ಆತ್ಮೀಕ ಕಾರ್ಯಗಳ ಮೂಲಕ ನಡೆದ ಅದ್ಬುತ ಕಾರ್ಯಗಳು

ನೋಹ ಮತ್ತು ಜಲಪ್ರಳಯ

ಆದಿಕಾಂಡ 6
ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
10 ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬ ಮೂವರು ಕುಮಾರರು ಹುಟ್ಟಿದರು.
11 ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
12 ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.
13 ಆಗ ದೇವರು ನೋಹನಿಗೆ–ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.
14 ನೀನು ಗೋಫೆರ್‌ ಮರದಿಂದ ನಾವೆಯನ್ನು ಮಾಡಿಕೊಂಡು ಆ ನಾವೆಯಲ್ಲಿ ಕೋಣೆಗಳನ್ನು ಮಾಡು; ಅದರ ಹೊರಭಾಗಕ್ಕೂ ಒಳಭಾಗಕ್ಕೂ ರಾಳವನ್ನು ಹಚ್ಚು.
15 ನೀನು ಅದನ್ನು ಮಾಡತಕ್ಕ ಮಾದರಿಯು ಇದೇ; ನಾವೆಯ ಉದ್ದವು ಮುನ್ನೂರು ಮೊಳ ಅಗಲ ಐವತ್ತು ಮೊಳ ಎತ್ತರ ಮೂವತ್ತು ಮೊಳ ಇರಬೇಕು.
16 ನೀನು ನಾವೆಗೆ ಕಿಟಕಿಯನ್ನು ಮಾಡಬೇಕು; ಒಂದು ಮೊಳದೊಳಗೆ ಅದನ್ನು ಮೇಲ್ಭಾಗದಲ್ಲಿ ಮುಗಿಸಬೇಕು. ಅದರ ಪಕ್ಕದಲ್ಲಿ ನಾವೆಯ ಬಾಗಲನ್ನು ಇಡಬೇಕು; ಕೆಳಗಿನದು ಎರಡನೆಯದು ಮೂರನೆಯದು ಎಂಬ ಅಂತಸ್ತುಗಳನ್ನು ಅದಕ್ಕೆ ಮಾಡಬೇಕು.
17 ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
18 ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.
19 ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.
20 ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.
21 ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.
22 ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.

ಆದಿಕಾಂಡ 7
ಕರ್ತನು ತನಗೆ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು.
ಜಲಪ್ರಳಯವು ಭೂಮಿಯ ಮೇಲೆ ಉಂಟಾದಾಗ ನೋಹನು ಆರುನೂರು ವರುಷದವನಾಗಿದ್ದನು.
ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು.
ಶುದ್ಧ ಪ್ರಾಣಿಗಳಲ್ಲಿಯೂ ಅಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿ ಗಳಲ್ಲಿಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವೂ
ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು.
10 ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು.
11 ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
12 ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು.
13 ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್‌ ಹಾಮ್‌ ಯೆಫೆತ್‌ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು.
14 ಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು.
15 ಹೀಗೆ ಜೀವಶ್ವಾಸವಿರುವ ಎಲ್ಲಾ ಶರೀರಗಳಲ್ಲಿಯೂ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು.
16 ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
17 ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು.
18 ನೀರು ಪ್ರಬಲವಾಗಿ ಭೂಮಿಯ ಮೇಲೆ ಬಹಳವಾಗಿ ಹೆಚ್ಚಿದಾಗ ಆ ನಾವೆಯು ನೀರಿನ ಮೇಲೆ ಹೋಯಿತು.
19 ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು.
20 ನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು.
21 ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು.
22 ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು.
23 ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.
24 ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.

