ಮೇದ್ಯ ಪಾರಸಿಯರ 70 ವರ್ಷಗಳ ಸೆರೆವಾಸದಿಂದ ಇಸ್ರಾಯೇಲ್‌ಯರ ಮರಳುವಿಕೆ

ಭಾಗ II

ಯೆರೆಮಿಯ 29:10
ಕರ್ತನು ಹೀಗೆ ಹೇಳುತ್ತಾನೆ–ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.

ಎಜ್ರನ ಪುಸ್ತಕದಲ್ಲಿ ಅಧ್ಯಾಯವಾರು ಘಟನೆಗಳು

ಎಜ್ರನು ಯೆರೂಸಲೇಮಿಗೆ ಬಂದನು.

ಎಜ್ರನು 7
1 ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,
ಇವನು ಹಿಲ್ಕೀಯನ ಮಗನು, ಇವನು ಶಲ್ಲೂಮನ ಮಗನು, ಇವನು ಚಾದೋಕನ ಮಗನು, ಇವನು ಅಹೀಟೂಬನ ಮಗನು,
ಇವನು ಅಮ ರ್ಯನ ಮಗನು, ಇವನು ಅಜರ್ಯನ ಮಗನು,
ಇವನು ಮೆರಾಯೋತನ ಮಗನು, ಇವನು ಜೆರಹ್ಯನ ಮಗನು, ಇವನು ಉಜ್ಜೀಯನ ಮಗನು, ಇವನು ಬುಕ್ಕೀಯ ಮಗನು,
ಇವನು ಅಬೀಷೂವನ ಮಗನು, ಇವನು ಫೀನೆಹಾಸನ ಮಗನು, ಇವನು ಎಲ್ಲಾಜಾರನ ಮಗನು, ಇವನು ಪ್ರಧಾನ ಯಾಜಕ ನಾದ ಆರೋನನ ಮಗನು.
ಈ ಎಜ್ರನು ಇಸ್ರಾ ಯೇಲ್‌ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
ಇದಲ್ಲದೆ ಇವನ ಸಂಗಡ ಇಸ್ರಾಯೇಲ್‌ ಮಕ್ಕಳಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ನೆತಿನಿ ಯರಲ್ಲಿಯೂ ಕೆಲವರು ಅರ್ತಷಸ್ತನ ಆಳಿಕೆಯು ಏಳನೇ ವರುಷದಲ್ಲಿ ಯೆರೂಸಲೇಮಿಗೆ ಹೋದರು.
ಅರಸನ ಏಳನೇ ವರುಷದ ಐದನೇ ತಿಂಗಳಲ್ಲಿ ಇವನು ಯೆರೂ ಸಲೇಮಿಗೆ ಬಂದನು.
ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.
10 ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.

ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ

11 ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ–
12 ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.
13 ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ.
14 ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ
15 ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್‌ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ
16 ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
17 ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.
18 ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ.
19 ಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು.
20 ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು.
21 ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ–
22 ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ.
23 ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?
24 ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ–ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.
25 ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.
26 ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.
27 ಆಗ ಎಜ್ರನು — ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.
28 ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.

