ಧ್ಯಾನ

ಆದಿಕಾಂಡ 24
34 ಅವನು–ನಾನು ಅಬ್ರಹಾಮನ ಸೇವಕನು.
35 ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
36 ಇದಲ್ಲದೆ ನನ್ನ ಯಜಮಾನನ ಹೆಂಡತಿಯಾದ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ. ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ.
37 ನನ್ನ ಯಜಮಾನನು–ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಆ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ;
38 ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.
39 ನಾನು ನನ್ನ ಯಜಮಾನನಿಗೆ–ಒಂದು ವೇಳೆ ಆ ಸ್ತ್ರೀ ನನ್ನ ಹಿಂದೆಬಾರದೆ ಹೋದಾಳು ಅಂದಾಗ
40 ಅವನು ನನಗೆ–ನಾನು ಯಾರ ಮುಂದೆ ನಡೆದುಕೊಳ್ಳುತ್ತೇನೋ ಆ ಕರ್ತನು ತನ್ನ ದೂತನನ್ನು ನಿನ್ನ ಸಂಗಡ ಕಳುಹಿಸಿ ನೀನು ನನ್ನ ಬಂಧುಗಳೊಳಗಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತಕ್ಕೊಳ್ಳುವ ಹಾಗೆ ನಿನ್ನ ಮಾರ್ಗವನ್ನು ಸಫಲಮಾಡುವನು;
41 ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.
42 ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ –ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ, ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ
43 ಇಗೋ, ನಾನು ಈಗ ನೀರಿನ ಬಾವಿಯ ಬಳಿಯಲ್ಲಿ ನಿಂತಿದ್ದೇನೆ; ಹೀಗಿರುವಲ್ಲಿ ಯಾವ ಕನ್ನಿಕೆಯು ನೀರು ತರಲು ಹೊರಗೆ ಬರುವಾಗ ನಾನು ಆಕೆಗೆ–ನಿನ್ನ ಕೊಡದಿಂದ ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು ಎಂದು ಹೇಳುವಾಗ
44 ಆಕೆಯು ನನಗೆ–ನೀನು ಕುಡಿ, ನಿನ್ನ ಒಂಟೆಗಳಿಗೂ ಕೊಡುವೆನು ಎಂದು ನನಗೆ ಹೇಳುವಳೋ ಆಕೆಯೇ ಕರ್ತನಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾ ಗಿರಲಿ ಎಂದು ಅಂದುಕೊಂಡೆನು.
45 ನಾನು ನನ್ನ ಹೃದಯದಲ್ಲಿ ಅಂದುಕೊಂಡು ಮುಗಿಸುವದರೊಳಗಾಗಿ ಇಗೋ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟು ಕೊಂಡು ಬಂದಳು. ಆಕೆಯು ಬಾವಿಯಲ್ಲಿ ಇಳಿದು ನೀರನ್ನು ತುಂಬಿಕೊಂಡು ತಂದಾಗ ನಾನು–ನನಗೆ ಕುಡಿಯುವದಕ್ಕೆ ನೀರು ಕೊಡು ಎಂದು ಆಕೆಯನ್ನು ಕೇಳಿದೆನು.
46 ಅದಕ್ಕೆ ಆಕೆಯು ತ್ವರೆಪಟ್ಟು ತನ್ನ ಕೊಡವನ್ನು ಹೆಗಲಿನಿಂದ ಇಳಿಸಿ–ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ಕುಡಿಸುವೆನು ಅಂದಳು. ಆಗ ನಾನು ಕುಡಿದೆನು; ಆಕೆಯು ಒಂಟೆಗ ಳಿಗೂ ಕುಡಿಸಿದಳು.
47 ನಾನು ಆಕೆಗೆ–ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು–ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು
48 ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.
49 ಆದ ದರಿಂದ ನೀವು ನನ್ನ ಯಜಮಾನನೊಂದಿಗೆ ದಯ ದಿಂದಲೂ ಸತ್ಯದಿಂದಲೂ ವರ್ತಿಸುವದಾದರೆ ನನಗೆ ತಿಳಿಸಿರಿ, ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ ಎಡಗಡೆಯಾದರೂ ತಿರುಗಿಕೊಳ್ಳುವೆನು ಅಂದನು.
50 ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ–ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
51 ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.
52 ಅಬ್ರಹಾಮನ ಸೇವಕನು ಅವರ ಮಾತುಗಳನ್ನು ಕೇಳಿದಾಗ ಕರ್ತನ ಮುಂದೆ ಅಡ್ಡಬಿದ್ದು ಆತನನ್ನು ಆರಾಧಿಸಿದನು.
53 ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
54 ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು–ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.
55 ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ–ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.
56 ಆಗ ಅವನು ಅವರಿಗೆ–ನನ್ನನ್ನು ತಡೆಯಬೇಡಿರಿ; ಕರ್ತನು ನನ್ನ ಮಾರ್ಗವನ್ನು ಸಫಲಮಾಡಿದ್ದಾನಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವ ಹಾಗೆ ನನ್ನನ್ನು ಕಳುಹಿಸಿರಿ ಅಂದನು.
57 ಆಗ ಅವರು–ನಾವು ಹುಡುಗಿಯನ್ನು ಕರೆದು ವಿಚಾರಿಸೋಣ ಅಂದರು.
58 ಅವರು ರೆಬೆಕ್ಕಳನ್ನು ಕರೆದು ಆಕೆಗೆ–ಈ ಮನುಷ್ಯನ ಸಂಗಡ ಹೋಗುವಿಯೋ ಎಂದು ಕೇಳಿದರು. ಅದಕ್ಕೆ ಆಕೆಯು–ನಾನು ಹೋಗುತ್ತೇನೆ ಅಂದಳು.
59 ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಕಳುಹಿಸಿದರು.
60 ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ–ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.
61 ಆಗ ರೆಬೆಕ್ಕಳು ಎದ್ದು ಆಕೆಯೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.
62 ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.
63 ಇಸಾಕನು ಸಾಯಂಕಾಲ ಹೊಲ ದಲ್ಲಿ ಧ್ಯಾನಮಾಡುವದಕ್ಕೆ ಹೋದಾಗ ತನ್ನ ಕಣ್ಣುಗಳ ನ್ನೆತ್ತಿ ನೋಡಲು ಅಗೋ, ಒಂಟೆಗಳು ಬರುತ್ತಿದ್ದವು.
64 ರೆಬೆಕ್ಕಳು ತನ್ನ ಕಣ್ಣುಗಳನ್ನೆತ್ತಿ ಇಸಾಕನನ್ನು ನೋಡಿ ದಾಗ ಒಂಟೆಯಿಂದ ಇಳಿದಳು.
65 ಆಕೆಯು ಆ ಸೇವಕನಿಗೆ–ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು–ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.
66 ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.
67 ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.