ಆದಿಕಾಂಡ 8
1 ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
ಅಗಾಧದ ಬುಗ್ಗೆಗಳೂ ಆಕಾಶದ ಕಿಟಕಿಗಳೂ ಮುಚ್ಚಲ್ಪಟ್ಟವು. ಇದಲ್ಲದೆ ಆಕಾಶದಿಂದ ಬೀಳುವ ಮಳೆಯೂ ನಿಂತಿತು.
ಹೀಗೆ ಭೂಮಿಯ ಮೇಲಿದ್ದ ಜಲವು ಕ್ರಮವಾಗಿ ತಗ್ಗಿಹೋಯಿತು. ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆ ಯಾಯಿತು.
ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್‌ ಬೆಟ್ಟಗಳ ಮೇಲೆ ನೆಲೆಸಿತ್ತು.
ಹತ್ತನೆಯ ತಿಂಗಳಿನ ವರೆಗೆ ನೀರು ಕ್ರಮವಾಗಿ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತುದಿಗಳು ಕಾಣ ಬಂದವು.
ನಾಲ್ವತ್ತು ದಿವಸಗಳಾದ ತರುವಾಯ ಆದದ್ದೇ ನಂದರೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು
ಒಂದು ಕಾಗೆಯನ್ನು ಹೊರಗೆ ಬಿಟ್ಟನು; ಅದು ಹೊರಟು ಭೂಮಿಯ ಮೇಲಿದ್ದ ಜಲವು ಆರಿಹೋಗುವ ವರೆಗೆ ಹೋಗುತ್ತಾ ಬರುತ್ತಾ ಇತ್ತು.
ಭೂಮುಖದ ಮೇಲೆ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ನೋಡುವಂತೆ ಒಂದು ಪಾರಿವಾಳವನ್ನು ಬಿಟ್ಟನು.
ಆದರೆ ನೀರು ಭೂಮುಖದಲ್ಲೆಲ್ಲಾ ಇದ್ದದ್ದರಿಂದ ಪಾರಿವಾಳದ ಅಂಗಾಲಿಗೆ ವಿಶ್ರಮಿಸುವದಕ್ಕೆ ಸ್ಥಳವು ಸಿಕ್ಕದೆ ಅದು ತಿರಿಗಿ ಅವನ ಬಳಿಗೆ ನಾವೆಗೆ ಬಂತು. ಅವನು ಕೈಚಾಚಿ ಅದನ್ನು ಹಿಡಿದು ನಾವೆಯೊಳಗೆ ಸೇರಿಸಿ ಕೊಂಡನು.
10 ಅವನು ಇನ್ನು ಏಳು ದಿನಗಳಾದ ಮೇಲೆ ತಿರಿಗಿ ನಾವೆಯೊಳಗಿಂದ ಪಾರಿವಾಳವನ್ನು ಬಿಟ್ಟನು.
11 ಸಾಯಂಕಾಲದಲ್ಲಿ ಪಾರಿವಾಳವು ಅವನ ಬಳಿಗೆ ಬರಲಾಗಿ ಇಗೋ, ಕಿತ್ತಿದ್ದ ಹಿಪ್ಪೆ ಎಲೆಯು ಅದರ ಬಾಯಲ್ಲಿತ್ತು; ಆಗ ನೋಹನು ಭೂಮಿಯ ಮೇಲಿನಿಂದ ನೀರು ಕಡಿಮೆಯಾಯಿತೆಂದು ತಿಳು ಕೊಂಡನು.
12 ಇನ್ನೂ ಏಳು ದಿನಗಳು ತಡೆದು ಪಾರಿವಾಳವನ್ನು ಬಿಟ್ಟಾಗ ಅದು ತಿರಿಗಿ ಅವನ ಬಳಿಗೆ ಬರಲೇ ಇಲ್ಲ.
13 ಆರುನೂರ ಒಂದನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆದದ್ದೇನಂದರೆ, ನೀರು ಭೂಮಿಯ ಮೇಲಿನಿಂದ ಒಣಗಿಹೋಗಿತ್ತು. ನೋಹನು ನಾವೆಯ ಮುಚ್ಚಳವನ್ನು ತೆಗೆದು ನೋಡಲಾಗಿ, ಇಗೋ, ಭೂಮಿಯು ಒಣಗಿಹೋಗಿತ್ತು.
14 ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.
15 ಆಗ ದೇವರು ನೋಹನೊಂದಿಗೆ ಮಾತನಾಡಿ ಹೇಳಿದ್ದೇನಂದರೆ–
16 ನೀನೂ ನಿನ್ನ ಸಂಗಡ ನಿನ್ನ ಹೆಂಡತಿಯೂ ನಿನ್ನ ಕುಮಾರರೂ ಅವರ ಹೆಂಡತಿ ಯರೂ ನಾವೆಯೊಳಗಿಂದ ಹೊರಗೆ ಹೋಗಿರಿ.
17 ನಿನ್ನ ಸಂಗಡ ಇರುವ ಎಲ್ಲಾ ಶರೀರದ ಪಕ್ಷಿಗಳೂ ಮೃಗಗಳೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಎಲ್ಲಾ ಜೀವಜಂತುಗಳೂ ಭೂಮಿಯ ಮೇಲೆ ಅಭಿವೃದ್ಧಿಯಾಗಿ ಭೂಮಿಯಲ್ಲಿ ಹೆಚ್ಚುವ ಹಾಗೆ ಅವು ನಿನ್ನ ಸಂಗಡ ಹೊರಗೆ ಬರಮಾಡು ಅಂದನು.
18 ಆಗ ನೋಹನ ಸಂಗಡ ಅವನ ಹೆಂಡತಿ ಕುಮಾರರು ಸೊಸೆಯರು ಹೊರಗೆ ಬಂದರು.
19 ಎಲ್ಲಾ ಮೃಗಗಳೂ ಕ್ರಿಮಿಗಳೂ ಪಕ್ಷಿಗಳೂ ಭೂಮಿ ಯಲ್ಲಿ ಹರಿದಾಡುವ ಎಲ್ಲವುಗಳು ತಮ್ಮತಮ್ಮ ಜಾತ್ಯಾ ನುಸಾರವಾಗಿ ನಾವೆಯೊಳಗಿಂದ ಹೊರಬಂದವು.
20 ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
21 ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ–ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.
22 ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.