ಯೆರೂಸಲೇಮಿಗೆ ಹಿಂತಿರುಗಿದರು

ಎಜ್ರನು 8
15 ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ ಯಾಜಕ ರನ್ನೂ ಶೋಧಿಸಿ ನೋಡುವಾಗ ಲೇವಿಯರ ಕುಮಾರ ರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.
16 ಆಗ ನಾನು ಎಲಿ ಯೇಜೆರನು, ಅರೀಯೇಲನು ಶೆಮಾಯನು, ಎಲ್ನಾ ತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ ಯೋಯಾರೀಬನು
17 ಎಲ್ನಾತಾನನು ಎಂಬ ಗ್ರಹಿಕೆ ಯುಳ್ಳವರನ್ನೂ ಕರೇ ಕಳುಹಿಸಿ ಕಸಿಪ್ಯದಲ್ಲಿರುವ ಅಧಿ ಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ ಅವರು ನಮ್ಮ ದೇವರ ಆಲಯಕ್ಕೊಸ್ಕರ ಸೇವಕರನ್ನು ತರುವ ಹಾಗೆ ಅವರು ಕಾಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ ಅವನ ಸಹೋದರನಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.
18 ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ
19 ಹಷಬ್ಯನೂ ಅವನ ಸಂಗಡ ಮೆರಾರಿಯ ಕುಮಾರ ರಲ್ಲಿ ಯೆಶಾಯನೂ ಅವನ ಸಹೋದರರೂ ಅವರ ಕುಮಾರರರೂ ಆದ ಇಪ್ಪತ್ತು ಮಂದಿಯನ್ನೂ
20 ದಾವೀ ದನೂ ಪ್ರಧಾನರೂ ಲೇವಿಯರನ್ನು ಸೇವಿಸುವದಕ್ಕೆ ನೇಮಿಸಿದ ನೆತಿನಿಯರಲ್ಲಿ ಇನ್ನೂರ ಇಪ್ಪತ್ತು ಮಂದಿ ನೆತಿನಿಯರನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಅವರೆಲ್ಲರೂ ಹೆಸರು ಹೆಸರಾಗಿ ಬರೆಯಲ್ಪಟ್ಟಿದ್ದರು.
21 ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
22 ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
23 ಆದದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ಆತನು ನಮ್ಮ ವಿಜ್ಞಾಪನೆಯನ್ನು ಕೇಳಿದನು.
24 ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೆರೆಬ್ಯನನ್ನೂ ಹಷಬ್ಯನನ್ನೂ ಅವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ
25 ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.
26 ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ
27 ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು.
28 ನಾನು ಅವರಿಗೆ–ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ.
29 ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್‌ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು.
30 ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.
31 ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.
32 ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು.
33 ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.
34 ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು.
35 ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್‌ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.
36 ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.

ಅನ್ಯ ವಿವಾಹದ ಬಗ್ಗೆ ಎಜ್ರನ ಪ್ರಾರ್ಥನೆ

ಎಜ್ರನು 9
1 ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು–ಇಸ್ರಾಯೇಲ್‌ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.
ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್‌ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;
ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ–
ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.
ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ
ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.
ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.
10 ಹಾಗಾದರೆ ನನ್ನ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ಪ್ರವಾದಿಗಳಾದ ನಿನ್ನ ಸೇವಕರ ಮುಖಾಂತರ ನೀನು ಆಜ್ಞಾಪಿಸಿದ ನಿನ್ನ ಆಜ್ಞೆಗಳನ್ನು ತೊರೆದಿದ್ದೇವೆ.
11 ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ.
12 ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.
13 ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
14 ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?
15 ಇಸ್ರಾಯೇಲ್‌ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.

ಜನರ ಪಾಪ ಅರಿಕೆ

ಎಜ್ರನು 10
1 ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.
ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ–ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು.
ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ.
ನೀನು ಏಳು; ಯಾಕಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ಇರುವೆವು; ಧೈರ್ಯದಿಂದಿರು, ಅದನ್ನು ಮಾಡು ಅಂದರು.
ಆಗ ಎಜ್ರನು ಎದ್ದು, ಪ್ರಧಾನಯಾಜಕರೂ ಲೇವಿಯರೂ ಸಮಸ್ತ ಇಸ್ರಾ ಯೇಲ್ಯರೂ ಈ ಮಾತಿನ ಪ್ರಕಾರವಾಗಿ ಮಾಡಲು ಅವರು ಆಣೆ ಇಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.
ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು.
ಆಗ ಸೆರೆಯ ಮಕ್ಕಳೆಲ್ಲರೂ ಯೆರೂಸಲೇಮಿಗೆ ಕೂಡಿ ಬರಬೇಕೆಂದು ಯೆಹೂದ ಮತ್ತು ಯೆರೂಸ ಲೇಮಿನಲ್ಲಿ ಎಲ್ಲೆಲ್ಲಿಯೂ ಪ್ರಕಟಿಸಿದರು.
ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು.
ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
10 ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ–ನೀವು ಇಸ್ರಾಯೇಲ್ಯರ ಅಪರಾಧ ವನ್ನು ಅಧಿಕವಾಗಿ ಮಾಡಲು ಅನ್ಯಸ್ತ್ರೀಯರನು್ನು ಮದುವೆಮಾಡಿಕೊಂಡದ್ದರಿಂದ ಅಕೃತ್ಯ ಮಾಡಿದಿರಿ.
11 ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ಈ ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು.
12 ಆಗ ಸಭೆಯೆಲ್ಲಾ ಪ್ರತ್ಯುತ್ತರವಾಗಿ ದೊಡ್ಡ ಶಬ್ದ ದಿಂದ–ನೀನು ಹೇಳಿದ ಪ್ರಕಾರವೇ ನಾವು ಮಾಡ ಬೇಕು,
13 ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ.
14 ಆದಕಾರಣ ದಯಮಾಡಿ–ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು.
15 ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು.
16 ಸೆರೆ ಇರುವಿಕೆಯ ಮಕ್ಕಳು ಇದೇ ಪ್ರಕಾರ ಮಾಡಿದರು; ಆದದರಿಂದ ಯಾಜಕನಾದ ಎಜ್ರನು ತಮ್ಮ ತಂದೆಗಳ ಮನೆಯ ಪ್ರಕಾರ ತಂದೆಗಳಲ್ಲಿ ಪ್ರಮುಖರಾದ ಕೆಲ ವರು ಹೆಸರು ಹೆಸರಾಗಿ ಪ್ರತ್ಯೇಕಿಸಲ್ಪಟ್ಟು, ಈ ಕಾರ್ಯವನ್ನು ಶೋಧಿಸಲು ಹತ್ತನೇ ತಿಂಗಳ ಮೊದ ಲನೇ ದಿವಸದಲ್ಲಿ ಕುಳಿತುಕೊಂಡರು.
17 ಅನ್ಯ ಸ್ತ್ರೀಯ ರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೇ ತಿಂಗಳ ಮೊದಲನೇ ದಿವಸದಲ್ಲಿ ಮುಗಿಸಿದರು.

