ನಿಮ್ಮ ಕರೆಯ ಮೇಲೆ ಗಮನ

ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ. 2 ಪೇತ್ರನು 1:10

2 ಪೇತ್ರನು 1
3 ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ
ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ
ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
10 ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
11 ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.

ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವುಗಳಾಗಿವೆ
ರೋಮಾಪುರದವರಿಗೆ 11

25 ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
26 ಹೀಗೆ ಇಸ್ರಾಯೇಲ್‌ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ–ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
27 ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.
28 ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.
29 ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
30 ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ
31 ಹಾಗೆಯೇ ನೀವು ಹೊಂದಿದ ಕರುಣೆಯ ಮೂಲಕ ಇವರೂ (ಮುಂದೆ) ಕರುಣೆಯನ್ನು ಹೊಂದುವಂತೆ ಈಗ ನಂಬದವ ರಾಗಿದ್ದಾರೆ.
32 ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.

ಹೊಸ ಸ್ವಯಂ ಧರಿಸಿಮೇಲಿರುವವುಗಳನ್ನೇ ಹುಡುಕಿರಿ

ಕೊಲೊಸ್ಸೆಯವರಿಗೆ 3
1 ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ.
ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ.
ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ.
ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
10 ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
11 ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
12 ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
13 ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
14 ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.
15 ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
16 ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
17 ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.

ಙ್ಞಾನೋಕ್ತಿಗಳು 4
20 ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು.
21 ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ.
22 ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
23 ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
24 ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು.
25 ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ.
26 ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.
27 ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.

ಮತ್ತಾಯನು 6
25 ಆದಕಾರಣ ನಾನು ನಿಮಗೆ ಹೇಳುವದೇ ನಂದರೆ–ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
26 ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
27 ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?
28 ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.
29 ಆದರೂ ನಾನು ನಿಮಗೆ ಹೇಳುವದೇನಂದರೆ– ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.
30 ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
31 ಆದಕಾರಣ–ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
32 (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
33 ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.
34 ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

ರೋಮಾಪುರದವರಿಗೆ 8
ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.
ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
10 ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ.
11 ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.

ಫಿಲಿಪ್ಪಿಯವರಿಗೆ 4
ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.

2 ತಿಮೊಥೆಯನಿಗೆ 2
14 ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
15 ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
16 ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.
17 ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
18 ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
19 ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ–ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
20 ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.
21 ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.

ಮತ್ತಾಯನು 6
19 ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
20 ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
21 ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
22 ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
24 ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.

ಙ್ಞಾನೋಕ್ತಿಗಳು 16
1 ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು.
ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು.

ಇಬ್ರಿಯರಿಗೆ 12
1 ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ

ಪ್ರಸಂಗಿ 9
ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.
10 ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.

1 ಪೇತ್ರನು 2
1 ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.

ಮತ್ತಾಯನು 24
13 ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.

1 ಪೇತ್ರನು 1
ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.
ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.

ಕೊಲೊಸ್ಸೆಯವರಿಗೆ 2
ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
10 ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ.

ಯಾಕೋಬನು 1
ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ.
ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.

ಗುರಿಯತ್ತ ಓಡುತ್ತಾ ಇರು
ಫಿಲಿಪ್ಪಿಯವರಿಗೆ 3

12 ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ.
13 ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
14 ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
15 ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
16 ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.
17 ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
18 (ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
19 ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
20 ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.
21 ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.

1 ಯೋಹಾನನು 2
15 ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.
16 ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
17 ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.

ಹತ್ತು ಕನ್ಯೆಯರ ದೃಷ್ಟಾಂತ
ಮತ್ತಾಯನು 25

1 ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.
ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ,
ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು.
ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
ಮಧ್ಯರಾತ್ರಿಯಲ್ಲಿ–ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;
ಬುದ್ಧಿಹೀನರು ಬುದ್ಧಿವಂತೆಯರಿಗೆ– ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ–ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
10 ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
11 ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು–ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.
12 ಆದರೆ ಅವನು ಪ್ರತ್ಯುತ್ತರವಾಗಿ–ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
13 ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.