ಯಾಕೋಬನ ಮಂದೆಯ ವ್ಯವಹಾರ:

ಆದಿಕಾಂಡ 31
ಯಾಕೋಬನು ರಾಹೇಲಳನ್ನೂ ಲೇಯಳನ್ನೂ ಹೊಲದಲ್ಲಿದ್ದ ತನ್ನ ಮಂದೆಯ ಬಳಿಗೆ ಕರೇಕಳುಹಿಸಿ
ಅವರಿಗೆ–ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದಹಾಗೆ ಈಗ ಇಲ್ಲದಿರುವದನ್ನು ನಾನು ನೋಡುತ್ತಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಸಂಗಡ ಇದ್ದನು.
ನಾನು ಪೂರ್ಣ ಬಲದಿಂದ ನಿಮ್ಮ ತಂದೆಯ ಸೇವೆಮಾಡಿದ್ದು ನಿಮಗೆ ತಿಳಿದಿದೆ.
ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.
ನಿಮ್ಮ ತಂದೆ ನನಗೆ –ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ಚುಕ್ಕೆಯುಳ್ಳದ್ದೇ ಈಯಿತು; ಅವನು –ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ರೇಖೆಯುಳ್ಳದ್ದನ್ನೇ ಈಯಿತು.
ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು ಅವುಗಳನ್ನು ನನಗೆ ಕೊಟ್ಟಿದ್ದಾನೆ.
10 ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು.
11 ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು–ಇಲ್ಲಿ ಇದ್ದೇನೆ ಅಂದೆನು.
12 ಅವನು ನನಗೆ–ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ.
13 ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.

ಆದಿಕಾಂಡ 30
25 ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ–ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು.
26 ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.
27 ಲಾಬಾನನು ಅವನಿಗೆ–ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
28 ನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು.
29 ಅದಕ್ಕೆ ಯಾಕೋಬನು ಅವನಿಗೆ–ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ.
30 ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
31 ಅದಕ್ಕೆ ಲಾಬಾನನು–ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು–ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು;
32 ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.
33 ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
34 ಲಾಬಾನನು–ಇಗೋ, ನೀನು ಹೇಳಿದಂತೆಯೇ ಆಗಲಿ ಅಂದನು.
35 ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.
36 ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು.
37 ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್‌ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ
38 ಮಂದೆಗಳು ನೀರು ಕುಡಿಯುವದಕ್ಕೆ ಬಂದ ಸಮಯವೇ ಅವುಗಳಿಗೆ ಸಂಗಮಕಾಲವಾಗಿತ್ತು. ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿ ದ್ದರಿಂದ
39 ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
40 ಯಾಕೋಬನು ಕುರಿಗಳನ್ನು ಬೇರೆ ಮಾಡಿ ಲಾಬಾನನ ಮಂದೆಯಲ್ಲಿರುವ ರೇಖೆಗಳು ಳ್ಳವುಗಳೆದುರಾಗಿಯೂ ಕಂದು ಬಣ್ಣ ಉಳ್ಳವು ಗಳಿಗೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ ಅವುಗಳನ್ನು ಬೇರೆ ಇಟ್ಟುಕೊಂಡನು.
41 ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿ ಗಳಲ್ಲಿ ಕೋಲುಗಳನ್ನಿಟ್ಟನು.
42 ಆದರೆ ಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನ ವಾದವುಗಳು ಲಾಬಾನನಿಗೂ ಬಲವಾದವುಗಳು ಯಾಕೋಬನಿಗೂ ಆದವು.
43 ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.