ಅನ್ಯಸ್ತ್ರೀಯರನ್ನು ವಿವಾಹದಲ್ಲಿ ತಕ್ಕೊಂಡವರು

18 ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ– ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ.
19 ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.

ಹಗ್ಗಾಯ

ಹಗ್ಗಾಯ 1 ಕರ್ತನ ಆಲಯವನ್ನು ಕಟ್ಟುವ ಕಾಲ

1 ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ–ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.
ಆಗ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು. ಏನಂದರೆ–
ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ–ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
ಸೈನ್ಯಗಳ ಕರ್ತನು ಹೇಳುವದೇನಂದರೆ — ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ.
ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?
10 ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.
11 ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
12 ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.
13 ಆಗ ಕರ್ತನ ಸೇವಕನಾದ ಹಗ್ಗಾಯನು ಕರ್ತನ ಮಾತನ್ನು ಜನರಿಗೆ ತಂದು–ನಾನು ನಿಮ್ಮ ಸಂಗಡ ಇದ್ದೇನೆಂದು ಕರ್ತನು ಹೇಳು ತ್ತಾನೆ.
14 ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿ
15 ತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.

ಹಗ್ಗಾಯ 2 ಮುಂದಿನ ಮಹಿಮೆಯ ವಾಗ್ದಾನ

1 ಏಳನೆಯ ತಿಂಗಳಿನಲ್ಲಿ, ತಿಂಗಳಿನ ಇಪ್ಪ ತ್ತೊಂದನೆಯ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು; ಏನಂದರೆ–
ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ–
ಈ ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ?
ಆದಾಗ್ಯೂ ಈಗ ಕರ್ತನು ಹೇಳುತ್ತಾನೆ –ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಶುದ್ಧನಾದವನಿಗೆ ಆಶೀರ್ವಾದ

10 ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ,
11 ಸೈನ್ಯಗಳ ಕರ್ತನು ಹೇಳುವದೇ ನಂದರೆ–ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ–
12 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪರಿಶುದ್ಧ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯ ನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾ ದರೂ ಎಣ್ಣೆಯನ್ನಾದರೂ ಯಾವ ವಿಧದ ಆಹಾರವ ನ್ನಾದರೂ ಮುಟ್ಟಿದರೆ ಅದು ಪರಿಶುದ್ಧವಾಗುವದೋ ಕೇಳು ಅಂದನು. ಯಾಜಕರು–ಇಲ್ಲವೆಂದು ಉತ್ತರ ಕೊಟ್ಟರು.
13 ಆಗ ಹಗ್ಗಾಯನು–ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು–ಅಶುದ್ದವಾಗುವದು ಅಂದರು.
14 ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ –ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.
15 ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ
16 ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.
17 ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
18 ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
19 ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.