ತಲಾಂತುಗಳ ದೃಷ್ಟಾಂತ
14 ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
15 ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
16 ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
17 ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು.
18 ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
19 ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.
20 ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು–ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.
21 ಆಗ ಅವನ ಯಜಮಾನನು ಅವನಿಗೆ–ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
22 ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು–ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.
23 ಆಗ ಅವನ ಯಜಮಾನನು ಅವನಿಗೆ–ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
24 ಆಗ ಒಂದು ತಲಾಂತು ಹೊಂದಿದ್ದ ವನು ಬಂದು–ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
25 ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.
26 ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ–ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.
27 ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.
28 ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ.
29 ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.
30 ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.

ಲೂಕನು 9
62 ಆಗ ಯೇಸು ಅವನಿಗೆ–ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು

ಅಪೊಸ್ತಲರ ಕೃತ್ಯಗಳು 20
22 ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.
23 ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
24 ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
25 ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.

1 ಥೆಸಲೊನೀಕದವರಿಗೆ 5
1 ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ.
ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
ಆದರೆ–ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
10 ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
11 ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.

ಲೂಕನು 10
38 ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.
39 ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
40 ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು–ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
41 ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ–ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;
42 ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.

ನೆಹೆಮಿಯ 6
1 ನಾನು ಕದಗಳನ್ನು ಬಾಗಲುದ್ವಾರಗಳಲ್ಲಿ ನಿಲ್ಲಿಸುವದಕ್ಕಿಂತ ಮುಂಚೆ ಗೋಡೆಯನ್ನು ಕಟ್ಟಿಸಿದೆನೆಂದೂ ಅದರಲ್ಲಿ ಒಂದು ಸಂದೂ ಬಿಡಲ್ಪಡ ಲಿಲ್ಲವೆಂದೂ ಸನ್ಬಲ್ಲಟನೂ ಟೋಬೀಯನೂ ಅರಬ್ಯ ನಾದ ಗೆಷೆಮನೂ ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ
ಸನ್ಬಲ್ಲಟನೂ ಗೆಷೆಮನೂ ನನಗೆ–ಓನೋನು ಎಂಬ ಬೈಲಿನಲ್ಲಿರುವ ಗ್ರಾಮಗಳಲ್ಲಿ ಸಂಧಿಸಿಕೊಳ್ಳೋಣ ಬಾ ಅಂದರು. ಆದರೆ ಅವರು ನನಗೆ ಕೇಡುಮಾಡಲು ನೆನಸಿಕೊಂಡಿದ್ದರು.
ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ–ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.
ಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಅವರಿಗೆ ಪ್ರತ್ಯುತ್ತರ ಕಳುಹಿಸಿದೆನು.
ಐದನೇ ಸಾರಿ ಸನ್ಬಲ್ಲಟನು ತನ್ನ ಸೇವಕನ ಕೈ ಯಲ್ಲಿ ತೆರೆದಿರುವ ಪತ್ರವನ್ನು ಕಳುಹಿಸಿದನು.
ಅದ ರಲ್ಲಿ–ನೀನೂ ಯೆಹೂದ್ಯರೂ ತಿರಿಗಿ ಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಕಟ್ಟಿಸುತ್ತಿದ್ದೀ.
ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದು ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದಿ ಎಂಬದಾಗಿ ಜನಾಂಗಗಳಲ್ಲಿ ಸುದ್ದಿ ಉಂಟು; ಗೆಷೆಮನು ಹಾಗೆಯೇ ಹೇಳುತ್ತಾನೆ. ಈಗ ಈ ವರ್ತಮಾನ ಅರಸನಿಗೆ ತಿಳಿಸಲ್ಪಡುವದು. ಆದಕಾರಣ ನಾವು ಕೂಡಿ ಕೊಂಡು ಯೋಚನೆ ಮಾಡಿಕೊಳ್ಳುವ ಹಾಗೆ ಬಾ ಎಂದು ಬರೆದಿತ್ತು.
ಆಗ ನಾನು–ನೀನು ಹೇಳಿದ ಕಾರ್ಯಗಳಲ್ಲಿ ಯಾವದೂ ಮಾಡಿದ್ದಿಲ್ಲ. ನೀನು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸುತ್ತಾ ಇದ್ದೀ ಎಂದು ಹೇಳಿಕಳುಹಿಸಿದೆನು.
ಯಾಕಂದರೆ–ಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು.

ಲೂಕನು 21
34 ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
35 ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು.
36 ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.