ಇಸಾಕನು ಬರಗಾಲದಲ್ಲಿ ಬಿತ್ತುತ್ತಾನೆ

ಆದಿಕಾಂಡ 26
1 ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.
ಆಗ ಕರ್ತನು ಅವನಿಗೆ ಕಾಣಿಸಿಕೊಂಡು–ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ನೇಮವಿಧಿ ಆಜ್ಞೆ ಕಟ್ಟಳೆಗಳನ್ನು ಕೈಕೊಂಡನು ಅಂದನು.
ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.
ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು–ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು–ಆಕೆಯು ನನ್ನ ತಂಗಿ ಅಂದನು.
ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ ಆದದ್ದೇನಂದರೆ, ಫಿಲಿಷ್ಟಿಯರ ಅರಸನಾದ ಅಬೀಮೆಲೆ ಕನು ಕಿಟಕಿಯಿಂದ ನೋಡುತ್ತಿದಾಗ ಅಗೋ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುತ್ತಿದ್ದನು.
ಆಗ ಅಬೀಮೆಲೆಕನು ಇಸಾಕ ನನ್ನು ಕರೆದು–ಅಗೋ, ಆಕೆಯು ಖಂಡಿತ ನಿನ್ನ ಹೆಂಡತಿಯಾಗಿದ್ದಾಳೆ. ಆದರೆ ನೀನು–ಆಕೆಯು ನನ್ನ ತಂಗಿ ಎಂದು ಯಾಕೆ ಹೇಳಿದಿ ಅಂದನು. ಇಸಾಕನು ಅವನಿಗೆ–ನಾನು ಆಕೆಯ ನಿಮಿತ್ತ ಸಾಯಬಾರ ದೆಂದು ಹಾಗೆ ಹೇಳಿದೆನು ಅಂದನು.
10 ಆಗ ಅಬೀಮೆಲೆಕನು–ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.
11 ಅಬೀಮೆಲೆಕನು ತನ್ನ ಜನರಿಗೆಲ್ಲಾ–ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು.
12 ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
13 ಅವನು ಅತಿ ದೊಡ್ಡವನಾಗುವ ವರೆಗೆ ಕ್ರಮೇಣ ಅಭಿವೃದ್ಧಿಯಾಗುತ್ತಾ ಬಂದನು.

ಎಲಿಷನು ನೀರನ್ನು ಸಿಹಿಗೊಳಿಸುತ್ತಾನೆ:

2 ಅರಸುಗಳು 2
15 ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ–ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
16 ಇದ ಲ್ಲದೆ ಅವರು ಅವನಿಗೆ–ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.
17 ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು–ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.
18 ಅವನು ಇನ್ನೂ ಯೆರಿಕೋವಿನಲ್ಲಿದ್ದಾಗ ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಇವ ರಿಗೆ–ಹೋಗಬೇಡಿರೆಂದು ನಾನು ನಿಮಗೆ ಹೇಳ ಲಿಲ್ಲವೋ ಅಂದನು.
19 ಆಗ ಆ ಪಟ್ಟಣದ ಜನರು ಎಲೀಷನಿಗೆ– ಇಗೋ, ಈ ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು.
20 ಅದಕ್ಕ ವನು–ನನ್ನ ಬಳಿಗೆ ಹೊಸ ಗಡಿಗೆಯನ್ನು ತಕ್ಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ ಅಂದನು. ಅವರು ಅದನ್ನು ಅವನ ಬಳಿಗೆ ತಕ್ಕೊಂಡು ಬಂದರು.
21 ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ–ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು.
22 ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನ ವರೆಗೂ ಹಾಗೆಯೇ ಇರುತ್ತದೆ.