ಜೆರುಬ್ಬಾಬೆಲನು- ಕರ್ತನ ಮುದ್ರೆಯ ಉಂಗುರ

20 ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು.
21 ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ–ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
22 ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.
23 ಸೈನ್ಯಗಳ ಕರ್ತನು ಅನ್ನುತ್ತಾನೆ–ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ

ಜೆಕರ್ಯ ಪುಸ್ತಕ
ಅಧ್ಯಾಯಗಳು 1–6
ಸೆರೆವಾಸದಿಂದ ಮರಳುವ ಪ್ರವಾದಿಯ ದರ್ಶನ ಮತ್ತು ಪ್ರವಾದನೆಗಳು
ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.“- ಜೆಕರ್ಯ 4:6


ಜೆಕರ್ಯ 1 ಕರ್ತನ ಕಡೆಗೆ ತಿರುಗಿ ಕೊಳ್ಳಲು ಕರೆ

1 ದಾರ್ಯಾವೆಷನ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಕರ್ತನ ವಾಕ್ಯವು ಇದ್ದೋನನ ಮಗನಾದ ಬೆರಕ್ಯನ ಮಗನಾದ ಜೆಕರ್ಯ ನೆಂಬ ಪ್ರವಾದಿಗೆ ಉಂಟಾಯಿತು. ಹೇಗಂದರೆ–
ಕರ್ತನು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿ ದ್ದಾನೆ.
ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ–ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ–ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ–ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು–ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.

ಗಂಧದ ಗಿಡಗಳ ನಡುವೆ ಒಬ್ಬ ಮನುಷ್ಯನು

ದಾರ್ಯಾವೆಷನ ಎರಡನೆಯ ವರುಷದ ಹನ್ನೊಂ ದನೆ ತಿಂಗಳಾದ ಶೆಬಾಟ್‌ ಎಂಬ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ವಾಕ್ಯವು ಇದ್ದೋನಿನ ಮಗನಾದ ಬೆರೆಕ್ಯನ ಮಗನಾದ ಪ್ರವಾದಿಯಾದ ಜೆಕರ್ಯನಿಗೆ ಉಂಟಾಯಿತು. ಹೇಗೆಂದರೆ,
ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
ಆಗ ನಾನು–ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು–ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
10 ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ–ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು.
11 ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ — ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
12 ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು–ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
13 ಆಗ ಕರ್ತನು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೇ ಮಾತುಗಳಿಂದಲೂ ಆದರಣೆಯ ಮಾತು ಗಳಿಂದಲೂ ಉತ್ತರಕೊಟ್ಟನು.
14 ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ–ಕೂಗಿ ಹೇಳು; ಏನಂದರೆ–ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ–ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.
15 ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
16 ಆದದರಿಂದ ಕರ್ತನು ಹೀಗೆ ಹೇಳುತ್ತಾನೆ –ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.
17 ಇನ್ನೂ ಕೂಗಿ ಹೇಳು, ಏನಂದರೆ–ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ–ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.

ನಾಲ್ಕು ಕೊಂಬುಗಳು ಮತ್ತು ನಾಲ್ಕು ಬಡಗಿಯವರು

18 ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು.
19 ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು–ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು–ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು.
20 ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.
21 ಆಗ ನಾನು–ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ–ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.

ಜೆಕರ್ಯ 2 ಅಳೆಯುವ ನೂಲಿದ್ದ ಒಬ್ಬ ಮನುಷ್ಯನು

1 ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.
2 ಆಗ ನಾನು–ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ–ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.
3 ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.
4 ಇವನು ಅವನಿಗೆ ಹೀಗಂದನು–ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ–ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
5 ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
6 ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
7 ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.
8 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ–ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
9 ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
10 ಚೀಯೋನ್‌ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.
11 ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
12 ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.
13 ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.

ಜೆಕರ್ಯ 3 ಪ್ರಧಾನ ಯಾಜಕನಿಗೆ ಶುದ್ಧವಸ್ತ್ರ

1 ಇದಲ್ಲದೆ ಆತನು ನನಗೆ–ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
2 ಆಗ ಕರ್ತನ ದೂತನು ಸೈತಾನನಿಗೆ–ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
3 ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು.
4 ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ–ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ–ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
5 ಆಗ ನಾನು–ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.
6 ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ–
7 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ–ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
8 ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
9 ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
10 ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