ಯೆಹೂ ಅವರ ಕರೆಯ ಮೇಲೆ ಕೇಂದ್ರೀಕರಿಸಿದರು

2 ಅರಸುಗಳು 9
1 ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ–ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು
ಅವನಿಗೆ–ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.
ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು.
ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು — ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ–ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.
ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು–ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು.
ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು.
ಅಹಾಬನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು.
10 ಇದಲ್ಲದೆ ಇಜ್ರೇಲಿನ ಪಾಲಿನಲ್ಲಿ ನಾಯಿಗಳು ಈಜೆಬೆಲಳನ್ನು ತಿನ್ನುವವು; ಅವಳನ್ನು ಹೂಣಿಡಲು ಯಾವನೂ ಇರುವದಿಲ್ಲ ಎಂದು ಹೇಳಿ ಬಾಗಲನ್ನು ತೆರೆದು ಓಡಿಹೋದನು.
11 ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ–ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
12 ಅದಕ್ಕವರು–ಅದು ಸುಳ್ಳು, ದಯಮಾಡಿ ನಮಗೆ ತಿಳಿಸು ಅಂದರು. ಆದದರಿಂದ ಅವನು–ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿ ಸಿದ್ದೇನೆಂಬದಾಗಿ ಕರ್ತನು ಹೇಳುತ್ತಾನೆಂದು ಹೀಗೆ ನನಗೆ ಹೇಳಿದನು ಅಂದನು.
13 ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ — ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.

ಯೇಹುವು ಯೋರಾಮ ಮತ್ತು ಅಹಜ್ಯನನ್ನು ಕೊಲ್ಲುತ್ತಾನೆ
14 ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.
15 ಆದರೆ ಅರಸನಾದ ಯೋರಾಮನು ಅರಾಮ್ಯರ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ ಅರಾ ಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಸ್ವಸ್ಥಮಾಡಿ ಕೊಳ್ಳುವ ನಿಮಿತ್ತ ಇಜ್ರೇಲಿಗೆ ಹೋಗಿದ್ದನು.
16 ಆಗ ಯೇಹುವು — ನಿಮಗೆ ಮನಸ್ಸಾದರೆ ಹೋಗಿ ಇದನ್ನು ಇಜ್ರೇಲಿನಲ್ಲಿ ತಿಳಿಸಲು ಪಟ್ಟಣ ದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ ಅಂದನು. ಯೇಹುವು ರಥದ ಮೇಲೆ ಏರಿ ಇಜ್ರೇಲಿಗೆ ಹೋದನು. ಯಾಕಂದರೆ ಯೋರಾಮನು ಅಲ್ಲಿ ಬಿದ್ದಿದ್ದನು. ಇದಲ್ಲದೆ ಯೋರಾಮನನ್ನು ನೋಡು ವದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.
17 ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು–ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ–ಸಮಾಧಾ ನವೋ ಎಂದು ಕೇಳಲಿ ಅಂದನು.
18 ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ–ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು–ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು — ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು.
19 ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ–ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು–ಸಮಾಧಾನ ನಿನಗೆ ಏನು–ನನ್ನ ಹಿಂದಕ್ಕೆ ಹೋಗು ಅಂದನು.
20 ಆಗ ಕಾವಲುಗಾರನು–ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು.
21 ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
22 ಯೋರಾಮನು ಯೇಹು ವನ್ನು ನೋಡಿದಾಗ–ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು–ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
23 ಆಗ ಯೋರಾ ಮನು ಅಹಜ್ಯನಿಗೆ–ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.
24 ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
25 ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ–ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
26 ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ–ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ–ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
27 ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ–ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್‌ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
28 ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು.
29 ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೇ ವರುಷದಲ್ಲಿ ಅಹಜ್ಯನು ಯೆಹೂದದ ಮೇಲೆ ಆಳಲು ಪ್ರಾರಂಭಿಸಿದನು.

ಈಜೆಬೆಲಳು ಸತ್ತಳು
30 ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
31 ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.
32 ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ–ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.
33 ಅವನು– ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.
34 ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ — ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು.
35 ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು.
36 ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ–ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.
37 ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.