ಮಡಕೆಯಲ್ಲಿ ಸಾವನ್ನು ಗುಣಪಡಿಸುವುದು

2 ಅರಸುಗಳು 4
38 ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.
39 ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ ಅಡವಿಯ ಬಳ್ಳಿಯನ್ನು ನೋಡಿ ಅಡವಿಯ ಕಾಯಿ ಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು ಅವುಗಳನ್ನು ಕೊಯಿದು ಆಹಾರವಿರುವ ಗಡಿಗೆಯಲ್ಲಿ ಹಾಕಿದನು; ಯಾಕಂದರೆ ಅವರು ಅವುಗಳನ್ನು ಅರಿ ಯದೆ ಇದ್ದರು.
40 ಜನರಿಗೆ ಅದನ್ನು ತಿನ್ನುವದಕ್ಕೆ ಬಡಿಸಿದರು. ಆಹಾರವನ್ನು ತಿನ್ನುತ್ತಿರುವಾಗ ಏನಾಯಿ ತಂದರೆ, ಅವರು–ದೇವರ ಮನುಷ್ಯನೇ, ಗಡಿಗೆಯಲ್ಲಿ ವಿಷ ಎಂದು ಕೂಗಿದರು. ಯಾಕಂದರೆ ಅದರಲ್ಲಿದ್ದದ್ದನ್ನು ಅವರು ತಿನ್ನಲಾರದೆ ಇದ್ದರು.
41 ಆಗ ಅವನು ಹಿಟ್ಟನ್ನು ತಕ್ಕೊಂಡು ಬರ ಹೇಳಿ ಅದನ್ನು ಗಡಿಗೆಯಲ್ಲಿ ಹಾಕಿ ಜನರು ತಿನ್ನುವದಕ್ಕೆ ಬಡಿಸಿರಿ ಅಂದನು. ಆಗ ಆ ಗಡಿಗೆಯಲ್ಲಿ ಕೆಟ್ಟದ್ದೇನೂ ಇರಲಿಲ್ಲ.

ನೂರು ಮಂದಿಗೆ ರೊಟ್ಟಿ ಬಡಿಸುವದು

42 ಇದಲ್ಲದೆ ಬಾಳ್‌ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.
43 ಆಗ ಅವನು–ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು — ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.
44 ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.

ಕೆಂಪು ಸಮುದ್ರ ಮತ್ತು ಮಾರಾ

ವಿಮೋಚನಕಾಂಡ 14
ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು–ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು.
ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.
ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್‌ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
10 ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್‌ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್‌ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
11 ಅವರು ಮೋಶೆಗೆ–ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?
12 ನಾವು ಐಗುಪ್ತದೇಶ ದಲ್ಲಿದ್ದಾಗಲೇ–ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.
13 ಅದಕ್ಕೆ ಮೋಶೆಯು ಜನರಿಗೆ–ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
14 ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
15 ಆಗ ಕರ್ತನು ಮೋಶೆಗೆ–ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್‌ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು.
16 ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.
17 ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
18 ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.
19 ಆಗ ಇಸ್ರಾಯೇಲ್‌ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
20 ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.
21 ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
22 ಹೀಗೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
23 ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು.
24 ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
25 ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ–ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.
26 ಆಗ ಕರ್ತನು ಮೋಶೆಗೆ–ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು.
27 ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.
28 ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
29 ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
30 ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.
31 ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
 
ವಿಮೋಚನಕಾಂಡ 15
19 ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
20 ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
21 ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ–ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.

ಮಾರಾ ಮತ್ತು ಏಲೀಮಿನ ನೀರು

22 ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
23 ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
24 ಆದದ ರಿಂದ ಜನರು–ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.
25 ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.
26 ಆತನು– ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.
27 ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.

ಬಂಡೆಯಿಂದ ನೀರು ಭಾಗ -1

ವಿಮೋಚನಕಾಂಡ 17
1 ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್‌ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.
ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ–ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ–ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ–ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.
ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು–ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.
ಆಗ ಕರ್ತನು ಮೋಶೆಗೆ–ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು.
ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್‌ ಮಕ್ಕಳು ವಿವಾದ ಮಾಡಿದರು.– ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.

ಬಂಡೆಯಿಂದ ನೀರು ಭಾಗ -2

ಅರಣ್ಯಕಾಂಡ 20
1 ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಜಿನ್‌ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
ಆಗ ಸಭೆಗೆ ನೀರಿಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿ ಕೊಂಡರು.
ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ–ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.
ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ?
ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
ಆಗ ಮೋಶೆಯೂ ಆರೋನನೂ ಸಭೆಯ ಎದುರಿ ನಿಂದ ಸಭೆಯ ಗುಡಾರದ ಬಾಗಲಿನೊಳಗೆ ಹೋಗಿ ಬೋರಲು ಬಿದ್ದರು; ಕರ್ತನ ಮಹಿಮೆಯು ಅವರಿಗೆ ಕಾಣಬಂತು.
ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ–
ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.
ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು.
10 ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ–ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.
11 ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
12 ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ–ನೀವು ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
13 ಇಸ್ರಾಯೇಲ್‌ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.