ಯೆಹೋಶುವ 1
1 ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ–
ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.
ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು.
ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್‌ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.
ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
10 ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ ಆಜ್ಞಾಪಿಸಿ–
11 ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ–ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು.
12 ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧಗೋತ್ರದವರಿಗೂ ಹೇಳಿದ್ದೇನಂದರೆ —
13 ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಕರ್ತನು ನಿಮ್ಮನ್ನು ವಿಶ್ರಾಂತಿಪಡಿಸಿ ನಿಮಗೆ ಈ ದೇಶವನ್ನು ಕೊಟ್ಟನು.
14 ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ
15 ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು.
16 ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ–ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು.
17 ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.
18 ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.

ಮತ್ತಾಯನು 6
1 ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ–ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.
ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ–ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ.
ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ–ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
10 ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
11 ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
12 ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
13 ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್‌.
14 ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
15 ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
16 ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ–ಅವರು ತಮ್ಮ ಪ್ರತಿ
17 ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.
18 ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

ಫಿಲಿಪ್ಪಿಯವರಿಗೆ 4
ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.

ಕೀರ್ತನೆಗಳು 1
1 ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.
ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.

ಕೀರ್ತನೆಗಳು 19
1 ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ.
ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ.
ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ.
ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.
ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.
10 ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
11 ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
12 ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
13 ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.
14 ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.

ಕೀರ್ತನೆಗಳು 49
1 ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ
ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು.
ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.
10 ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
11 ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
12 ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.
13 ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.
14 ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
15 ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
16 ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ.
17 ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
18 ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
19 ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.
20 ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.

ಕೀರ್ತನೆಗಳು 119
ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
10 ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
11 ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
12 ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು.
13 ನನ್ನ ತುಟಿಗಳಿಂದ ನಿನ್ನ ನ್ಯಾಯವಿಧಿಗಳನ್ನೆಲ್ಲಾ ಸಾರಿದ್ದೇನೆ.
14 ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
15 ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು.
16 ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.

ಕೀರ್ತನೆಗಳು 119
73 
ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
74 ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
75 ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
76 ನಿನ್ನ ಸೇವಕನಿಗೆ ನೀನು ಹೇಳಿದ ಮಾತಿನ ಪ್ರಕಾರ ನನ್ನನ್ನು ಆದರಿಸುವದಕ್ಕೆ ನಿನ್ನ ದಯಾಪೂರ್ಣ ಕರುಣೆ ಇರಲಿ.
77 ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
78 ಕಾರಣವಿಲ್ಲದೆ ನನಗೆ ಕೇಡು ಮಾಡಿದ ಕಾರಣ ಅಹಂಕಾರಿಗಳು ನಾಚಿಕೆಪಡಲಿ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡುವೆನು.
79 ನಿನಗೆ ಭಯಪಟ್ಟು ನಿನ್ನ ಸಾಕ್ಷಿಗಳನ್ನು ಬಲ್ಲವರು ನನ್ನ ಕಡೆಗೆ ತಿರುಗಲಿ.
80 ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.

ಕೀರ್ತನೆಗಳು 119
97 
ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
98 ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ.
99 ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ.
100 ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.
101 ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ.
102 ನಿನ್ನ ನ್ಯಾಯವಿಧಿಗಳಿಂದ ನಾನು ತೊಲಗಲಿಲ್ಲ; ನೀನು ನನ್ನನ್ನು ಬೋಧಿಸಿದ್ದೀ.
103 ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
104 ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ.

ಕೀರ್ತನೆಗಳು 77
10 ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;
11 ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು.
12 ನಿನ್ನ ಕೆಲಸವನ್ನೆಲ್ಲಾ ಸ್ಮರಿಸಿ ನಿನ್ನ ಕೃತ್ಯಗಳನ್ನು ಕುರಿತು ಮಾತನಾಡುವೆನು.
13 ಓ ದೇವರೇ, ನಿನ್ನ ಮಾರ್ಗವು ಪರಿಶುದ್ಧ ಆಲಯದಲ್ಲಿದೆ; ನಮ್ಮ ದೇವರಂತೆ ದೊಡ್ಡ ದೇವರು ಯಾರು?
14 ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ.
15 ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.

ಙ್ಞಾನೋಕ್ತಿಗಳು 4
20 ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು.
21 ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ.
22 ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
23 ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
24 ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು.
25 ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ.
26 ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.
27 ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.

 
 

Related Quiz Articles