರುವಾಯ ಹೊರಜಿಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆಮೇಲೆ ಸುರ್ತಿಸ್ ಎಂಬ ಕಳ್ಳುಸುಬಿನಲ್ಲಿ ಸಿಕ್ಕಿಬಿದ್ದೇವೆಂದು ಭಯಪಟ್ಟು ಹಾಯಿಯನ್ನು ಸಡಿಲುಮಾಡಿ ನೂಕಿಸಿಕೊಂಡು ಹೋದೆವು. 
 
18ಗಾಳಿಯು ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಸರಕನ್ನು ಬಿಸಾಡುತ್ತಿದ್ದರು. 
 
19ಮೂರನೆಯ ದಿನದಲ್ಲಿ ಹಡಗಿನ ಅಡ್ಡಮರವನ್ನು ತಮ್ಮ ಕೈಯಿಂದಲೇ ಹೊರಗೆ ಎತ್ತಿ ಹಾಕಿದರು. 
 
20ಅನೇಕ ದಿವಸಗಳ ತನಕ ಸೂರ್ಯನಾಗಲಿ ನಕ್ಷತ್ರಗಳಾಗಲಿ ನಮಗೆ ಕಾಣಿಸದೆ ದೊಡ್ಡ ಬಿರುಗಾಳಿ ನಮ್ಮ ಮೇಲೆ ಹೊಡೆದದ್ದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ಅಂದಿನಿಂದ ಕಳೆದುಹೋಯಿತು.
 
21ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು – ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು. 
 
22ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವದೇ ಹೊರತು ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವದಿಲ್ಲ. 
 
23ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು – 
 
24ಪೌಲನೇ, ಭಯಪಡಬೇಡ, ನೀನು ಚಕ್ರವರ್ತಿಯ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣ ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು ನನ್ನ ಸಂಗಡ ಹೇಳಿದನು. 
 
25ಆದದರಿಂದ ಜನರೇ ಧೈರ್ಯವಾಗಿರ್ರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ದೇವರನ್ನು ನಂಬುತ್ತೇನೆ. 
 
26ಆದರೆ ನಾವು ಯಾವದೋ ಒಂದು ದ್ವೀಪದ ದಡವನ್ನು ತಾಕಬೇಕಾಗಿದೆ ಎಂದು ಹೇಳಿದನು.
 
27ಹದಿನಾಲ್ಕನೆಯ ರಾತ್ರಿ ಬಂದ ಮೇಲೆ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು 

ಹಡಗು ದುರಂತ

28ಒಂದು ದೇಶದ ಹತ್ತಿರ ಬಂದೆವೆಂದು ನೆನಸಿ ಅಳತೇ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರಿಗಿ ಅಳತೇ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು. 
 
29ಬಂಡೇಸ್ಥಳವನ್ನು ತಾಕೇವೆಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈಸುತ್ತಿದ್ದರು. 
 
30ಆದರೆ ನಾವಿಕರು ಮುಂಭಾಗದಲ್ಲಿ ಲಂಗರಗಳನ್ನು ಹಾಕಬೇಕೆಂಬುವ ನೆವದಿಂದ ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವದಕ್ಕೆ ಪ್ರಯತ್ನಿಸುತ್ತಿರುವಾಗ 
 
31ಪೌಲನು ಶತಾಧಿಪತಿಗೂ ಸಿಪಾಯಿಗಳಿಗೂ – ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವೂ ಉಳುಕೊಳ್ಳುವದಕ್ಕಾಗುವದಿಲ್ಲವೆಂದು ಹೇಳಿದನು. 
 
32ಆಗ ಸಿಪಾಯಿಗಳು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು. 
 
33ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುವವನಾಗಿ – ನೀವು ಈಹೊತ್ತಿಗೆ ಹದಿನಾಲ್ಕು ದಿವಸದಿಂದ ಕಾದುಕೊಂಡು ಆಹಾರವೇನೂ ತೆಗೆದುಕೊಳ್ಳದೆ ಉಪವಾಸವಾಗಿಯೇ ಇದ್ದೀರಾದದರಿಂದ 
 
34ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣ ರಕ್ಷಣೆಗೆ ಅವಶ್ಯ. ನಿಮ್ಮಲ್ಲಿ ಯಾರ ತಲೆಯಿಂದಾದರೂ ಒಂದು ಕೂದಲೂ ಉದುರಿಹೋಗುವದಿಲ್ಲವೆಂದು ಹೇಳಿ 
 
35ರೊಟ್ಟಿಯನ್ನು ತೆಗೆದುಕೊಂಡು ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು. 
 