ಅಹಾಬನ ಕುಟುಂಬ ಸತ್ತರು
2 ಅರಸುಗಳು 10

1 ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದದರಿಂದ ಯೇಹುವು ಸಮಾರ್ಯದಲ್ಲಿರುವ ಇಜ್ರೇಲಿನ ಪ್ರಧಾನರಿಗೂ ಹಿರಿ ಯರಿಗೂ ಅಹಾಬನ ಮಕ್ಕಳನ್ನು ಪಾಲಿಸುವವರಿಗೂ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿ–
ನಿಮ್ಮ ಯಜಮಾನನ ಕುಮಾರರು ನಿಮ್ಮ ಬಳಿಯಲ್ಲಿ ಇದ್ದಾರೆ; ಇದಲ್ಲದೆ ರಥಗಳೂ ಕುದುರೆಗಳೂ ಕೋಟೆಯೂ ಆಯುಧಗಳೂ ನಿಮಗೆ ಉಂಟು. ಆದದರಿಂದ ಈ ಪತ್ರವು ನಿಮ್ಮ ಬಳಿಗೆ ಬಂದಾಗ
ನೀವು ನಿಮ್ಮ ಯಜ ಮಾನನ ಕುಮಾರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ನೋಡಿಕೊಂಡು ಅವ ನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂಡ್ರಿಸಿ ನಿಮ್ಮ ಯಜಮಾನನ ಮನೆಯವರಿಗೋಸ್ಕರ ಯುದ್ಧ ಮಾಡಿರಿ ಎಂದು ತಿಳಿಸಿದನು.
ಆದರೆ ಅವರು ಬಹಳವಾಗಿ ಭಯಪಟ್ಟು–ಇಗೋ, ಇಬ್ಬರು ಅರಸು ಗಳು ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದರು.
ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ–ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು.
ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು–ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು.
ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
ಆಗ ಆ ಸೇವಕರು ಬಂದು ಅವನಿಗೆಅರಸನ ಮಕ್ಕಳ ತಲೆಗಳನ್ನು ತೆಗೆದುಕೊಂಡು ಬಂದಿ ದ್ದಾರೆಂದು ತಿಳಿಸಿದರು. ಅದಕ್ಕವನು–ಉದಯ ಕಾಲದ ವರೆಗೂ ಅವುಗಳನ್ನು ಹೆಬ್ಬಾಗಿಲಿನ ದ್ವಾರದಲ್ಲಿ ಎರಡು ಕುಪ್ಪೆಗಳಾಗಿ ಹಾಕಿರಿ ಅಂದನು.
ಉದಯ ಕಾಲದಲ್ಲಿ ಏನಾಯಿತೆಂದರೆ, ಅವನು ಹೊರಟು ನಿಂತು ಎಲ್ಲಾ ಜನರಿಗೆ ಹೇಳಿದ್ದೇನಂದರೆ — ನೀವು ನೀತಿವಂತರು; ಇಗೋ, ನಾನು ನನ್ನ ಯಜಮಾನನ ಮೇಲೆ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದೆನು.
10 ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.
11 ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
12 ಅವನು ಎದ್ದು ಹೊರಟು ಸಮಾರ್ಯಕ್ಕೆ ಬಂದನು. ಯೇಹುವು ದಾರಿಯಲ್ಲಿರುವ ಕುರುಬರು ಉಣ್ಣೆ ಕತ್ತರಿಸುವ ಮನೆಯ ಬಳಿಗೆ ಬಂದಾಗ
13 ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ–ನೀವು ಯಾರು ಅಂದನು. ಅದಕ್ಕವರು–ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು.
14 ಆಗ ಅವನು ಅವರನ್ನು ಜೀವದಿಂದ ಹಿಡಿಯಿರಿ ಎಂದು ಅವನು ಹೇಳಿದ್ದರಿಂದ ಅವರು ಇವರನ್ನು ಜೀವದಿಂದ ಹಿಡಿದು ಉಣ್ಣೆ ಕತ್ತರಿಸುವ ಮನೆಯ ಕುಣಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ಉಳಿಸಲಿಲ್ಲ.
15 ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ–ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು–ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ–
16 ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
17 ಅವನು ಸಮಾರ್ಯಕ್ಕೆ ಬಂದ ತರುವಾಯ ಸಮಾ ರ್ಯದಲ್ಲಿ ಕರ್ತನು ಎಲೀಯನಿಗೆ ಹೇಳಿದ ವಾಕ್ಯದ ಪ್ರಕಾರ ಅವನನ್ನು ನಾಶಮಾಡುವ ಪರ್ಯಂತರ ಅಹಾಬನಿಗೆ ಉಳಿದವರೆಲ್ಲರನ್ನು ಸಂಹರಿಸಿದನು.