ಜೆಕರ್ಯ 4 ಬಂಗಾರದ ದೀಪಸ್ತಂಭವು ಮತ್ತು ಇಪ್ಪೇಮರಗಳು

1 ಇದಲ್ಲದೆ ನನ್ನ ಸಂಗಡ ಮಾತನಾಡಿದ ದೂತನು ತಿರಿಗಿ ಬಂದು
2 ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ–ನೀನು ಏನು ನೋಡುತ್ತೀ ಅಂದನು. ಅದಕ್ಕೆ–ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.
3 ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು.
4 ಹೀಗೆ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ –ನನ್ನ ಒಡೆಯನೇ, ಇವೇನು ಅಂದೆನು.
5 ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರ ಕೊಟ್ಟು ನನಗೆ–ಇವೇನೆಂದು ಅರಿಯುವದಿಲ್ಲವೋ ಅಂದನು.
6 ನಾನು–ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ–ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ–ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
7 ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ–ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
8 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. ಹೇಗಂದರೆ–
9 ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
10 ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
11 ಆಗ ನಾನು ಉತ್ತರ ಕೊಟ್ಟು ಅವನಿಗೆ–ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು.
12 ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ–ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಈ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು.
13 ಅವನು ನನಗೆ–ಇವು ಏನೆಂದು ಅರಿಯು ವದಿಲ್ಲವೋ ಅಂದನು.
14 ನಾನು–ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು–ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.

ಜೆಕರ್ಯ 5 ಹಾರುವ ಸುರಳಿ

1 ಆಗ ನಾನು ತಿರಿಗಿಕೊಂಡು ನನ್ನ ಕಣ್ಣು ಗಳನ್ನೆತ್ತಿ ನೋಡಲು ಇಗೋ, ಹಾರುವ ಸುರಳಿ.
2 ಆಗ ಅವನು ನನಗೆ–ಏನು ನೋಡುತ್ತೀ ಅಂದಾಗ ನಾನು–ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು.
3 ಆಗ ಅವನು ನನಗೆ ಹೇಳಿದ್ದೇನಂದರೆ–ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.
4 ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.

ಎಫದ ಮಧ್ಯದಲ್ಲಿ ಒಬ್ಬ ಸ್ತ್ರೀ

5 ಆಗ ನನ್ನ ಸಂಗಡ ಮಾತನಾಡಿದ ದೂತನು ಹೊರಟು–ನಿನ್ನ ಕಣ್ಣುಗಳನ್ನೆತ್ತಿ ಹೊರಡುವಂಥದ್ದು ಏನೆಂದು ನೋಡು ಎಂದು ನನಗೆ ಹೇಳಿದನು.
6 ನಾನು –ಇದೇನು ಅಂದಾಗ ಅವನು–ಇದು ಹೊರಡು ವಂಥ ಎಫವು ಅಂದನು; ಇದಲ್ಲದೆ ಅವನು–ಇದೇ ಸಮಸ್ತ ಭೂಮಿಯಲ್ಲಿ ಅವರ ಹೋಲಿಕೆ ಅಂದನು.
7 ಇಗೋ, ಸೀಸದ ಮಣವು ಎತ್ತಲ್ಪಟ್ಟಿತು; ಎಫದ ಮಧ್ಯದಲ್ಲಿ ಒಬ್ಬ ಸ್ತ್ರೀ ಕೂತುಕೊಂಡಿದ್ದಳು. ಆಗ ಅವನು –ಇದು ದುಷ್ಟತ್ವವು ಎಂತಂದು
8 ಅವಳನ್ನು ಎಫದ ಮಧ್ಯದಲ್ಲಿ ಹಾಕಿ ಆ ನೂಲಿನ ಸೀಸದ ಭಾರವನ್ನು ಅದರ ಬಾಯಿಯ ಮೇಲೆ ಇಟ್ಟನು.
9 ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.
10 ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ–ಇವರು ಎಫವನ್ನು ಎಲ್ಲಿಗೆ ಹೊತ್ತು ಕ್ಕೊಂಡು ಹೋಗುತ್ತಾರೆ ಅಂದೆನು.
11 ಅವನು ನನಗೆ –ಶಿನಾರ್‌ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.


ಜೆಕರ್ಯ 6 ನಾಲ್ಕು ರಥಗಳು

1 ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು.
2 ಮೊದಲನೇ ರಥಕ್ಕೆ ಕೆಂಪು ಕುದುರೆಗಳಿದ್ದವು; ಎರಡನೇ ರಥಕ್ಕೆ ಕಪ್ಪು ಕುದುರೆಗಳು;
3 ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು.
4 ಆಗ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ–ನನ್ನ ಒಡೆಯನೇ, ಇದೇನು ಅಂದೆನು.
5 ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ–ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ.
6 ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ.
7 ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು–ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.
8 ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ–ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.

ಯೆಹೋಶುವನ ಕಿರೀಟ

9 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು.
10 ಹೇಗಂದರೆ–ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ
11 ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
12 ಅವನಿಗೆ ಹೇಳತಕ್ಕದ್ದೇನಂದರೆ–ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ–ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
13 ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
14 ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.
15 ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.

 
 

Related Quiz Articles