ಅಮಾಲೇಕ್ಯರು ಸೋಲಿಸಲ್ಪಟ್ಟರು

ವಿಮೋಚನಕಾಂಡ 17
ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು.
ಆಗ ಮೋಶೆಯು ಯೆಹೋಶುವನಿಗೆ–ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.
10 ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.
11 ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.
12 ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.
13 ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು.
14 ಆಗ ಕರ್ತನು ಮೋಶೆಗೆ–ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
15 ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.
16 ಆತನು–ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
 

ಗಾಳಿ ಅಥವಾ ಮಳೆ ಇಲ್ಲ, ಆದರೆ ತಗ್ಗು ನೀರಿನಿಂದ ತುಂಬಲ್ಪಡುವದು:

2 ಅರಸುಗಳು 3
1 ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರುಷದಲ್ಲಿ ಅಹಾಬನ ಮಗನಾದ ಯೋರಾಮನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹನ್ನೆರಡು ವರುಷ ಆಳಿದನು.
ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆ ತಾಯಿಯ ಹಾಗೂ ಅಲ್ಲ; ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು.
ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು.
ಮೋವಾಬಿನ ಅರಸನಾದ ಮೇಷನು ಕುರಿಮಂದೆ ಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ ಉಣ್ಣೆ ಸಹಿತವಾಗಿ ಒಂದು ಲಕ್ಷ ಟಗರುಗಳನ್ನೂ ಕಪ್ಪವಾಗಿ ಕೊಡುತ್ತಿದ್ದನು.
ಅಹಾ ಬನು ಸತ್ತ ತರುವಾಯ ಏನಾಯಿತಂದರೆ, ಮೋವಾ ಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧ ವಾಗಿ ತಿರುಗಿಬಿದ್ದನು.
ಆ ದಿನದಲ್ಲಿ ಯೋರಾಮನು ಸಮಾರ್ಯದಿಂದ ಹೊರಟು ಹೋಗಿ ಇಸ್ರಾಯೇಲ್ಯರನ್ನು ಲೆಕ್ಕಿಸಿದನು.
ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು–ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.
ಅದಕ್ಕೆ ಯಾವ ಮಾರ್ಗವಾಗಿ ಹೋಗೋಣ ಎಂದು ಇವನು ಕೇಳಿದಾಗ ಅವನು–ಎದೋಮಿನ ಅರಣ್ಯ ಮಾರ್ಗವಾಗಿ ಅಂದನು.
ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು.
10 ಆಗ ಇಸ್ರಾಯೇಲಿನ ಅರಸನು — ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು.
11 ಆದರೆ ಯೆಹೋಷಾಫಾಟನು — ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ–ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು–ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು.
12 ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.
13 ಎಲೀ ಷನು ಇಸ್ರಾಯೇಲಿನ ಅರಸನಿಗೆ — ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ–ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.
14 ಆಗ ಎಲೀಷನು–ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ.
15 ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.
16 ಅವನು ಹೇಳಿದ್ದೇನಂದರೆ — ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ.
17 ಕರ್ತನು ಹೀಗೆ ಹೇಳುತ್ತಾನೆ–ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು.
18 ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು.
19 ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು.
20 ಉದಯದಲ್ಲಿ ಕಾಣಿಕೆಯನ್ನು ಅರ್ಪಿಸುತ್ತಿರುವಾಗ ಏನಾಯಿತಂದರೆ, ಇಗೋ, ನೀರು ಎದೋಮಿನ ಮಾರ್ಗವಾಗಿ ಬಂದದರಿಂದ ದೇಶವು ನೀರಿನಿಂದ ತುಂಬಲ್ಪಟ್ಟಿತು.
21 ಅರಸುಗಳು ತಮ್ಮ ಸಂಗಡ ಯುದ್ಧಮಾಡುವದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ ಅವರು ಆಯುಧ ಧರಿಸತಕ್ಕ ಯೌವನಸ್ಥರು ಮೊದಲುಗೊಂಡು ಎಲ್ಲರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು.
22 ಮೋವಾಬ್ಯರು ಉದಯಕಾಲದಲ್ಲಿ ಎದ್ದು ಆ ನೀರಿನ ಮೇಲೆ ಸೂರ್ಯನ ಪ್ರಕಾಶ ಬಿದ್ದದ್ದರಿಂದ ಆ ನೀರು ರಕ್ತದ ಹಾಗೆ ಕೆಂಪಾಗಿರುವದನ್ನು ಕಂಡರು.
23 ಆಗ ಅವರು–ಇದು ರಕ್ತವೇ; ಆ ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು.
24 ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು.
25 ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು.
26 ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಮೋವಾಬಿನ ಅರಸನು ಕಂಡಾಗ ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ ಕತ್ತಿ ಹಿಡಿಯುವ ಏಳುನೂರು ಮಂದಿ ಯನ್ನು ತನ್ನ ಸಂಗಡ ತೆಗೆದುಕೊಂಡನು; ಆದರೆ ಅದು ಅವರಿಂದ ಆಗದೆ ಹೋಯಿತು.
27 ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.