36ಆಗ ಎಲ್ಲರು ಧೈರ್ಯತಂದುಕೊಂಡು ತಾವೂ ಆಹಾರವನ್ನು ತೆಗೆದುಕೊಂಡರು. 
 
37ಆ ಹಡಗಿನಲ್ಲಿದ್ದ ನಾವೆಲ್ಲರು ಇನ್ನೂರ ಎಪ್ಪತ್ತಾರು ಮಂದಿ. 
 
38ಸಾಕಾದಷ್ಟು ತಿಂದ ಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು. 
 
39ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ಯೋಚಿಸಿ 
 
40ಅವರು ಲಂಗರಗಳನ್ನು ಸರಿದು ಸಮುದ್ರದಲ್ಲೇ ಬಿಟ್ಟು ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು. 
 
41ಆದರೆ ಮಧ್ಯದಲ್ಲಿ ಅವರಿಗೆ ಮರಳುದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಗುತ್ತಾ ಬಂತು. 
 
42ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬದಾಗಿ ಆಲೋಚನೆ ಹೇಳಿದರು. 
 
43ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು – ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲಾಗಿ ತೀರಕ್ಕೆ ಹೋಗಬೇಕೆಂತಲೂ 
 
44ಮಿಕ್ಕಾದವರಲ್ಲಿ ಕೆಲವರು ಹಲಿಗೆಗಳ ಮೇಲೆ ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.

ಪೌಲನು ಮೆಲೀತೆ ದ್ವೀಪದಲ್ಲಿ ದಡಕ್ಕೆ ಸೇರಿದ್ದು

ಅಪೊಸ್ತಲರ ಕೃತ್ಯಗಳು 28

1ನಾವು ದಡಕ್ಕೆ ಸೇರಿದ ಮೇಲೆ ಆ ದ್ವೀಪದ ಹೆಸರು ಮೆಲೀತೆ ಎಂದು ನಮಗೆ ತಿಳಿದುಬಂತು. 
 
2ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ಮಾಡಿದ ಉಪಕಾರವು ಅಷ್ಟಿಷ್ಟಲ್ಲ. ಮಳೆಯು ಆಗಲೇ ಹೊಯ್ಯುತ್ತಿದ್ದರಿಂದಲೂ ಚಳಿಯಾಗಿರುವದರಿಂದಲೂ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು. 
 
3ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಲು ಆ ಕಾವಿನ ದೆಸೆಯಿಂದ ಒಂದು ಹಾವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಹಿಡುಕೊಂಡಿತು. 
 
4ಆ ಜಂತು ಅವನ ಕೈಯಿಂದ ಜೋತಾಡುವದನ್ನು ದ್ವೀಪದವರು ನೋಡಿ – ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಇವನನ್ನು ಬದುಕಗೊಡಿಸುವದಿಲ್ಲವೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು. 
 
5ಆದರೆ ಪೌಲನು ಆ ಜಂತುವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಕೇಡಾಗಲಿಲ್ಲ. 
 
6ಇವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು. ಬಹಳ ಹೊತ್ತು ನೋಡಿಕೊಂಡಿದ್ದ ಮೇಲೆ ಅವನಿಗೆ ವಿಕಾರವೇನೂ ಆಗಿಲ್ಲವೆಂದು ಕಂಡು ಬೇರೆ ಯೋಚನೆಯುಳ್ಳವರಾಗಿ – ಇವನು ಒಬ್ಬ ದೇವರು ಎಂದು ಹೇಳಿಕೊಂಡರು.
 
7ಆ ಸ್ಥಳದ ಸಮೀಪದಲ್ಲಿ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನೆಂಬವನಿಗೆ ಕೆಲವು ಭೂಮಿ ಇತ್ತು. ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿದನು. 
 
8ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಪೀಡಿತನಾಗಿ ಮಲಗಿದ್ದನು. ಪೌಲನು ಅವನ ಬಳಿಗೆ ಹೋಗಿ ದೇವರ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ವಾಸಿಮಾಡಿದನು. 
 
9ಇದಾದ ಮೇಲೆ ಆ ದ್ವೀಪದಲ್ಲಿದ್ದ ಮಿಕ್ಕಾದ ರೋಗಿಗಳು ಅವನ ಬಳಿಗೆ ಬಂದು ಸ್ವಸ್ಥರಾದರು. 
 
10ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ ನಾವು ಬಿಟ್ಟು ಹೊರಟಾಗ ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.
ಪೌಲನು ರೋಮಾಪುರಕ್ಕೆ ಸೇರಿ ಅಲ್ಲಿ ಎರಡು ವರುಷ ಸೆರೆಯವನಾಗಿದ್ದು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಬಂದದ್ದು.
 
 
2 ಕೊರಿಂಥದವರಿಗೆ 11:21ನಾವು ಬಲವಿಲ್ಲದವರಾಗಿದ್ದೆವೆಂಬಂತೆ ಇದನ್ನು ನನ್ನ ಅವಮಾನಕ್ಕೆ ಹೇಳಿದ್ದರೂ ಯಾವ ಆಧಾರದಿಂದ ಯಾವನಾದರೂ ಧೈರ್ಯವಾಗಿ ನಡಕೊಳ್ಳುತ್ತಾನೋ ಅದರಿಂದಲೇ ನಾನೂ ಧೈರ್ಯವುಳ್ಳವನಾಗಿದ್ದೇನೆ. 
 
22ಇದನ್ನು ಬುದ್ಧಿಹೀನತೆಯಿಂದ ಹೇಳುತ್ತೇನೆ. ಅವರು ಇಬ್ರಿಯರೋ ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೋ ನಾನೂ ಇಸ್ರಾಯೇಲ್ಯನು; ಅವರು ಅಬ್ರಹಾಮನ ವಂಶದವರೋ ನಾನೂ ಅದೇ ವಂಶದವನು; 
 
23ಅವರು ಕ್ರಿಸ್ತನ ಸೇವಕರೋ ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ಬುದ್ಧಿಸ್ವಾಧೀನವಿಲ್ಲದವನಾಗಿ ಮಾತಾಡುತ್ತೇನೆ. ಆತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಗಳೊಳಗೆ ಬಿದ್ದೆನು; ಮಿತಿಮೀರಿ ಪೆಟ್ಟುಗಳನ್ನು ತಿಂದೆನು, ಅನೇಕಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡೆನು. 
 
24ಐದುಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; 
 
25ಮೂರು ಸಾರಿ ಸರಕಾರದವರು ಚಡಿಗಳಿಂದ ನನ್ನನ್ನು ಹೊಡಿಸಿದರು; ಒಂದು ಸಾರಿ ಜನರು ನನ್ನನ್ನು ಕೊಲ್ಲುವದಕ್ಕೆ ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗವು ಒಡೆದು ಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು. 
 
26ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು. 
 
27ಪ್ರಯಾಸ ಪರಿಶ್ರಮಗಳಿಂದ ಕೆಲಸನಡಿಸಿ ಅನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನು ಪಟ್ಟು ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ. 
 
28ಇನ್ನೂ ಬೇರೆ ಸಂಗತಿಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯು ದಿನದಿನ ನನ್ನನ್ನು ಪೀಡಿಸುತ್ತದೆ. 
 
29ಯಾವನಾದರೂ ಬಲವಿಲ್ಲದವನಾದರೆ ನಾನು ಅವನೊಂದಿಗೆ ಬಲವಿಲ್ಲದವನಾಗದೆ ಇರುವೆನೋ? ಯಾವನಾದರೂ ಪಾಪದಲ್ಲಿ ಸಿಕ್ಕಿಕೊಂಡರೆ ನಾನು ತಾಪಪಡುವದಿಲ್ಲವೋ?
 
30ನಾನು ಹೊಗಳಿಕೊಳ್ಳಬೇಕಾದರೆ ನನ್ನ ಬಲಹೀನತೆಯನ್ನು ತೋರ್ಪಡಿಸುವ ವಿಷಯಗಳಲ್ಲಿ ಹೊಗಳಿಕೊಳ್ಳುವೆನು. 
 