ಬಾಳನ ಸೇವಕರು ಸತ್ತರು
18 ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ– ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು; ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.
19 ಆದದರಿಂದ ಬಾಳನ ಎಲ್ಲಾ ಪ್ರವಾದಿಗಳನ್ನೂ ಸೇವಕರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ; ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು ಅಂದನು. ಯಾಕಂದರೆ ಯೇಹುವು ಬಾಳನನ್ನು ಆರಾಧಿಸುವ ವರನ್ನು ನಾಶಮಾಡುವ ಹಾಗೆ ಇದನ್ನು ತಂತ್ರದಿಂದ ಮಾಡಿದನು.
20 ಆಗ ಯೇಹುವು ಬಾಳನಿಗೋಸ್ಕರ ದೊಡ್ಡಸಂಘವನ್ನು ಪರಿಶುದ್ಧ ಮಾಡಿರಿ ಅಂದನು.
21 ಹಾಗೆಯೇ ಅವರು ಅದನ್ನು ಸಾರಿದರು. ಯೇಹುವು ಇಸ್ರಾಯೇಲಿನಲ್ಲೆಲ್ಲಾ ಕಳುಹಿಸಿದ್ದರಿಂದ ಬಾಳನನ್ನು ಸೇವಿಸುವವರೆಲ್ಲರೂ ಬಂದರು. ಬಾರದೆ ಇದ್ದವನು ಒಬ್ಬನೂ ಇರಲಿಲ್ಲ. ಅವರು ಬಾಳನ ಮನೆಯಲ್ಲಿ ಪ್ರವೇಶಿಸಿದಾಗ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೆ ಬಾಳನ ಮನೆಯು ಪೂರ್ಣವಾಗಿ ತುಂಬಿತ್ತು.
22 ಆಗ ಅವನು ವಸ್ತ್ರಗಳ ಮನೆಯ ಮೇಲೆ ಇರುವವನಿಗೆ ಬಾಳನನ್ನು ಸೇವಿಸುವ ಎಲ್ಲರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಾ ಎಂದು ಹೇಳಿದ್ದರಿಂದ ಅವನು ಅವರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಂದನು.
23 ಆಗ ಯೇಹುವೂ ರೆಕಾಬನ ಮಗನಾದ ಯೆಹೋನಾದಾಬನೂ ಬಾಳನ ಮನೆಯಲ್ಲಿ ಪ್ರವೇಶಿಸಿ ದರು. ಅವರು ಬಾಳನನ್ನು ಆರಾಧಿಸುವವರ ಹೊರತು ಅವರ ಸಂಗಡ ಕರ್ತನ ಸೇವಕರಲ್ಲಿ ಒಬ್ಬನಾದರೂ ಇರದ ಹಾಗೆ ಶೋಧಿಸಿ ನೋಡಿರಿ ಎಂದು ಬಾಳನನ್ನು ಆರಾಧಿಸುವವರಿಗೆ ಹೇಳಿದರು.
24 ಅವರು ಬಲಿಗ ಳನ್ನೂ ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇ ಶಿಸಿದ ತರುವಾಯ ಯೇಹುವು ಹೊರಗೆ ಎಂಭತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ–ನಾನು ನಿಮ್ಮ ಕೈಗೆ ಒಪ್ಪಿಸಿದ ಜನರಲ್ಲಿ ಯಾವನಾದರೂ ತಪ್ಪಿಸಿಕೊಂಡು ಹೋದರೆ ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿ ರುವದು ಅಂದನು.
25 ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ ಏನಾಯಿತಂದರೆ, ಯೇಹುವು ಕಾವಲುಗಾರನಿಗೂ ಅಧಿಪತಿಗಳಿಗೂನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ ಅಂದನು.
26 ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.
27 ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.
28 ಹೀಗೆಯೇ ಯೇಹುವು ಬಾಳನನ್ನು ಇಸ್ರಾಯೇಲಿ ನಲ್ಲಿಂದ ನಾಶಮಾಡಿಬಿಟ್ಟನು.
29 ಆದರೆ ಬೇತೇಲ್‌, ದಾನ್‌ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.
30 ಕರ್ತನು ಯೇಹು ವಿಗೆ–ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು.