ವಿಧವೆಯ ಒಂದು ಮೊಗ್ಗೆ ಎಣ್ಣೆ

2 ಅರಸುಗಳು 4
1 ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ–ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.
ಎಲೀ ಷನು ಅವಳಿಗೆ–ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು–ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು.
ಆಗ ಅವನು–ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ.
ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು.
ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು.
ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ–ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ–ಇನ್ನು ಪಾತ್ರೆ ಇಲ್ಲ ಅಂದನು.
ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು–ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.

ಕೊಡಲಿಯು ತೇಲಾಡಿತು

2 ಅರಸುಗಳು 6
1 ಪ್ರವಾದಿಗಳ ಮಕ್ಕಳು ಎಲೀಷನಿಗೆ– ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ.
ಅಪ್ಪಣೆ ಕೊಡು; ನಾವು ಯೊರ್ದನಿನ ವರೆಗೂ ಹೋಗಿ ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತಕ್ಕೊಂಡು ಬಂದು ವಾಸವಾಗಿರುವದಕ್ಕೆ ನಮಗೋ ಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು ಅಂದರು. ಅವನು–ಹೋಗಿರಿ ಅಂದನು.
ಆಗ ಅವರಲ್ಲಿ ಒಬ್ಬನು–ನೀನು ದಯಮಾಡಿ ನಿನ್ನ ಸೇವಕರ ಸಂಗಡ ಬಾ ಅಂದನು. ಅದಕ್ಕವನು–ನಾನು ಬರುತ್ತೇನೆ ಅಂದನು.
ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನಿಗೆ ಬಂದು ಅಲ್ಲಿ ಮರಗಳನ್ನು ಕಡಿಯುತ್ತಿದ್ದರು.
ಒಬ್ಬನು ತೊಲೆಯನ್ನು ಬೀಳಿಸುವಾಗ ಕೊಡಲಿಯು ನೀರಿನೊಳಗೆ ಬಿತ್ತು. ಆಗ ಅವನು–ಅಯ್ಯೋ! ಯಜಮಾನನೇ, ಅದು ಎರವಾಗಿ ತಕ್ಕೊಂಡದ್ದು ಎಂದು ಕೂಗಿ ಹೇಳಿದನು.
ದೇವರ ಮನುಷ್ಯನು–ಅದು ಎಲ್ಲಿ ಬಿತ್ತು ಅಂದನು. ಇವನು ಅವನಿಗೆ ಆ ಸ್ಥಳವನ್ನು ತೋರಿಸಿದ ತರುವಾಯ ಅವನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕೊಡಲಿಯು ತೇಲಾಡಿತು.
ಪ್ರವಾದಿಯು ಅವ ನಿಗೆ–ಅದನ್ನು ತೆಗೆದುಕೋ ಅಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.

ಕುಷ್ಠರೋಗದಿಂದ ನಾಮನನು ವಾಸಿಯಾದನು

2 ಅರಸುಗಳು 5
ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್‌ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.
ಅವಳು ತನ್ನ ಯಜಮಾನಿಗೆ–ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು.
ಆಗ ಒಬ್ಬನು ಹೋಗಿ ಇಸ್ರಾಯೇಲ್‌ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.
ಆದದರಿಂದ ಅರಾಮ್ಯರ ಅರಸನು–ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು.
ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ–ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು.
ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು–ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ–ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು.
ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು.
10 ಆಗ ಎಲೀಷನು ನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.
11 ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ–ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.
12 ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್‌ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.
13 ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ–ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
14 ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
15 ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು–ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.
16 ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
17 ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು.
18 ಈ ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ ಅಂದನು.
19 ಎಲೀಷನು ಅವನಿಗೆ–ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು.