31ನಾನು ಸುಳ್ಳಾಡುವದಿಲ್ಲವೆಂದು ಕರ್ತನಾದ ಯೇಸುವಿನ ತಂದೆಯೂ ನಿರಂತರ ಸ್ತುತಿಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು. 
 
32ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು 
 
33ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.

ಪೌಲನು ರೋಮಾಪುರಕ್ಕೆಆಗಮನ

11ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆದಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ. 
 
12ನಾವು ಸುರಕೂಸಿಗೆ ಮುಟ್ಟಿ ಅಲ್ಲಿ ಮೂರು ದಿವಸ ನಿಂತೆವು. 
 
13ಅಲ್ಲಿಂದ ನಾವು ಸುತ್ತಿಕೊಂಡು ಹೋಗಿ ರೇಗಿಯಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣಗಾಳಿ ಹುಟ್ಟಿದ್ದರಿಂದ ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು. 
 
14ಅಲ್ಲಿ ಕ್ರೈಸ್ತ ಸಹೋದರರು ಸಿಕ್ಕಿದರು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿವಸ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು. 
 
15ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ ನಮ್ಮನ್ನು ಎದುರುಗೊಳ್ಳುವದಕ್ಕಾಗಿ ಕೆಲವರು ಅಪ್ಪಿಯಪೇಟೆಯವರೆಗೂ ಕೆಲವರು ತ್ರಿಛತ್ರವೆಂಬ ಸ್ಥಳದವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತೋತ್ರವನ್ನು ಮಾಡಿ ಧೈರ್ಯಗೊಂಡನು.
 
16ನಾವು ರೋಮಾಪುರಕ್ಕೆ ಬಂದ ಮೇಲೆ ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.

ಪೌಲನು ಕಾವಲಿನ ಕೆಳಗೆ ರೋಮಪುರದಲ್ಲಿ ಉಪದೇಶಮಾಡುತ್ತಾ ಇದ್ದನು.

17ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿದನು. ಅವರು ಕೂಡಿದ ಮೇಲೆ ಅವನು ಅವರಿಗೆ – ಸಹೋದರರೇ, ನಾನು ನಮ್ಮ ಜನರಿಗೂ ನಮ್ಮ ಪಿತೃಗಳ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು. 
 
18ಅವರು ನನ್ನನ್ನು ವಿಚಾರಣೆಮಾಡಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು. 
 
19ಅದಕ್ಕೆ ಯೆಹೂದ್ಯರು ಅಡ್ಡಮಾತಾಡಿದ್ದರಿಂದ ನಾನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂತು. ನನ್ನ ಸ್ವದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ. 
 
20ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು. 
 
21ಅವರು ಅವನಿಗೆ – ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ಕಾಗದಗಳು ಬರಲಿಲ್ಲ. ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತಾಡಲೂ ಇಲ್ಲ. 
 
22ಆದರೆ ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವದು ನಮಗೆ ಯುಕ್ತವೆಂದು ತೋರುತ್ತದೆ. ಆ ಮತದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತಾಡುತ್ತಾರೆಂಬದೊಂದೇ ನಮಗೆ ಗೊತ್ತದೆ ಅಂದರು.
 
23ಅವರು ಅವನಿಗೆ ಒಂದು ದಿವಸವನ್ನು ಗೊತ್ತುಮಾಡಲು ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗಿನಿಂದ ಸಾಯಂಕಾಲದವರೆಗೂ ದೇವರ ರಾಜ್ಯವನ್ನು ಕುರಿತು ಪ್ರಮಾಣವಾಗಿ ಸಾಕ್ಷಿಹೇಳುತ್ತಾ ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು. 
 
24ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು. 
 