ದಾವೀದನು ಗೋಲಿಯಾತನನ್ನು ಕೊಲ್ಲುವತ್ತ ಗಮನಹರಿಸಿದ

1 ಸಮುವೇಲನು 17
16 ಫಿಲಿಷ್ಟಿಯನು ಉದ ಯದಲ್ಲಿಯೂ ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು.
17 ಇಷಯನು ತನ್ನ ಮಗನಾದ ದಾವೀದನಿಗೆನಿನ್ನ ಸಹೋದರರಿಗೋಸ್ಕರ ಒಂದು ಏಫದ ಹುರಿದ ಧಾನ್ಯವನ್ನೂ ಈ ಹತ್ತು ರೊಟ್ಟಿಗಳನ್ನೂ ತಕ್ಕೊಂಡು ದಂಡಿನಲ್ಲಿರುವ ನಿನ್ನ ಸಹೋದರರ ಬಳಿಗೆ ಓಡಿ ಹೋಗು.
18 ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಸಾವಿರಕ್ಕೆ ಪ್ರಧಾನನಾದವನಿಗೆ ಕೊಟ್ಟು ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ ಅವರ ಗುರುತನ್ನು ತಕ್ಕೊಂಡು ಬಾ ಅಂದನು.
19 ಆಗ ಸೌಲನೂ ಇವರೂ ಇಸ್ರಾಯೇಲ್ಯರೆಲ್ಲರೂ ಫಿಲಿಷ್ಟಿ ಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧಮಾಡುತ್ತಿದ್ದರು.
20 ದಾವೀದನು ಉದಯದಲ್ಲಿ ಎದ್ದು ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು ತನ್ನ ತಂದೆಯಾದ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತಕ್ಕೊಂಡು ಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ ಸಾಮಗ್ರಿ ಇರುವ ಸ್ಥಳಕ್ಕೆ ಬಂದನು.
21 ಇಸ್ರಾಯೇಲ್ಯರೂ ಫಿಲಿಷ್ಟಿ ಯರೂ ಸೈನ್ಯಕ್ಕೆದುರಾಗಿ ಸೈನ್ಯ ವ್ಯೂಹ ಕಟ್ಟಿಕೊಂಡಿದ್ದರು.
22 ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು.
23 ಅವನು ಇವರ ಸಂಗಡ ಮಾತನಾಡುತ್ತಾ ಇರುವಾಗ ಇಗೋ, ಗತ್‌ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು ಮೊದಲಿನ ಹಾಗೆಯೇ ಮಾತನಾಡಿದನು; ಆ ಮಾತುಗಳನ್ನು ದಾವೀದನು ಕೇಳಿದನು.
24 ಇಸ್ರಾಯೇಲ್‌ ಮನುಷ್ಯ ರೆಲ್ಲರೂ ಅವನನ್ನು ನೋಡಿ ಬಹು ಭಯಪಟ್ಟು ಅವನ ಬಳಿಯಿಂದ ಓಡಿಹೋದರು.
25 ಇಸ್ರಾಯೇಲ್‌ ಮನು ಷ್ಯರು–ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.
26 ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ–ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
27 ಜನರು ಆ ಮಾತಿಗೆ ಸರಿಯಾಗಿ–ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಹೇಳಿದರು;
28 ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು–ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
29 ಅದಕ್ಕೆ ದಾವೀದನು–ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೆ ಅಂದನು.
30 ಅವನನ್ನು ಬಿಟ್ಟು ಬೇರೊಬ್ಬನ ಕಡೆಗೆ ತಿರಿಗಿಕೊಂಡು ಹಾಗೆಯೇ ಕೇಳಿದನು. ಆಗ ಜನರು ಮೊದಲು ಹೇಳಿದ ಹಾಗೆಯೇ ಅವನಿಗೆ ಪ್ರತ್ಯುತ್ತರಕೊಟ್ಟರು.
31 ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ಅವನನ್ನು ಕರೇ ಕಳುಹಿಸಿದನು.
32 ಆಗ ದಾವೀದನು ಸೌಲನಿಗೆ–ಅವನ ನಿಮಿತ್ತ ವಾಗಿ ಯಾವನ ಹೃದಯವು ಕುಗ್ಗಬಾರದು; ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧ ಮಾಡುವನು ಅಂದನು.
33 ಆಗ ಸೌಲನು ದಾವೀದ ನಿಗೆ–ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು; ಯಾಕಂದರೆ ನೀನು ಹುಡುಗನಾಗಿದ್ದೀ; ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ ಅಂದನು.
34 ದಾವೀದನು ಸೌಲನಿಗೆ–ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು.