ಸೌಲನು ಯಾಬೇಷ ನಗರವನ್ನು ರಕ್ಷಿಸಿದನು

1 ಸಮುವೇಲನು 11
1 ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ–ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
ಅಮ್ಮೋನ್ಯನಾದ ನಾಹಾಷನು ಅವರಿಗೆ–ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು.
ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ–ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು.
ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು–ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ
ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್‌ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.
ಆಗ ಅವರು ಬಂದ ದೂತರಿಗೆ–ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ–ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು.

ಸೌಲನು ರಾಜನೆಂದು ದೃಢಪಡಿಸಲ್ಪಟ್ಟನು

10 ತರುವಾಯ ಯಾಬೇಷಿನ ಜನರು ನಾಹಾಷನಿಗೆ–ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು.
11 ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ.
12 ಆಗ ಜನರು ಸಮುವೇಲನಿಗೆ–ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ; ಅವರನ್ನು ಕೊಂದು ಹಾಕುತ್ತೇವೆ ಅಂದರು.
13 ಆಗ ಸೌಲನು–ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು.
14 ಆಗ ಸಮುವೇಲನು ಜನರಿಗೆ–ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು.
15 ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.

ದಾವೀದನು ಅಮಾಲೇಕ್ಯರನ್ನು ನಾಶಪಡಿಸುತ್ತಾನೆ

1 ಸಮುವೇಲನು 30
ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು
ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರ ನ್ನಾದರೂ ಕಿರಿಯರನ್ನಾದರೂ ಕೊಂದುಹಾಕದೆ ಅವ ರನ್ನು ಸೆರೆಯಾಗಿ ತೆಗೆದುಕೊಂಡು ತಮ್ಮ ಮಾರ್ಗ ವಾಗಿ ಹೊರಟುಹೋದರು.
ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು.
ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು.
ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು.
ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ–ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.
ದಾವೀದನು ಕರ್ತನಿಗೆ–ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು–ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್‌ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು.
10 ದಾವೀದನು, ತಾನೂ ನಾನೂರು ಜನರೂ ಹಿಂದಟ್ಟಿಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದದರಿಂದ ಇನ್ನೂರು ಜನರು ಅಲ್ಲಿ ನಿಂತರು.
11 ಅವರು ಒಬ್ಬ ಐಗುಪ್ತ್ಯನನ್ನು ಅಡವಿಯಲ್ಲಿ ಕಂಡುಕೊಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿಕೊಟ್ಟರು; ಅವನು ತಿಂದನು.
12 ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
13 ದಾವೀದನು ಅವನನ್ನು–ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು–ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಈ ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
14 ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.
15 ದಾವೀದನು ಅವನಿಗೆ–ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು–ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
16 ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
17 ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.
18 ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು.
19 ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು.
20 ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು.
21 ದಾವೀದನ ಹಿಂದೆ ಬರಲಾರದೆ ದಣಿದಿದ್ದರಿಂದ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ ಅವರು ದಾವೀದನನ್ನೂ ಅವನ ಸಂಗಡ ಇದ್ದ ಜನ ರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ ಅವರ ಕ್ಷೇಮಸಮಾಚಾರವನ್ನು ಕೇಳಿದನು.
22 ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು–ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು.
23 ಅದಕ್ಕೆ ದಾವೀದನು–ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿ ಕೊಟ್ಟ ಕರ್ತನು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?
24 ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು.
25 ಹಾಗೆಯೇ ಅವನು ಆ ದಿವಸ ಮೊದಲ್ಗೊಂಡು ಇಂದಿನ ವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ ಕಟ್ಟಳೆಯಾಗಿಯೂ ಮಾಡಿದನು.
26 ಆದರೆ ದಾವೀದನು ಚಿಕ್ಲಗಿಗೆ ಬಂದಾಗ ಅವನು ಕೊಳ್ಳೆಮಾಡಿದವುಗಳಲ್ಲಿ ತನ್ನ ಸ್ನೇಹಿತರಾದ ಯೆಹೂ ದದ ಹಿರಿಯರಿಗೆ ಕೆಲವನ್ನು ಕಳುಹಿಸಿ–ಇಗೋ, ಕರ್ತನ ಶತ್ರುಗಳ ಕೊಳ್ಳೆಯಲ್ಲಿ ಇವು ನಿಮಗೆ ಬಹು ಮಾನವೆಂದು ಹೇಳಿದನು.

ಅಪೊಸ್ತಲರ ನೆರಳುಗಳಿಂದ ಗುಣವಾದರು

ಅಪೊಸ್ತಲರ ಕೃತ್ಯಗಳು 5
12 ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
13 ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
14 ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
15 ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
16 ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.

 
 

Related Quiz Articles