25ಅವರಲ್ಲಿ ಐಕಮತ್ಯವಿಲ್ಲದೆ ಇರುವಾಗ ಪೌಲನು ಅವರಿಗೆ – ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ 
 
26ನಿಮ್ಮ ಪಿತೃಗಳಿಗೆ ವಿಹಿತವಾಗಿ ಹೇಳಿದ್ದೇನಂದರೆ –
ನೀನು ಈ ಜನರ ಬಳಿಗೆ ಹೋಗಿ ಅವರಿಗೆ –
ನೀವು ಕಿವಿಯಿದ್ದು ಕೇಳಿದರೂ ತಿಳುಕೊಳ್ಳುವದೇ ಇಲ್ಲ;
ಕಣ್ಣಿದ್ದು ನೋಡಿದರೂ ಕಾಣುವದೇ ಇಲ್ಲ ಎಂಬದಾಗಿ ಹೇಳು.
 
27ಯಾಕಂದರೆ ಈ ಜನರ ಹೃದಯವು ಕೊಬ್ಬಿತು;
ಇವರ ಕಿವಿ ಮಂದವಾಯಿತು;
ಇವರು ಕಣ್ಣು ಮುಚ್ಚಿಕೊಂಡಿದ್ದಾರೆ;
ತಾವು ಕಣ್ಣಿನಿಂದ ಕಂಡು
ಕಿವಿಯಿಂದ ಕೇಳಿ ಹೃದಯದಿಂದ ತಿಳಿದು
ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದೇ.
 
28ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು ಎಂದು ಹೇಳಿದನು. 
 
29ಅವನು ಈ ಮಾತನ್ನು ಹೇಳಿದ ಮೇಲೆ ಅವರು ಹೊರಟುಹೋದರು.
 
30ತರುವಾಯ ಅವನು ತಾನೇ ಮಾಡಿಕೊಂಡ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರುಷ ಇದ್ದು ತನ್ನ ಬಳಿಗೆ ಬರುವವರೆಲ್ಲರನ್ನು ಸೇರಿಸಿಕೊಂಡು 
 
31ಯಾವ ಅಡ್ಡಿಯೂ ಇಲ್ಲದೆ ತುಂಬಾ ಧೈರ್ಯದಿಂದ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.

ಗಲಾತ್ಯದವರಿಗೆ1 : ಪೌಲನು ದೇವರಿಂದ ಕರೆಯಲ್ಪಟ್ಟಿದ್ದನು

11ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಮನುಷ್ಯ ಕಲ್ಪನೆಯಲ್ಲವೆಂದು ನಿಮಗೆ ತಿಳಿಯಪಡಿಸುತ್ತೇನೆ. 
 
12ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಿಸಿದನು.
 
13ಹಿಂದೆ ನಾನು ಯೆಹೂದ್ಯಮತದಲ್ಲಿದ್ದಾಗ ನನ್ನ ನಡತೆ ಎಂಥದೆಂದು ನೀವು ಕೇಳಿದ್ದೀರಷ್ಟೆ. ನಾನು ದೇವರ ಸಭೆಯನ್ನು ಅತ್ಯಂತವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು. 
 
14ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.
 
15ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ಕರೆದ ದೇವರು 
 
16ತನ್ನ ಮಗನನ್ನು ನಾನು ಅನ್ಯಜನರಲ್ಲಿ ಪ್ರಸಿದ್ಧಿಪಡಿಸುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಫೈಸಿದಾಗಲೇ ನಾನು ಮನುಷ್ಯರ ಆಲೋಚನೆಯನ್ನು ವಿಚಾರಿಸದೆ 
 
17ಯೆರೂಸಲೇಮಿಗೆ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.
 
18ಮೂರು ವರುಷಗಳಾದ ಮೇಲೆ ಕೇಫನ ಪರಿಚಿತಿಯನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು. 
 
19ಕರ್ತನ ತಮ್ಮನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ಕಾಣಲಿಲ್ಲ. 
 
20ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬದಕ್ಕೆ ಇಗೋ ದೇವರೇ ಸಾಕ್ಷಿ. 21ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು. 
 
22ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಗುರುತಿರಲಿಲ್ಲ. 
 
23ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು ತಾನು ಹಾಳುಮಾಡುತ್ತಿದ್ದ ಮತವನ್ನು ಈಗ ಪ್ರಸಿದ್ಧಿಪಡಿಸುತ್ತಾನೆಂಬ 24ಸುದ್ದಿಯನ್ನು ಮಾತ್ರ ಅವರು ಕೇಳಿ ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.