35 ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು.
36 ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
37 ಇದಲ್ಲದೆ ದಾವೀದನು–ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ–ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
38 ಆಗ ಸೌಲನು ದಾವೀದನಿಗೆ ತನ್ನ ಆಯುಧಗಳನ್ನು ತೊಡಿಸಿ ಅವನ ತಲೆಯ ಮೇಲೆ ಒಂದು ಹಿತ್ತಾಳೆಯ ಶಿರಸ್ತ್ರಾಣವನ್ನು ಇಟ್ಟು ಅವನಿಗೆ ಕವಚವನ್ನು ತೊಡಿಸಿದನು.
39 ದಾವೀದನು ಅವನ ಕತ್ತಿಯನ್ನು ತನ್ನ ಆಯುಧಗಳ ಮೇಲೆ ಕಟ್ಟಿಕೊಂಡು ಹೋಗಬೇಕೆಂದಿದ್ದನು. ಆದರೆ ಅದು ಅವನಿಗೆ ಅಭ್ಯಾಸ ವಿದ್ದಿಲ್ಲ, ಆಗ ದಾವೀದನು ಸೌಲನಿಗೆ–ನನಗೆ ಅವುಗಳ ಅಭ್ಯಾಸವಿಲ್ಲದ್ದರಿಂದ ಇವುಗಳ ಸಂಗಡ ಹೋಗ ಲಾರೆನು ಎಂದು ಹೇಳಿ ಅವುಗಳನ್ನು ಬಿಚ್ಚಿಹಾಕಿ
40 ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಆ ಫಿಲಿಷ್ಟಿಯನ ಬಳಿಗೆ ಹೋದನು.
41 ಆಗ ಫಿಲಿಷ್ಟಿಯನು ತ್ವರೆಯಾಗಿ ದಾವೀದನ ಸವಿಾಪಕ್ಕೆ ಬಂದನು.
42 ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ
43 ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.
44 ದಾವೀದನಿಗೆ–ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
45 ಆಗ ದಾವೀದನು ಫಿಲಿಷ್ಟಿಯನಿಗೆ–ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
46 ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
47 ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
48 ಆ ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಆ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ
49 ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು.
50 ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.
51 ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.
52 ಇಸ್ರಾಯೇಲ್‌ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್‌ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.
53 ಇಸ್ರಾಯೇಲ್‌ ಮಕ್ಕಳು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರಿಗಿ ಬಂದು ಅವರ ಡೇರೆಗಳನ್ನು ಸೂರೆಮಾಡಿದರು.
54 ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
55 ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ–ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು–ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.
56 ಅದಕ್ಕೆ ಅರಸನು ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು ಅಂದನು.
57 ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ತೆಗೆದುಕೊಂಡು ತಿರಿಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.
58 ಆಗ ಸೌಲನು–ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು–ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.

 
 

Related Quiz Articles