The four Missionary journeys of Paul:(Paul’s life in Acts – a nut shell)

  • 1st missionary journey (Acts 13:4 to 15:35).
  • 2nd missionary journey (Acts 15:36 to 18:22).
  • 3rd missionary journey (Acts 18:23 to 21:17).
  • Journey to Rome (Acts 27:1 to 28:16).

The first two journeys start and end in Syrian Antioch. The third journey starts in Antioch and ends in Jerusalem. Starting from Jerusalem, the fourth journey ends in Rome. 

After Paul’s Conversion:

  • After his conversion in Damascus, Paul very nearly lost his life (Acts 9:19-25).
  • During three years that followed, Paul spent some time in Arabia. After that, Paul returned to Damascus for the remainder of the three years (Galatians 1:11-18).
  • Paul then came to Jerusalem where he was assisted by Barnabas. Again his life was threatened, so he went home to Tarsus (Galatians 1:18-24, Acts 9:26-30).
  • Paul next went to Antoch in Syria. From there, he was sent down to Judea with aid for the brethren in need because of famine (Acts 11:19-30).
  • Paul and Barnabas then returned to Syrian Antioch (Acts 12:25).
  • At Antioch, Paul and Barnabas are called to embark on what is known as the 1st missionary journey (Acts 13:1-3).

The 1st Missionary Journey:

  • From Antioch’s seaport Selucia, they sail to Cyprus, and work throughout the island (Acts 13:4-12).
  • Next they go to Pamphylia and the other Antioch in Pisidia (Acts 13:13-52)..
  • They went down to Lycaonia, working in Iconium, Lystra, and Derbe (Acts 14:1-23).
  • Passing through Pisidia and Pamphylia again, they then worked in Perga (Acts 14:24).
  • They went down to Attalia and caught a ship back to Syrian Antioch (Acts 14:25-27).

Period in Syrian Antioch:

  • Between the 1st and 2nd missionary journeys there was “a long time”in Antioch in Syria (Acts 14:28).
  • During this period, Paul, Barnabas, and other companions had to go up to Jerusalem to attend a council of the apostles regarding the issue of Christians keeping the law of Moses (Acts 15:1-29).
  • Paul returned to Antioch and worked there a while (Acts 15:30-35).

The 2nd Missionary Journey:

  • Paul chose Silas and embarked on a journey that began by revisiting the places tPaul had worked on his 1st journey (Acts 15:36-41).
  • They worked in Derbe, Lystra, Iconium. Timothy joined Paul and Silas.
  • Paul, with Silas and Timothy, went through the regions of Phrygia and Galatia, then on to Troas (Acts 16:1-8)
  • Paul received a vision calling him to Macedonia (Acts 16:9-40, 17:1-14).
  • Paul went down to Achaia and worked in Athens (Acts 17:15-34).
  • After Athens he went to work in Corinth where he met Aquila and Priscilla (Acts 18:1-17).
  • From Corinth Paul went to Ephesus (Acts 18:18-21).
  • He took a ship to Caesarea, visiting the church there, then went back to Syrian Antioch (Acts 18:21-22).

The 3rd Missionary Journey:

  • After a time in Antioch, Paul set off again and visited with the churches again in Galatia and Phrygia (Acts 18:23)
  • Paul next returned to Ephesus where his work caused an uproar (Acts 19:1-41).
  • Paul then revisited Macedonia and Greece, and came to Troas and after that to Miletus (Acts 20:1-38).
  • From Miletus Paul sailed to Caesarea and then went to Jerusalem (Acts 21:1-17).

 Period in Jerusalem and Caesarea:

  • In Jerusalem Paul had a meeting with James and the elders (Acts 21:18-26).
  • Paul was caused trouble by the Jews (Acts 21:27-40).
  • Paul told his story publicly and nearly got flogged (Acts 28).
  • Paul went on trial and is escorted to Caesarea (Acts 23:1-35).
  • He was imprisoned in Caesarea and goes before Felix (Acts 24)
  • When he appeared before Festus he appealed to Caesar (Acts 25).
  • Paul next appeared before Agrippa (Acts 26).

 Journey to Rome:

  • Paul sails for Rome under escort. On the way, he is shipwrecked (Acts 27)
  • His journey from Malta to Rome (Acts 28:1-15).
  • His house arrest in Rome (Acts 28:16-31).

Related Quiz Articles